Genelia D’Souza: ಸಿಇಒ ಪಾತ್ರದಲ್ಲಿ ನಟಿ ಜೆನಿಲಿಯಾ ಡಿಸೋಜಾ​; ಕಿರೀಟಿ ಸಿನಿಮಾ ಬಗ್ಗೆ ಕೇಳಿಬಂತು ಸ್ಪೆಷಲ್​ ನ್ಯೂಸ್​

Genelia Deshmukh: ಜೆನಿಲಿಯಾ ಡಿಸೋಜಾ ಅವರಿಗೆ ಇದು ಕಮ್​ಬ್ಯಾಕ್​ ಸಿನಿಮಾ. ಹಾಗಾಗಿ ಅವರ ಪಾತ್ರದ ಬಗ್ಗೆ ಅಭಿಮಾನಿಗಳು ಕುತೂಹಲ ಇಟ್ಟುಕೊಂಡಿದ್ದಾರೆ.

Genelia D'Souza: ಸಿಇಒ ಪಾತ್ರದಲ್ಲಿ ನಟಿ ಜೆನಿಲಿಯಾ ಡಿಸೋಜಾ​; ಕಿರೀಟಿ ಸಿನಿಮಾ ಬಗ್ಗೆ ಕೇಳಿಬಂತು ಸ್ಪೆಷಲ್​ ನ್ಯೂಸ್​
ಜೆನಿಲಿಯಾ ಡಿಸೋಜಾ
Follow us
TV9 Web
| Updated By: ಮದನ್​ ಕುಮಾರ್​

Updated on: Jun 19, 2022 | 1:06 PM

ಒಂದು ಕಾಲದಲ್ಲಿ ಸಿಕ್ಕಾಪ ಟ್ಟೆ ಬ್ಯುಸಿ ಆಗಿದ್ದ ನಟಿ ಜೆನಿಲಿಯಾ ಡಿಸೋಜಾ​ ಅವರು ಮದುವೆ ನಂತರ ನಟನೆಯಿಂದ ಕೊಂಚ ಅಂತರ ಕಾಯ್ದುಕೊಂಡರು. ಈಗ ಅವರು ಪತಿ ರಿತೇಶ್​ ದೇಶಮುಖ್​ ಜೊತೆ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಬಹಳ ವರ್ಷಗಳ ಬಳಿಕ ಅವರು ಮತ್ತೆ ಕನ್ನಡ ಸಿನಿಮಾದಲ್ಲಿ ನಟಿಸುತ್ತಿರುವುದು ವಿಶೇಷ. ಈಗಾಗಲೇ ತಿಳಿದಿರುವಂತೆ ಗಾಲಿ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ (Kireeti Reddy) ನಟನೆಯ ಚೊಚ್ಚಲ ಚಿತ್ರದಲ್ಲಿ ಜೆನಿಲಿಯಾ ಡಿಸೋಜಾ (Genelia D’Souza) ಅವರು ಬಣ್ಣ ಹಚ್ಚುತ್ತಿದ್ದಾರೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳು ಖುಷಿ ಆಗಿರುವುದಂತೂ ನಿಜ. ಈ ಸಿನಿಮಾ ಏಕಕಾಲಕ್ಕೆ ಕನ್ನಡ ಮತ್ತು ತೆಲುಗಿನಲ್ಲಿ ಸಿದ್ಧವಾಗುತ್ತಿದೆ. ಈ ಚಿತ್ರದಲ್ಲಿ ಜೆನಿಲಿಯಾ (Genelia Deshmukh) ಅವರ ಪಾತ್ರ ಏನು ಎಂಬ ಬಗ್ಗೆಯೂ ಮಾಹಿತಿ ಕೇಳಿಬಂದಿದೆ. ಕಂಪನಿಯೊಂದರ ಸಿಇಒ ಪಾತ್ರವನ್ನು ಅವರು ನಿಭಾಯಿಸುತ್ತಿದ್ದಾರೆ ಎನ್ನಲಾಗಿದೆ.

ಹಿಂದಿ, ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡದ ಸಿನಿಮಾಗಳಲ್ಲಿ ನಟಿಸಿರುವ ಜೆನಿಲಿಯಾ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಮೊದಲಿನಂತೆಯೇ ಅವರು ಮತ್ತೆ ನಟನೆಯಲ್ಲಿ ಸಕ್ರಿಯರಾಗಬೇಕು ಎಂಬುದು ಅವರ ಅಭಿಮಾನಿಗಳ ಆಸೆ. ಬಹುವರ್ಷಗಳ ಬಳಿಕ ಅವರು ಕಿರೀಟಿ ನಟನೆಯ ಸಿನಿಮಾ ಮೂಲಕ ತೆಲುಗು ಮತ್ತು ಕನ್ನಡದ ಪ್ರೇಕ್ಷಕರನ್ನು ರಂಜಿಸಲಿರುವುದರಿಂದ ಈ ಚಿತ್ರದ ಬಗ್ಗೆ ಸಹಜವಾಗಿಯೇ ಅಭಿಮಾನಿಗಳ ವಲಯದಲ್ಲಿ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ: ಈ ಅಸಭ್ಯ ಆಂಟಿ ತುಂಬಾನೇ ಓವರ್​ ಆ್ಯಕ್ಟಿಂಗ್​ ಎಂದ ಫ್ಯಾನ್​ಗೆ ಜೆನಿಲಿಯಾ ಡಿಸೋಜಾ ಕೊಟ್ರು ಸೈಲೆಂಟ್​ ಉತ್ತರ

ಇದನ್ನೂ ಓದಿ
Image
ರಂಗುರಂಗಿನ ದಿರಿಸಿನಲ್ಲಿ ಜೆನಿಲಿಯಾ ಡಿಸೋಜ ಚೆಂಗುಲಾಬಿಯಂತೆ ಕಾಣುತ್ತಾರೆ, ವಿಡಿಯೋ ನೋಡಿ ಮರುಳಾಗ್ತೀರಾ!!
Image
Salman Khan: ಬರ್ತ್​​​​ಡೇ ಪಾರ್ಟಿಯಲ್ಲಿ ಸಲ್ಮಾನ್- ಜೆನಿಲಿಯಾ ಭರ್ಜರಿ ಡಾನ್ಸ್; ವೈರಲ್ ವಿಡಿಯೋ ಇಲ್ಲಿದೆ
Image
ಜೆನಿಲಿಯಾ ರಿತೇಶ್​ ದಂಪತಿಗೆ ಸುದೀಪ್​ ಪ್ರೀತಿಯ ವಿಶ್​; ಹೊಸ ಕಾರ್ಯಕ್ಕೆ ಕಿಚ್ಚನ ಪ್ರೋತ್ಸಾಹ
Image
13 ವರ್ಷಗಳ ಹಿಂದೆ ಜೆನಿಲಿಯಾ ಕೆನ್ನೆಗೆ ಹೊಡೆದಿದ್ದ ಆಯಾಜ್; ಕೊನೆಗೂ ಸೇಡು ತೀರಿಸಿದ ರಿತೇಶ್: ತಮಾಷೆಯ ವಿಡಿಯೋ ನೋಡಿ

ಕಿರೀಟಿಗೆ ಜೋಡಿಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಒಂದು ರೀತಿಯಲ್ಲಿ ಜೆನಿಲಿಯಾ ಅವರಿಗೆ ಇದು ಕಮ್​ಬ್ಯಾಕ್​ ಸಿನಿಮಾ. ಹಾಗಾಗಿ ಅವರ ಪಾತ್ರದ ಬಗ್ಗೆ ಅಭಿಮಾನಿಗಳು ಕುತೂಹಲ ಇಟ್ಟುಕೊಂಡಿದ್ದಾರೆ. ಕಂಪನಿಯೊಂದರ ಸಿಇಒ ಆಗಿ ಅವರು ಕಾಣಿಸಿಕೊಳ್ಳಲಿದ್ದಾರೆ ಎಂದು ಕೆಲವೆಡೆ ವರದಿ ಆಗಿದೆ. ಕಥೆಯಲ್ಲಿ ಈ ಪಾತ್ರ ತುಂಬ ಮುಖ್ಯವಾಗಿರಲಿದೆ ಎನ್ನಲಾಗಿದೆ. ಆದರೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಈ ಪಾತ್ರ ಯಾವ ರೀತಿ ಮೂಡಿಬರಬಹುದು ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ: ಜೆನಿಲಿಯಾ ರಿತೇಶ್​ ದಂಪತಿಗೆ ಸುದೀಪ್​ ಪ್ರೀತಿಯ ವಿಶ್​; ಹೊಸ ಕಾರ್ಯಕ್ಕೆ ಕಿಚ್ಚನ ಪ್ರೋತ್ಸಾಹ

ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ‘ವಾರಾಹಿ ಚಲನ ಚಿತ್ರಂ’ ಮೂಲಕ ಅದ್ದೂರಿ ಬಜೆಟ್​ನಲ್ಲಿ ಮೂಡಿಬರುತ್ತಿರುವ ಸಿನಿಮಾ ಇದು. ‘ಮಯಾಬಜಾರ್’ ಖ್ಯಾತಿಯ ರಾಧಾಕೃಷ್ಣ ರೆಡ್ಡಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಅವರ ಜೊತೆಗೆ ಘಟಾನುಘಟಿ ತಂತ್ರಜ್ಞರು ಈ ಸಿನಿಮಾಗಾಗಿ ಕೆಲಸ ಮಾಡುತ್ತಿದ್ದಾರೆ. ‘ಪುಷ್ಪ’ ಸಿನಿಮಾ ಮೂಲಕ ಸೆನ್ಸೇಷನ್​ ಕ್ರಿಯೇಟ್​ ಮಾಡಿರುವ ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್​ ಅವರು ಕಿರೀಟಿಯ ಈ ಚೊಚ್ಚಲ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಕೆ.ಕೆ. ಸೇಂಥಿಲ್​ ಕುಮಾರ್​ ಐಎಸ್​ಸಿ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ