AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗರುಡ ಪುರಾಣ’ ಟೀಸರ್ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್

Garuda Purana: ಮರ್ಡರ್ ಮಿಸ್ಟರ್ ಕತೆಯುಳ್ಳ 'ಗರುಡ ಪುರಾಣ' ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಸಿನಿಮಾದ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

'ಗರುಡ ಪುರಾಣ' ಟೀಸರ್ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್
ಗರುಡ ಪುರಾಣ
ಮಂಜುನಾಥ ಸಿ.
|

Updated on: Sep 26, 2023 | 8:54 PM

Share

ಒಟಿಟಿಗಳ (OTT) ಮೂಲಕ ಕಂಟೆಂಟ್ ವೀಕ್ಷಣೆ ಹೆಚ್ಚಾದಷ್ಟು, ಹೆಚ್ಚು ಹೆಚ್ಚು ಥ್ರಿಲ್ಲರ್, ಮರ್ಡರ್ ಮಿಸ್ಟರಿ ಕತೆಗಳು ಬರಲಾರಂಭಿಸಿವೆ. ಒಟಿಟಿಗಳಲ್ಲಿಯಂತೂ ಮರ್ಡರ್ ಮಿಸ್ಟರಿ ಸಿನಿಮಾ, ವೆಬ್ ಸರಣಿಗಳು ತುಂಬಿ ಹೋಗಿವೆ. ಈಗ ಕನ್ನಡದಲ್ಲಿ ಮತ್ತೊಂದು ಮರ್ಡರ್ ಮಿಸ್ಟರಿ ಸಿನಿಮಾ ತೆರೆಗೆ ಬರಲು ಸಜ್ಜಾಗಿದ್ದು, ಸಿನಿಮಾದ ಹೆಸರು ‘ಗರುಡ ಪುರಾಣ’. ಸಿನಿಮಾದ ಟೀಸರ್ ಅನ್ನು ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಇತ್ತೀಚೆಗೆ ಬಿಡುಗಡೆ ಮಾಡಿದ್ದಾರೆ.

ಸಿಂಧು ಕೆ.ಎಂ ಮತ್ತು ಬಿ.ಎಲ್ ಯೋಗೇಶ್ ಕುಮಾರ್ ಅವರುಗಳು 27 ಫ್ರೇಮ್ ಕ್ರಿಯೇಷನ್ಸ್ ನಿರ್ಮಾಣ ಸಂಸ್ಥೆಯ ಮೂಲಕ ‘ಗರುಡ ಪುರಾಣ’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಮಂಜುನಾಥ್ ಬಿ ನಾಗಬಾ ಕತೆ, ಚಿತ್ರಕಥೆ ರಚಿಸಿ ನಿರ್ದೇಶನ ಮಾಡಿದ್ದಾರೆ. ಸಂಕಲನದ ಜವಾಬ್ದಾರಿಯನ್ನು ಅವರೇ ನಿರ್ವಹಿಸಿದ್ದಾರೆ. ಇತ್ತೀಚೆಗಷ್ಟೆ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮವನ್ನು ಚಿತ್ರತಂಡ ಆಯೋಜಿಸಿತ್ತು. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್, ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಇದನ್ನೂ ಓದಿ:ಗಮನ ಸೆಳೆಯುತ್ತಿದೆ ಅಲೆಕ್ಸಾ ಟೀಸರ್: ಖಡಕ್ ಪಾತ್ರದಲ್ಲಿ ಅದಿತಿ ಪ್ರಭುದೇವ

ತಮ್ಮ ಬಗ್ಗೆ ಹಾಗೂ ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ಮಂಜುನಾಥ್ ನಾಗಬಾ, ”ಕಾಂತಾರ” ಸೇರಿದಂತೆ ಒಟ್ಟು 18 ಸಿನಿಮಾಗಳಿಗೆ ಆನ್ ಲೈನ್ ಎಡಿಟರ್ ಆಗಿ ಕೆಲಸ ಮಾಡಿದ್ದೇನೆ. “ಕಾಂತಾರ” ಸಿನಿಮಾ ನನಗೆ ಒಳ್ಳೆಯ ಗುರುತು ತಂದುಕೊಟ್ಟ ಸಿನಿಮಾ. ರಿಷಬ್ ಶೆಟ್ಟಿ ಅವರಿಗೆ ಋಣಿಯಾಗಿರುತ್ತೇನೆ. ಈಗ ನಿರ್ದೇಶಿಸಿರುವ “ಗರುಡ ಪುರಾಣ” ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇ ಬೇಕು ಎಂಬ ಅಂಶ ನಮ್ಮ ಸಿನಿಮಾದಲ್ಲಿದೆ. ಹಾಗಾಗಿಯೇ “ಗರುಡ ಪುರಾಣ” ಎಂದು ಸಿನಿಮಾಕ್ಕೆ ಟೈಟಲ್ ನೀಡಿದ್ದೇವೆ‌. ಸಿನಿಮಾದ ಕತೆ ಮೂರು ಆಯಾಮಗಳಲ್ಲಿ ನಡೆಯುತ್ತದೆ. ಸಿನಿಮಾದ ಶೂಟಿಂಗ್ ಮುಗಿದಿದೆ. ಬಿಡುಗಡೆಗೆ ತಯಾರಾಗಿದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಹಾಗೂ ನಮಗೆ ಮೊದಲಿನಿಂದಲೂ ಪ್ರೋತ್ಸಾಹ ನೀಡುತ್ತಿರುವ ರಾಜು ಗೌಡ ಹಾಗೂ ತಿಪ್ಪರಾಜು ಅವರಿಗೆ ಧನ್ಯವಾದ ಎಂದರು. ಸಿನಿಮಾದ ನಾಯಕನಾಗಿಯೂ ಮಂಜುನಾಥ್ ನಟಿಸಿದ್ದಾರೆ.

ಸಿನಿಮಾದಲ್ಲಿ ನಾಯಕಿಯಾಗಿ ದಿಶಾ ಶೆಟ್ಟಿ ನಟಿಸಿದ್ದಾರೆ. “ಭಜರಂಗಿ” ಖ್ಯಾತಿಯ ಚೆಲುವರಾಜು ಸಹ ಸಿನಿಮಾದಲ್ಲಿದ್ದಾರೆ.  ಸಿನಿಮಾದ ಟೀಸರ್ ಕುತೂಹಲಕಾರಿಯಾಗಿದೆ. ಒಬ್ಬರ ಹಿಂದೊಬ್ಬರಂತೆ ಯುವತಿಯರು ಕಾಣೆಯಾಗುತ್ತಿರುತ್ತಾರೆ. ಅವರನ್ನು ಯಾರೋ ಅಪಹರಿಸಿ ಕೊಲೆ ಮಾಡುತ್ತಿರುತ್ತಾರೆ. ಈ ಕೊಲೆಗಳ ರಹಸ್ಯವನ್ನು ಬೇದಿಸಲು ಪೊಲೀಸರು ಯತ್ನಿಸುತ್ತಿರುತ್ತಾರೆ. ಈ ಕೊಲೆಗಳನ್ನು ಯಾರು ಮಾಡುತ್ತಿದ್ದಾರೆ, ಯಾಕೆ ಮಾಡುತ್ತಿದ್ದಾರೆ? ಅವರ ಉದ್ದೇಶವೇನು? ಯಾಕೆ ನಿರ್ದಿಷ್ಟ ಯುವತಿಯರನ್ನೇ ಕೊಲೆ ಮಾಡಲು ಆರಿಸಿಕೊಳ್ಳುತ್ತಿದ್ದಾರೆ ಎಂಬುದೇ ಸಿನಿಮಾದ ಕತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ