AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಬರ ‘ಪ್ರೇಮಂ ಮಧುರಂ’ ಸಿನಿಮಾ ಟ್ರೇಲರ್ ಬಿಡುಗಡೆ

‘ಪ್ರೇಮಂ ಮಧುರಂ’ ಚಿತ್ರದಲ್ಲಿ ಗಾಂಧಿ ಎ.ಬಿ., ಐಶ್ವರ್ಯಾ ದಿನೇಶ್, ಅನುಷಾ ಜೈನ್ ಅವರು ಮುಖ್ಯ ಪಾತ್ರ ಮಾಡಿದ್ದಾರೆ. ಹೊಸ ಕಲಾವಿದರಿಗೆ ಅವಕಾಶ ನೀಡಬೇಕು ಎಂಬ ಸಲುವಾಗಿ ಅರಗೊಂಡ ಶೇಖರ್‌ ರೆಡ್ಡಿ ಅವರು ಈ ಸಿನಿಮಾ ನಿರ್ಮಿಸಿದ್ದಾರೆ. ಈಗ ಈ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಶೀಘ್ರದಲ್ಲೇ ಸಿನಿಮಾ ತೆರೆಕಾಣಿಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಹೊಸಬರ ‘ಪ್ರೇಮಂ ಮಧುರಂ’ ಸಿನಿಮಾ ಟ್ರೇಲರ್ ಬಿಡುಗಡೆ
Premam Madhuram Cast
ಮದನ್​ ಕುಮಾರ್​
|

Updated on: Nov 05, 2025 | 4:59 PM

Share

ಚಿತ್ರರಂಗಕ್ಕೆ ಹೊಸಬರ ಆಗಮನ ಆಗುತ್ತಲೇ ಇರುತ್ತದೆ. ಈಗ ಹೊಸಬರೇ ಸೇರಿಕೊಂಡು ‘ಪ್ರೇಮಂ ಮಧುರಂ’ (Premam Madhuram) ಸಿನಿಮಾವನ್ನು ಸಿದ್ಧಪಡಿಸಿದ್ದಾರೆ. ಇತ್ತೀಚೆಗೆ ಸಿನಿಮಾದ ಟ್ರೇಲರ್ (Trailer) ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ನಡೆಯಿತು. ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ಮಾಡಲಾಯಿತು. ‘ರೂಬಿ ಕ್ರಿಯೇಶನ್ಸ್’ ಬ್ಯಾನರ್ ಮೂಲಕ ಅರಗೊಂಡ ಶೇಖರ್‌ ರೆಡ್ಡಿ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಗಾಂಧಿ ಎ.ಬಿ. (Gandhi A B) ಅವರು ಸಿನಿಮಾಕ್ಕೆ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜೊತೆಗೆ ಹೀರೋ ಆಗಿಯೂ ನಟಿಸಿದ್ದಾರೆ.

ಈ ಸಿನಿಮಾಗೆ ಐಶ್ವರ್ಯಾ ದಿನೇಶ್ ಮತ್ತು ಅನುಷಾ ಜೈನ್ ಅವರು ನಾಯಕಿಯರಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಚಿತ್ರೀಕರಣದ ಅನುಭವ ಹಂಚಿಕೊಂಡರು. ಸಿಹಿಕಹಿ ಚಂದ್ರು, ಲಪಂಗ ರಾಜ, ರಾಜೇಶ್ವರಿ, ಅನೂಪ್ ಅಗಸ್ತ್ಯ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. 3 ಹಾಡುಗಳಿಗೆ ವಿಶಾಲ್ ಆಲಾಪ ಅವರು ಸಂಗೀತ ನೀಡಿದಾರೆ. ಮಂಜುನಾಥ ಹೆಗಡೆ ಅವರು ಛಾಯಾಗ್ರಹಣ ಮಾಡಿದ್ದಾರೆ. ಸಂಜೀವ್ ಜಾಗಿರ್‌ದಾರ್ ಅವರ ಸಂಕಲನ ಈ ಚಿತ್ರಕ್ಕಿದೆ.

ನಿರ್ದೇಶಕ, ನಟ ಗಾಂಧಿ ಎ.ಬಿ. ಅವರು ಸುದ್ದಿಗೋಷ್ಠಿಯಲ್ಲಿ ಮಾತಾಡಿದರು. ‘ಅನೇಕ ನಿರ್ದೇಶಕರ ಬಳಿ ಕೆಲಸ ಕಲಿತು, ಪೂನ ಫಿಲ್ಮ್ ಇನ್ಸಿಟ್ಯೂಟ್‌ನಲ್ಲಿ ತರಭೇತಿ ಪಡೆದಿದ್ದೇನೆ. ಯುವಜನತೆಗೆ ಈ ಸಿನಿಮಾ ಕನೆಕ್ಟ್ ಆಗುತ್ತದೆ. ಪ್ರತಿಯೊಬ್ಬರ ಬದುಕಲ್ಲಿ ಪ್ರೀತಿ ಯಶಸ್ಸು ಕಂಡಿರುತ್ತದೆ ಅಥವಾ ಸೋತಿರುತ್ತದೆ. ಅವರೆಲ್ಲರಿಗೂ ಇದು ಅನ್ವಯವಾಗುತ್ತದೆ. ಸ್ಕೂಲ್, ಕಾಲೇಜ್‌ನಲ್ಲಿ ನಾನು ಅನುಭವಿಸಿದ, ನೋಡಿದ ಒಂದಷ್ಟು ಅಂಶಗಳನ್ನು ಸಿನಿಮಾ ರೂಪಕ್ಕೆ ತರಲಾಗಿದೆ’ ಎಂದು ಅವರು ಹೇಳಿದರು.

‘ಪ್ರೇಮಂ ಮಧುರಂ’ ಸಿನಿಮಾದ ಟ್ರೇಲರ್:

‘3 ಹಂತಗಳಲ್ಲಿ ಪ್ರೀತಿ ಹೇಗಿರುತ್ತೆ ಎಂಬುದನ್ನು ತೋರಿಸಲಾಗಿದೆ. ಬೆಂಗಳೂರು, ಬೈಂದೂರು, ಮಂಗಳೂರು, ಉಡುಪಿ ಕಾಲ್ತೋಡು, ಮಲ್ಪೆ ಸುತ್ತಮುತ್ತ ಶೂಟಿಂಗ್ ನಡೆಸಲಾಗಿದೆ. ದುಡ್ಡು ಕೊಟ್ಟು ಬರುವ ಪ್ರೇಕ್ಷಕನಿಗೆ ಸಂಪೂರ್ಣ ಮನರಂಜನೆ ಸಿಗಲಿದೆ’ ಗಾಂಧಿ ಎ.ಬಿ. ಅವರು ಹೇಳಿದರು. ‘ಬಾಗೂರು ಟಾಕೀಸ್’ ಸಂಸ್ಥೆಯು ಶೀಘ್ರದಲ್ಲೇ ಈ ಸಿನಿಮಾವನ್ನು ಬಿಡುಗಡೆ ಮಾಡಲಿದೆ.

ಇದನ್ನೂ ಓದಿ: ‘ರುಕ್ಮಿಣಿ ರಾಧಾಕೃಷ್ಣ’ ಸಿನಿಮಾದಲ್ಲಿ ಬಿಗ್ ಬಾಸ್ ಮೋಕ್ಷಿತಾ, ಭರತ್ ಕುಮಾರ್, ರಿಯಾ

ನಿರ್ಮಾಪಕ ಅರಗೊಂಡ ಶೇಖೆರ್‌ ರೆಡ್ಡಿ ಮಾತನಾಡಿ, ‘ಹುಟ್ಟೂರು ತಿರುಪತಿ, ಬದುಕು ಕಂಡಿದ್ದು ಬೆಂಗಳೂರಿನಲ್ಲಿ. ಇಲ್ಲಿನ ಋಣ ತೀರಿಸಬೇಕು. ಕನಿಷ್ಠ 10 ಹುಡುಗರಿಗೆ ಬದುಕು ಕೊಡುವ ಸಲುವಾಗಿ ಸಿನಿಮಾ ಮಾಡಿದ್ದೇನೆ. ಚಿರಂಜೀವಿ ಅಪ್ಪಟ ಅಭಿಮಾನಿಯಾಗಿ ಅವರ ಮಾತಿನಂತೆ ನಡೆದುಕೊಂಡಿದ್ದೇನೆ. ಮಾತು ಕೊಡುವ ಮುಂಚೆ ನೀನು ಯಜಮಾನ. ಕೊಟ್ಟ ಮೇಲೆ ಗುಲಾಮ. ಅದರಂತೆ ನಡೆದುಕೊಳ್ಳುವುದು ಸೂಕ್ತ ಅಂತ ಮೆಗಾ ಸ್ಟಾರ್ ಮಾತನ್ನು ಪಾಲಿಸಿದ್ದೇನೆ’ ಎಂದು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ