ಹೊಸ ಸಿನಿಮಾ ಘೋಷಿಸಿದ ‘ಗಟ್ಟಿಮೇಳ’ ರಕ್ಷ್; ‘ಜೆಮ್ಸ್’ ಖ್ಯಾತಿಯ ಚೇತನ್ ನಿರ್ದೇಶನದಲ್ಲಿ ‘ಬರ್ಮ’  

ಕೆಲ ಸಿನಿಮಾಗಳು ಶೀರ್ಷಿಕೆಯ ಮೂಲಕ ಗಮನ ಸೆಳೆಯುತ್ತವೆ. ‘ಬರ್ಮ’ ಚಿತ್ರದ ಟೈಟಲ್ ಕೂಡ ಕುತೂಹಲ ಮೂಡಿಸಿದೆ. ‘ಬರ್ಮ’ ಎಂದರೆ ಬ್ರಹ್ಮ ವಾಸಿಸುವ ಜಾಗ ಎಂದು ತಂಡ ತಿಳಿಸಿದೆ. ಚೇತನ್ ಕುಮಾರ್ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇರುತ್ತದೆ. ಈ ಚಿತ್ರದಲ್ಲೂ ಅದು ಮುಂದುವರಿಯಲಿದೆ.

ಹೊಸ ಸಿನಿಮಾ ಘೋಷಿಸಿದ ‘ಗಟ್ಟಿಮೇಳ’ ರಕ್ಷ್; ‘ಜೆಮ್ಸ್’ ಖ್ಯಾತಿಯ ಚೇತನ್ ನಿರ್ದೇಶನದಲ್ಲಿ ‘ಬರ್ಮ’  
ರಕ್ಷ್ ರಾಮ್-ಚೇತನ್
Follow us
ರಾಜೇಶ್ ದುಗ್ಗುಮನೆ
|

Updated on: Aug 25, 2023 | 12:03 PM

ನಟ ಚೇತನ್ ಕುಮಾರ್ (Chetan Kumar) ಅವರು ಭರವಸೆಯ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ‘ಬಹದ್ದೂರ್’, ‘ಭರ್ಜರಿ’, ‘ಭರಾಟೆ’ ಮತ್ತಯ ‘ಜೇಮ್ಸ್’ (James Movie) ಚಿತ್ರಗಳು ಇವರ ನಿರ್ದೇಶನದಲ್ಲಿ ಮೂಡಿ ಬಂದಿವೆ. ಪುನೀತ್ ಹೀರೋ ಆಗಿ ನಟಿಸಿದ ಕೊನೆಯ ಚಿತ್ರ ಎನ್ನುವ ಕಾರಣಕ್ಕೆ ‘ಜೇಮ್ಸ್’ ಭರ್ಜರಿ ನಿರೀಕ್ಷೆ ಮೂಡಿಸಿತ್ತು. ಈ ಸಿನಿಮಾ ರಿಲೀಸ್ ಆದ ಬಳಿಕ ಚೇತನ್ ಅವರು ಬ್ರೇಕ್ ಪಡೆದಿದ್ದರು. ಈಗ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ಈ ಚಿತ್ರಕ್ಕೆ ‘ಬರ್ಮ’ ಎನ್ನುವ ಶೀರ್ಷಿಕೆ ಇಡಲಾಗಿದೆ. ಈ ಚಿತ್ರಕ್ಕೆ ‘ಗಟ್ಟಿಮೇಳ’ ಖ್ಯಾತಿಯ ರಕ್ಷ್ ರಾಮ್ ನಾಯಕ.

ಕೆಲ ಸಿನಿಮಾಗಳು ಶೀರ್ಷಿಕೆಯ ಮೂಲಕ ಗಮನ ಸೆಳೆಯುತ್ತವೆ. ‘ಬರ್ಮ’ ಚಿತ್ರದ ಟೈಟಲ್ ಕೂಡ ಕುತೂಹಲ ಮೂಡಿಸಿದೆ. ‘ಬರ್ಮ’ ಎಂದರೆ ಬ್ರಹ್ಮ ವಾಸಿಸುವ ಜಾಗ ಎಂದು ತಂಡ ತಿಳಿಸಿದೆ. ಚೇತನ್ ಕುಮಾರ್ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇರುತ್ತದೆ. ಈ ಚಿತ್ರದಲ್ಲೂ ಅದು ಮುಂದುವರಿಯಲಿದೆ. ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿ ಬರುತ್ತಿದೆ ಅನ್ನೋದು ವಿಶೇಷ. ವಿ. ಹರಿಕೃಷ್ಣ ಅವರ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಈ ಮೊದಲು ಚೇತನ್ ಹಾಗೂ ಹರಿಕೃಷ್ಣ ಅವರು ‘ಬಹದ್ದೂರ್’ ಹಾಗೂ ‘ಭರ್ಜರಿ’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಮೂರನೇ ಬಾರಿಗೆ ಈ ಜೋಡಿ ಒಂದಾಗಿದೆ.

ಇಂದು (ಆಗಸ್ಟ್​ 25) ವರಮಹಾಲಕ್ಷ್ಮಿ ಹಬ್ಬ. ಈ ವಿಶೇಷ ದಿನದಂದು ಚಿತ್ರ ಅನೌನ್ಸ್ ಮಾಡಲಾಗಿದೆ. ಅಚ್ಚರಿಯ ವಿಚಾರ ಎಂದರೆ ಸಿನಿಮಾ ಘೋಷಣೆ ಆದ ದಿನವೇ ಚಿತ್ರದ ಆಡಿಯೋ ಹಕ್ಕು ಭಾರೀ ಮೊತ್ತಕ್ಕೆ ಮಾರಾಟವಾಗಿದೆ. ಈ ಮೊದಲು ‘ಜೇಮ್ಸ್’ ಸಿನಿಮಾನ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡಲಾಗಿತ್ತು. ಈಗ ‘ಬರ್ಮ’ ಕೂಡ ಕನ್ನಡ ಸೇರಿ ಇತರ ಭಾಷೆಗಳಲ್ಲೂ ರಿಲೀಸ್ ಆಗಲಿದೆ.

ಇದನ್ನೂ ಓದಿ: ಹೊರಬಿತ್ತು ಧಾರಾವಾಹಿ ಟಿಆರ್​ಪಿ ಲಿಸ್ಟ್​; ‘ಗಟ್ಟಿಮೇಳ’-‘ಸೀತಾ ರಾಮ’ ಮಧ್ಯೆ ಭರ್ಜರಿ ಸ್ಪರ್ಧೆ

ಸೆಪ್ಟೆಂಬರ್ ತಿಂಗಳಿಂದ ಸಿನಿಮಾದ ಶೂಟಿಂಗ್ ಶುರುವಾಗಲಿದೆ. ಸದ್ಯ ಹೀರೋನ ಪರಿಚಯವನ್ನು ಮಾತ್ರ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಪಾತ್ರವರ್ಗದ ಬಗ್ಗೆ ಹೆಚ್ಚಿನ ಮಾಹಿತಿ ರಿವೀಲ್ ಆಗಲಿದೆ. ರಕ್ಷ್ ರಾಮ್ ಅವರು ಈ ಮೊದಲು ‘ನರಗುಂದ ಬಂಡಾಯ’ ಚಿತ್ರದಲ್ಲಿ ಬಣ್ಣ ಹಚ್ಚಿದ್ದರು. ಸದ್ಯ ಅವರು ‘ಗಟ್ಟಿಮೇಳ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹೊಸ ವಾಹನ ಖರೀದಿ ಯಾವ ದಿನ, ಹೇಗೆ ಮಾಡಬೇಕು? ಇಲ್ಲಿದೆ ಜ್ಯೋತಿಷ್ಯ ಸಲಹೆ
ಹೊಸ ವಾಹನ ಖರೀದಿ ಯಾವ ದಿನ, ಹೇಗೆ ಮಾಡಬೇಕು? ಇಲ್ಲಿದೆ ಜ್ಯೋತಿಷ್ಯ ಸಲಹೆ
Daily Horoscope: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಲಾಭವಾಗಲಿದೆ
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ