ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’: ಮೈಸೂರಿನಲ್ಲಿ ಹಾಡು ಬಿಡುಗಡೆ

ಗೋಲ್ಡನ್ ಸ್ಟಾರ್ ಗಣೇಶ್ ನಟಿಸಿರುವ ರೊಮ್ಯಾಂಟಿಕ್, ಕೌಟುಂಬಿಕ ಸಿನಿಮಾ ‘ಕೃಷ್ಣಂ ಪ್ರಣಯಂ ಸಖಿ’ ಬಿಡುಗಡೆಗೆ ಸಜ್ಜಾಗಿದ್ದು, ಸಿನಿಮಾದ ಮೊದಲ ಹಾಡು ಮೈಸೂರಿನ ಮಾಲ್ ಆಫ್ ಮೈಸೂರಿನಲ್ಲಿ ಬಿಡುಗಡೆ ಆಗಲಿದೆ.

ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’: ಮೈಸೂರಿನಲ್ಲಿ ಹಾಡು ಬಿಡುಗಡೆ
ಗಣೇಶ್
Follow us
ಮಂಜುನಾಥ ಸಿ.
|

Updated on: May 23, 2024 | 10:45 PM

ಗೋಲ್ಡನ್ ಸ್ಟಾರ್ ಗಣೇಶ್ (Ganesh) ‘ಕೃಷ್ಣಂ ಪ್ರಣಯ ಸಖಿ’ ಹೆಸರಿನ ರೊಮ್ಯಾಂಟಿಕ್ ಕೌಟುಂಬಿಕ ಕತೆಯೊಂದಿಗೆ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಗಣೇಶ್ ನಟನೆಯ ‘ಬಾನದಾರಿಯಲ್ಲಿ’ ಸಿನಿಮಾ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಬಿಡುಗಡೆ ಆಗಿತ್ತು. ಇದೀಗ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾನಲ್ಲಿ ಗಣೇಶ್ ನಟಿಸಿದ್ದು, ಸಿನಿಮಾದ ಮೊದಲ ಹಾಡು ಮೈಸೂರಿನಲ್ಲಿ ಬಿಡುಗಡೆ ಆಗಲಿದೆ. ಗಣೇಶ್ ಸಿನಿಮಾದ ಹಾಡುಗಳು ತಮ್ಮ ಮಧುರತೆಯಿಂದ ಗಮನ ಸೆಳೆಯುತ್ತವೆ, ಈ ಸಿನಿಮಾದ ಹಾಡುಗಳು ಸಹ ಗಣೇಶ್​ರ ಹಿಟ್ ಹಾಡುಗಳ ಪಟ್ಟಿ ಸೇರುವ ಭರವಸೆ ಚಿತ್ರತಂಡದ್ದು.

ನಿರ್ದೇಶಕ ಶ್ರೀನಿವಾಸರಾಜು ‘ಕೃಷ್ಣ ಪ್ರಣಯ ಸಖಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಹಾಗೂ ಪೋಸ್ಟರ್ ಗಳು ಈಗಾಗಲೇ ಬಿಡುಗಡೆ ಆಗಿ ಮೆಚ್ಚುಗೆ ಗಳಿಸಿವೆ. ಇದೀಗ ಈ ಸಿನಿಮಾದ ಮೊದಲ ಹಾಡು ಮೇ 25 ರಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಅರ್ಜುನ್ ಜನ್ಯ ಈ ಸಿನಿಮಾಕ್ಕೆ ಸಂಗೀತ ನೀಡಿದ್ದು, ಸಿನಿಮಾದ ಆರು ಮಧುರವಾದ ಹಾಡುಗಳಿವೆ. ಮೇ 25ಕ್ಕೆ ಬಿಡುಗಡೆ ಆಗಲಿರುವ ಹಾಡನ್ನು ನಿಶಾನ್ ರಾಯ್ ಅವರು ಬರೆದಿದ್ದು, ಜನಪ್ರಿಯ ಗಾಯಕ ಚಂದನ್ ಶೆಟ್ಟಿ ಹಾಡಿದ್ದಾರೆ. ಹಾಡು ಸಾಂಸ್ಕೃತಿಕ ನಗರಿ ಮೈಸೂರಿನ “ಮಾಲ್ ಆಫ್ ಮೈಸೂರಿನಲ್ಲಿ” ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಮೈಸೂರಿನಲ್ಲಿ ಮೊದಲ ಹಾಡು ಬಿಡುಗಡೆ ಮಾಡುವುದರ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ ಸಹ ನೀಡಲಾಗುತ್ತಿದೆ.

ಇದನ್ನೂ ಓದಿ:ಅನಿಲ್ ಕುಂಬ್ಳೆ ಆತಿಥ್ಯಕ್ಕೆ ಮನಸೋತ ಗೋಲ್ಡನ್ ಸ್ಟಾರ್ ಕುಟುಂಬ

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಅಡಿಯಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ವಿಯೆಟ್ನಾಂ ಸೇರಿದಂತೆ ಹಲವು ಸುಂದರವಾದ ತಾಣಗಳಲ್ಲಿ ಚಿತ್ರತಂಡ ಚಿತ್ರೀಕರಣ ಮಾಡಿದೆ. ಸದ್ಯದಲ್ಲೇ ಸಿನಿಮಾವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ‌.

“ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ನಟಿಸಿರುವ 41 ನೇ ಸಿನಿಮಾ. ಗಣೇಶ್ ಎದುರು ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ