ಅದ್ಧೂರಿಯಾಗಿ ಬಿಡುಗಡೆ ಆಗಲಿದೆ ‘ಗರಡಿ’ ಟ್ರೈಲರ್: ಎಲ್ಲಿ? ಎಂದು? ಬಿಡುಗಡೆ ಮಾಡುವರ್ಯಾರು?

|

Updated on: Oct 28, 2023 | 10:35 PM

Garadi Movie: ಯೋಗರಾಜ್ ಭಟ್ ನಿರ್ದೇಶನದ 'ಗರಡಿ' ಸಿನಿಮಾ ಹಲವು ಕಾರಣಗಳಿಗೆ ನಿರೀಕ್ಷೆ ಹುಟ್ಟಿಸಿದೆ. ಸಿನಿಮಾದ ಟ್ರೇಲರ್ ನವೆಂಬರ್ 1ರಂದು ಅದ್ಧೂರಿಯಾಗಿ ಬಿಡುಗಡೆ ಆಗಲಿದೆ. ಎಲ್ಲಿ? ಯಾರು ಬಿಡುಗಡೆ ಮಾಡಲಿದ್ದಾರೆ? ಇಲ್ಲಿದೆ ಮಾಹಿತಿ.

ಅದ್ಧೂರಿಯಾಗಿ ಬಿಡುಗಡೆ ಆಗಲಿದೆ ಗರಡಿ ಟ್ರೈಲರ್: ಎಲ್ಲಿ? ಎಂದು? ಬಿಡುಗಡೆ ಮಾಡುವರ್ಯಾರು?
ಗರಡಿ
Follow us on

ಯೋಗರಾಜ್ ಭಟ್ (Yogaraj Bhatt) ನಿರ್ದೇಶನದ ‘ಗರಡಿ‘ (Garadi) ಸಿನಿಮಾ ಹಲವು ಕಾರಣಗಳಿಗೆ ನಿರೀಕ್ಷೆ ಹುಟ್ಟಿಸಿದೆ. ಈ ಸಿನಿಮಾವು ಪೈಲ್ವಾನ್​ಗಿರಿ, ಕುಸ್ತಿ ಅಖಾಡೆಯ ಕತೆಯನ್ನು ಒಳಗೊಂಡಿದೆ. ಅದರೊಳಗೆ ಒಂದು ಮುಗ್ಧ ಪ್ರೇಮಕತೆಯೂ ಇದೆ. ಸಿನಿಮಾದಲ್ಲಿ ಬಿಸಿ ಪಾಟೀಲ್ ಹಾಗೂ ನಟ ದರ್ಶನ್ ಅವರುಗಳು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವುಗಳ ಜೊತೆಗೆ ಪ್ರೇಮ-ಹಾಸ್ಯವನ್ನಷ್ಟೆ ತಮ್ಮ ಕತೆಗಳಲ್ಲಿ ಮೂಲ ದ್ರವ್ಯವಾಗಿ ಬಳಸುತ್ತಿದ್ದ ಭಟ್ಟರು ‘ಗರಡಿ’ ಸಿನಿಮಾದಲ್ಲಿ ಆಕ್ಷನ್ ಅನ್ನು ಹೇಗೆ ಬಳಸಿದ್ದಾರೆ ಎಂಬುದನ್ನು ನೋಡುವ ಕುತೂಹಲ ಸಿನಿಮಾ ಪ್ರೇಮಿಗಳಿಗಿದೆ.

‘ಗರಡಿ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಸಂಜೆ 6.30ಕ್ಕೆ ರಾಣಿಬೆನ್ನೂರಿನ ಮುನ್ಸಿಪಲ್ ಗ್ರೌಂಡ್ ನಲ್ಲಿ ಅದ್ಧೂರಿಯಾಗಿ ನೆರವೇರಲಿದೆ. ಸಮಾರಂಭಕ್ಕೆ ತಯಾರಿ ಜೋರಾಗಿ ನಡೆಯುತ್ತಿದೆ. ಕಾರ್ಯಕ್ರಮಕ್ಕೆ ಹಲವು ಅತಿಥಿಗಳ ಆಗಮನ ಆಗಲಿದೆ. ಸಿನಿಮಾದ ಟ್ರೇಲರ್ ಅನ್ನು ಸ್ಟಾರ್ ನಟ ದರ್ಶನ್ ಬಿಡುಗಡೆ ಮಾಡಲಿದ್ದಾರೆ‌. ನಿರ್ಮಾಪಕ ಬಿಸಿ ಪಾಟೀಲ್, ನಿರ್ದೇಶಕ ಯೋಗರಾಜ್ ಭಟ್ ಹಾಗೂ ಕೆಲವು ಸ್ಥಳೀಯ ರಾಜಕಾರಣಿಗಳು ಸಹ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಇದನ್ನೂ ಓದಿ:‘ಗರಡಿ’ ಸಿನಿಮಾ ಪ್ರಮೋಷನ್​ಗೆ ಯೋಗರಾಜ್ ಭಟ್ ಪ್ರಕಟಿಸಿದರು ಹೊಸ ನ್ಯೂಸ್ ಪೇಪರ್

ಸಿನಿಮಾದ ಹಾಡೊಂದು ಇತ್ತೀಚೆಗೆ ಬಿಡಗುಡೆ ಆಗಿ ಸಖತ್ ವೈರಲ್ ಆಗಿದೆ. ಸೌಮ್ಯ ಫಿಲಂಸ್ ಹಾಗೂ ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿರುವ ಈ ಸಿನಿಮಾಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ. ನಿರಂಜನ್ ಬಾಬು ಛಾಯಾಗ್ರಹಣ ಹಾಗೂ ಸುರೇಶ್ ಅರಸ್ ಅವರ ಸಂಕಲನವಿರುವ “ಗರಡಿ” ಚಿತ್ರದ ಕಾರ್ಯಕಾರಿ ನಿರ್ಮಾಪಕರು ಸೃಷ್ಟಿ ಪಾಟೀಲ್. ಇತ್ತೀಚಿಗೆ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಇಲ್ಲದೆ ಯು/ಎ ಪ್ರಮಾಣ ಪತ್ರ ನೀಡಿದೆ. ‘ಗರಡಿ’ ನವೆಂಬರ್ 10 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಸಿನಿಮಾದಲ್ಲಿ ನಾಯಕ ನಟನಾಗಿ ಸೂರ್ಯ ನಟಿಸಿದ್ದಾರೆ. ಸೋನಾಲ್ ಮೊಂತೆರೊ ಸಿನಿಮಾದ ನಾಯಕಿ, ಬಿ.ಸಿ.ಪಾಟೀಲ್, ರವಿಶಂಕರ್, ಧರ್ಮಣ್ಣ, ಸುಜಯ್ ಬೇಲೂರ್, ರಾಘವೇಂದ್ರ, ಚೆಲುವರಾಜ್, ಬಲ ರಾಜವಾಡಿ, ತೇಜಸ್ವಿನಿ ಪ್ರಕಾಶ್, ನಯನ ಮುಂತಾದವರು “ಗರಡಿ” ಚಿತ್ರದ ತಾರಾಬಳಗದಲ್ಲಿದ್ದಾರೆ. ನಿಶ್ವಿಕಾ ನಾಯ್ಡು ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ನಟ ದರ್ಶನ್ ಸಹ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ