AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಹಾರಾ’ ಚಿತ್ರದ ಹಾಡು ಬಿಡುಗಡೆ ಮಾಡಿದ ನಟ ಗಣೇಶ್​; ಜೂ.7ಕ್ಕೆ ಸಿನಿಮಾ ರಿಲೀಸ್

ಈ ವಾರ (ಜೂನ್​ 7) ‘ಸಹಾರಾ’ ಸಿನಿಮಾ ರಿಲೀಸ್​ ಆಗುತ್ತಿದೆ. ಇದರಲ್ಲಿ ಸಾರಿಕಾ ರಾವ್​ ಅವರು ಪ್ರಮುಖ ಪಾತ್ರ ನಿಭಾಯಿಸಿದ್ದಾರೆ. ಮಂಜೇಶ್ ಭಗವತ್ ಅವರು ನಿರ್ದೇಶನ ಮಾಡಿದ್ದಾರೆ. ಖ್ಯಾತ ನಟ ‘ಗೋಲ್ಡನ್​ ಸ್ಟಾರ್​’ ಗಣೇಶ್​ ಅವರು ‘ಸಹಾರಾ’ ಸಿನಿಮಾದ ಒಂದು ಹಾಡನ್ನು ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.

‘ಸಹಾರಾ’ ಚಿತ್ರದ ಹಾಡು ಬಿಡುಗಡೆ ಮಾಡಿದ ನಟ ಗಣೇಶ್​; ಜೂ.7ಕ್ಕೆ ಸಿನಿಮಾ ರಿಲೀಸ್
ಗೋಲ್ಡನ್​ ಸ್ಟಾರ್​ ಗಣೇಶ್​, ಸಾರಿಕಾ ರಾವ್​, ಮಂಜೇಶ್ ಭಗವತ್
ಮದನ್​ ಕುಮಾರ್​
|

Updated on: Jun 06, 2024 | 2:50 PM

Share

ಕೆಲವು ಕಾರಣಗಳಿಂದ ‘ಸಹಾರಾ’ ಸಿನಿಮಾ (Sahara Movie) ಮೇಲೆ ನಿರೀಕ್ಷೆ ಮೂಡಿದೆ. ಕನ್ನಡದ ಈ ಸಿನಿಮಾದಲ್ಲಿ ಕ್ರೀಡಾ ಆಧಾರಿತ ಕಥೆ ಇದೆ. ಜೂನ್ 7ರಂದು ಈ ಸಿನಿಮಾ ತೆರೆ ಕಾಣಲಿದೆ. ‘ಸಹಾರಾ’ ಸಿನಿಮಾದಲ್ಲಿ ಸಾರಿಕಾ ರಾವ್ (Sarika Rao) ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಇದು ಕನ್ನಡ ಚಿತ್ರರಂಗದಲ್ಲಿ ಒಂದು ಹೊಸ ಪ್ರಯತ್ನ ಎಂದರೆ ತಪ್ಪಿಲ್ಲ. ಯಾಕೆಂದರೆ, ‘ಸಹಾರಾ’ ಸಿನಿಮಾದಲ್ಲಿ ಮಹಿಳಾ ಕ್ರಿಕೆಟರ್​ ಕುರಿತಾದ ಕಥೆ ಇದೆ. ಸ್ಯಾಂಡಲ್​ವುಡ್​ನಲ್ಲಿ ಈ ರೀತಿಯ ವಸ್ತು ವಿಷಯ ಇಟ್ಟುಕೊಂಡ ಬಂದ ಮೊದಲ ಸಿನಿಮಾ ಇದು. ‘ಗೋಲ್ಡನ್ ಸ್ಟಾರ್’ ಗಣೇಶ್ (Golden Star Ganesh) ಅವರು ಈ ಸಿನಿಮಾದ ಹಾಡೊಂದನ್ನು ರಿಲೀಸ್​ ಮಾಡಿ, ಶುಭ ಕೋರಿದ್ದಾರೆ.

ಈ ಸಿನಿಮಾದ ಕಥೆಯ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ. ಮಂಡ್ಯದ ಹುಡುಗಿಯೊಬ್ಬಳು ಕ್ರಿಕೆಟ್ ಆಟಗಾರ್ತಿ ಆಗುವ‌ ಕನಸನ್ನು ಕಾಣುತ್ತಾಳೆ. ಆ ಕನಸನ್ನು ನನಸಾಗಿಸುವ ಪ್ರಯತ್ನದಲ್ಲಿ ಆಕೆಗೆ ಕೆಲವು ಅಡೆತಡೆಗಳು ಎದುರಾಗುತ್ತವೆ. ಅವುಗಳನ್ನು ಮೀರಿ‌ ಆಕೆ ಸಾಧನೆಯ ಮೆಟ್ಟಿಲು ಏರುತ್ತಾಳೆ. ಈ ಎಲ್ಲ ವಿವರಗಳನ್ನು ಎಳೆ ಎಳೆಯಾಗಿ ತೆರೆದಿಡಲಿದೆ ‘ಸಹಾರಾ’ ಸಿನಿಮಾ. ಆ ಕಾರಣದಿಂದ ಈ ಚಿತ್ರದ ಬಗ್ಗೆ ಸಿನಿ‌ಪ್ರೇಮಿಗಳಲ್ಲಿ ಕೌತುಕ ಮೂಡಿದೆ.

ಗಣೇಶ್​ ಬಿಡುಗಡೆ ಮಾಡಿದ ಸಾಂಗ್​ ಸದ್ದು ಮಾಡಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ. ‘ಸಹಾರಾ’ ಸಿನಿಮಾಗೆ ಮಂಜೇಶ್ ಭಗವತ್ ಅವರು ನಿರ್ದೇಶನ ಮಾಡಿದ್ದಾರೆ. ಅಂಕುಶ್ ರಜತ್ ಅವರು ವಿಲನ್​ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸೂರಜ್ ಜೋಯಿಸ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಆಂಟೊನಿ ರುತ್ ವಿನ್ಸೆಂಟ್ ಅವರು ಮುಖ್ಯ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ. ವಿಜಯ್ ಎಂ. ಕುಮಾರ್ ಅವರ ಸಂಕಲನ ಈ ಸಿನಿಮಾಗಿದೆ.

ಇದನ್ನೂ ಓದಿ: ಕನ್ನಡದ ‘ಸಹಾರಾ’ ಸಿನಿಮಾ ಟ್ರೇಲರ್​ ಬಿಡುಗಡೆ ಮಾಡಿದ ಕ್ರಿಕೆಟರ್​ ಕೃಷ್ಣಪ್ಪ ಗೌತಮ್

‘ಸಹಾರಾ’ ಸಿನಿಮಾಗೆ ಅನೇಕರ ಬೆಂಬಲ ಸಿಕ್ಕಿದೆ. ಈ ಮೊದಲು ಕ್ರಿಕೆಟರ್​ ಕೃಷ್ಣಪ್ಪ ಗೌತಮ್ ಅವರು ಈ ಚಿತ್ರದ ಟ್ರೇಲರ್​ ರಿಲೀಸ್​ ಮಾಡಿ ಶುಭ ಹಾರೈಸಿದ್ದರು. ಈ ಚಿತ್ರಕ್ಕೆ ಕಿಚ್ಚ ಸುದೀಪ್ ನಿರೂಪಣೆ ಮಾಡಿದ್ದಾರೆ. ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಡಿಜಿಟಲ್​ನಲ್ಲಿ ಟ್ರೇಲರ್​ ಅನಾವರಣ ಮಾಡಿದ್ದರು. ‘ಮಾ ಕ್ರಿಯೆಷನ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದ್ದು, ಎಂ. ಗೌಡ ಬಂಡವಾಳ ಹೂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್