AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gandhada Gudi: ಮಕ್ಕಳಿಗಾಗಿ 4 ದಿನ ‘ಗಂಧದ ಗುಡಿ’ ಟಿಕೆಟ್​ ಬೆಲೆ ಇಳಿಕೆ; ಎಲ್ಲೆಲ್ಲಿ ಎಷ್ಟು ದರ ಇರಲಿದೆ? ಇಲ್ಲಿದೆ ವಿವರ

Ashwini Puneeth Rajkumar: ನ.7ರಿಂದ ನ.10ರವರೆಗೆ ಒಟ್ಟು ನಾಲ್ಕು ದಿನಗಳ ಕಾಲ ಟಿಕೆಟ್​ ಬೆಲೆ ತಗ್ಗಿಸಲು ನಿರ್ಧರಿಸಲಾಗಿದೆ. ಈ ಕುರಿತು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

Gandhada Gudi: ಮಕ್ಕಳಿಗಾಗಿ 4 ದಿನ ‘ಗಂಧದ ಗುಡಿ’ ಟಿಕೆಟ್​ ಬೆಲೆ ಇಳಿಕೆ; ಎಲ್ಲೆಲ್ಲಿ ಎಷ್ಟು ದರ ಇರಲಿದೆ? ಇಲ್ಲಿದೆ ವಿವರ
ಗಂಧದ ಗುಡಿ ಸಾಕ್ಷ್ಯಚಿತ್ರದಲ್ಲಿ ಪುನೀತ್​ ರಾಜ್​ಕುಮಾರ್
TV9 Web
| Edited By: |

Updated on:Nov 06, 2022 | 7:58 PM

Share

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರ ಕನಸಿನ ಪ್ರಾಜೆಕ್ಟ್​ ಆದ ‘ಗಂಧದ ಗುಡಿ’ (Gandhada Gudi) ಸಾಕ್ಷ್ಯಚಿತ್ರಕ್ಕೆ ಎಲ್ಲರಿಂದ ಮೆಚ್ಚುಗೆ ಸಿಕ್ಕಿದೆ. ಅಕ್ಟೋಬರ್​ 28ರಂದು ರಿಲೀಸ್​ ಆದ ಈ ಡಾಕ್ಯುಮೆಂಟರಿ ಎಲ್ಲ ಕಡೆಗಳಲ್ಲಿ ಉತ್ತಮ ಪ್ರದರ್ಶನ ಕಂಡಿದೆ. ಎಲ್ಲ ವಯೋಮಾನದ ಪ್ರೇಕ್ಷಕರು ಕೂಡ ಇದಕ್ಕೆ ಮನ ಸೋತಿದ್ದಾರೆ. ಈ ಸಾಕ್ಷ್ಯಚಿತ್ರವನ್ನು ವಿಶೇಷವಾಗಿ ಮಕ್ಕಳು ನೋಡಬೇಕು ಎಂಬುದು ಪುನೀತ್​ ರಾಜ್​ಕುಮಾರ್ ಅವರ ಬಯಕೆ ಆಗಿತ್ತು. ಅನೇಕರಿಂದ ಇದೇ ಅಭಿಪ್ರಾಯ ಕೇಳಿಬಂದಿದೆ ಕೂಡ. ಹಾಗಾಗಿ ಮಕ್ಕಳಿಗೆ ಅನುಕೂಲ ಆಗುವ ರೀತಿಯಲ್ಲಿ ಇದರ ಟಿಕೆಟ್​ ಬೆಲೆಯನ್ನು (Gandhada Gudi Ticket Price) ಇಳಿಕೆ ಮಾಡಲಾಗಿದೆ. ಈ ಕುರಿತು ‘ಪಿಆರ್​ಕೆ ಪ್ರೊಡಕ್ಷನ್ಸ್​’ ವತಿಯಿಂದ ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ..

‘ಗಂಧದಗುಡಿ ಅಪ್ಪು ಅವರ ಒಂದು ಕನಸು. ಕರ್ನಾಟಕದ ವನ್ಯ ಸಂಪತ್ತು ಹಾಗೂ ಪ್ರಕೃತಿ ಸೌಂದರ್ಯವನ್ನು ಕನ್ನಡಿಗರಿಗೆ ಪರಿಚಯಿಸುವ ಅವರ ಹಂಬಲ ಈ ಸಿನಿಮಾ ರೂಪಗೊಳ್ಳಲು ಕಾರಣ. ಅಪ್ಪು ಅವರ ಉದ್ದೇಶ ಈ ಸಿನಿಮಾ ಎಲ್ಲ ಕನ್ನಡಿಗರು ನೋಡಬೇಕೆಂಬುದು. ಅದರಲ್ಲೂ ಮಕ್ಕಳು ನೋಡಬೇಕೆಂಬುದು. ಈ ಸಲುವಾಗಿ ನಮ್ಮ ಚಿತ್ರತಂಡ ಎಲ್ಲರೊಡನೆ ಚರ್ಚಿಸಿ ವಿತರಕರ ಹಾಗೂ ಪ್ರದರ್ಶಕರ ಸಹಕಾರದೊಂದಿಗೆ ಗಂಧದ ಗುಡಿಯನ್ನು 07-11-2022 ಸೋಮವಾರದಿಂದ 10-11-2022 ಗುರುವಾರದವರೆಗೂ ಸಿಂಗಲ್​ ಸ್ಕ್ರೀನ್​ ಥಿಯೇಟರ್​ಗಳಲ್ಲಿ 56 ರೂಪಾಯಿಗಳಿಗೆ ಹಾಗೂ ಮಲ್ಟಿಪ್ಲೆಕ್ಸ್​ಗಳಲ್ಲಿ 112 ರೂಪಾಯಿಗಳಿಗೆ ಕರ್ನಾಟಕ ರಾಜ್ಯಾದ್ಯಂತ ದಿನದ ಎಲ್ಲಾ ಆಟಗಳು ಪ್ರದರ್ಶನ ಮಾಡಬೇಕೆಂದು ನಿರ್ಧಾರ ಮಾಡಿದ್ದೇವೆ. ನಮ್ಮ ಮಕ್ಕಳ ನಾಳೆಗಳಿಗಾಗಿ ಕಾಡನ್ನು ಸಂರಕ್ಷಿಸೋಣ, ಗಂಧದಗುಡಿಯನ್ನು ತೋರಿಸೋಣ’ ಎಂದು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ
Image
Gandhada Gudi: ಗಳಗಳನೆ ಕಣ್ಣೀರು ಹಾಕಿದ ಅನುಶ್ರೀ; ‘ಗಂಧದ ಗುಡಿ’ಯಲ್ಲಿ ಅಪ್ಪು​ ನೋಡಿದ ಬಳಿಕ ನಿರೂಪಕಿ ಭಾವುಕ ಮಾತು
Image
Gandhada Gudi: ‘ಗಂಧದ ಗುಡಿ’ ಗೆಲುವಿಗೆ ಪ್ರಾರ್ಥನೆ; ದೊಡ್ಡ ಗಣಪತಿ ದೇವಸ್ಥಾನದಲ್ಲಿ ಟಿಕೆಟ್​ ಇಟ್ಟು ಅಮೋಘವರ್ಷ ಪೂಜೆ
Image
Gandhada Gudi: ರಿಲೀಸ್​ಗೂ ಮುನ್ನವೇ ದಾಖಲೆ ಬರೆದ ‘ಗಂಧದ ಗುಡಿ’: ಅಪ್ಪು ಕನಸನ್ನು ನನಸು ಮಾಡುತ್ತಿರುವ ಫ್ಯಾನ್ಸ್​
Image
Gandhada Gudi: ಅಂತೂ ಮೌನ ಮುರಿದ ಅಶ್ವಿನಿ ಪುನೀತ್​ ರಾಜ್​ಕುಮಾರ್​; ‘ಗಂಧದ ಗುಡಿ’ ಬಗ್ಗೆ ಇಲ್ಲಿದೆ ಮೊದಲ ಸಂದರ್ಶನ

ಅಮೋಘವರ್ಷ ನಿರ್ದೇಶನ ಮಾಡಿರುವ ‘ಗಂಧದ ಗುಡಿ’ ಚಿತ್ರವನ್ನು ಅನೇಕ ಗಣ್ಯರು ವೀಕ್ಷಿಸಿದ್ದಾರೆ. ಇತ್ತೀಚೆಗೆ ಇದನ್ನು ಕಣ್ತುಂಬಿಕೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಅವರು ತಮ್ಮ ಅನಿಸಿಕೆ ಹಂಚಿಕೊಂಡರು.

‘ಕರ್ನಾಟಕ ರತ್ನ ಪುನೀತ್ ರಾಜ್​ಕುಮಾರ್ ಅವರ ಗಂಧದ ಗುಡಿ ನಿಜಕ್ಕೂ ಶ್ಲಾಘನೀಯ ಚಲನಚಿತ್ರ. ಮಕ್ಕಳು, ಯುವಕರು ಹಿರಿಯರೆಲ್ಲರೂ ತಪ್ಪದೇ ನೋಡಬೇಕಾದ ಚಿತ್ರ. ನಾಡಿನ ವನ್ಯಸಂಪತ್ತಿನ ವೈವಿಧ್ಯತೆ, ವೈಭವಗಳನ್ನು ಮನಗಾಣಿಸುವ ಇಡೀ ತಂಡದ ಪ್ರಯತ್ನಕ್ಕೆ ಅಭಿನಂದನೆಗಳು’ ಎಂದು ಅವರು ಟ್ವೀಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:58 pm, Sun, 6 November 22

Follow Us
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
‘ದಸರಾದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದ ಪ್ರಮೋದಾದೇವಿ ಒಡೆಯರ್
‘ದಸರಾದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದ ಪ್ರಮೋದಾದೇವಿ ಒಡೆಯರ್
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ