Ghost Box Office Collection: ಮೊದಲ ದಿನ ಭರ್ಜರಿ ಗಳಿಕೆ ಮಾಡಿದ ‘ಘೋಸ್ಟ್’ ಸಿನಿಮಾ; ಇಲ್ಲಿದೆ ಕಲೆಕ್ಷನ್ ವಿವರ

|

Updated on: Oct 20, 2023 | 11:27 AM

‘ಘೋಸ್ಟ್’ ಸಿನಿಮಾದಲ್ಲಿ ಗ್ಯಾಂಗ್​ಸ್ಟಾರ್​ ಪಾತ್ರದಲ್ಲಿ ಶಿವಣ್ಣ ಕಾಣಿಸಿಕೊಂಡಿದ್ದಾರೆ. ಶ್ರೀನಿ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಜೈಲನ್ನು ಹೈಜಾಕ್ ಮಾಡುವ ಕಥೆಯನ್ನು ‘ಘೋಸ್ಟ್’ ಸಿನಿಮಾ ಹೊಂದಿದೆ. ಈ ಚಿತ್ರದಲ್ಲಿ ಶಿವಣ್ಣ ಎರಡು ಶೇಡ್​ನಲ್ಲಿ ಕಾಣಿಸಿಕೊಂಡಿದ್ದಾರೆ.

Ghost Box Office Collection: ಮೊದಲ ದಿನ ಭರ್ಜರಿ ಗಳಿಕೆ ಮಾಡಿದ ‘ಘೋಸ್ಟ್’ ಸಿನಿಮಾ; ಇಲ್ಲಿದೆ ಕಲೆಕ್ಷನ್ ವಿವರ
ಘೋಸ್ಟ್
Follow us on

ನವರಾತ್ರಿ ಪ್ರಯುಕ್ತ ಅಕ್ಟೋಬರ್ 19ರಂದು ಶಿವರಾಜ್​ಕುಮಾರ್ (Shivarajkumar) ನಟನೆಯ ‘ಘೋಸ್ಟ್’ ಸಿನಿಮಾ ರಿಲೀಸ್ ಆಗಿದೆ. ಶ್ರೀನಿ ನಿರ್ದೇಶನ ಮಾಡಿದ ಈ ಸಿನಿಮಾ ಪ್ರೇಕ್ಷಕರಿಗೆ ಇಷ್ಟವಾಗಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಮೊದಲ ದಿನ ಒಳ್ಳೆಯ ಕಮಾಯಿ ಮಾಡಿದೆ. ಸಾಲು ಸಾಲು ರಜೆ ಇರುವುದರಿಂದ ಮುಂದಿನ ದಿನಗಳಲ್ಲಿ ಚಿತ್ರದ ಕಲೆಕ್ಷನ್ ಹೆಚ್ಚುವ ನಿರೀಕ್ಷೆ ಇದೆ. ಹಲವು ಶೋಗಳು ಹೌಸ್​ಫುಲ್ ಪ್ರದರ್ಶನ ಕಾಣುತ್ತಿವೆ.

‘ಘೋಸ್ಟ್’ ಸಿನಿಮಾ ಮೊದಲ ದಿನ 2 ಕೋಟಿ ರೂಪಾಯಿ ಸಿನಿಮಾ ಗಳಿಕೆ ಮಾಡಿದೆ. ಶುಕ್ರವಾರ (ಅಕ್ಟೋಬರ್ 20) 1.5 ಕೋಟಿ ರೂಪಾಯಿ ಬಾಚಿಕೊಳ್ಳುವ ಸಾಧ್ಯತೆ ಇದೆ. ಸಾಲು ಸಾಲು ರಜೆ ಇರುವುದರಿಂದ ಶಿವಣ್ಣನ ಸಿನಿಮಾ ಅಬ್ಬರದ ಗಳಿಕೆ ಮಾಡಲಿದೆ ಎಂದು ಬಾಕ್ಸ್ ಆಫೀಸ್ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.

‘ಘೋಸ್ಟ್’ ಸಿನಿಮಾದಲ್ಲಿ ಗ್ಯಾಂಗ್​ಸ್ಟಾರ್​ ಪಾತ್ರದಲ್ಲಿ ಶಿವಣ್ಣ ಕಾಣಿಸಿಕೊಂಡಿದ್ದಾರೆ. ಶ್ರೀನಿ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಜೈಲನ್ನು ಹೈಜಾಕ್ ಮಾಡುವ ಕಥೆಯನ್ನು ‘ಘೋಸ್ಟ್’ ಸಿನಿಮಾ ಹೊಂದಿದೆ. ಈ ಚಿತ್ರದಲ್ಲಿ ಶಿವಣ್ಣ ಎರಡು ಶೇಡ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅನುಪಮ್ ಖೇರ್ ಅವರು ಈ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ.

ಶಿವರಾಜ್​ಕುಮಾರ್ ಅವರು ಈ ವರ್ಷ ‘ಜೈಲರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದರು. ಆದಾಗ್ಯೂ ಅವರ ಪಾತ್ರವನ್ನು ಜನರು ಭರ್ಜರಿಯಾಗಿ ಮೆಚ್ಚಿಕೊಂಡರು. ಈಗ ‘ಘೋಸ್ಟ್​’ ಸಿನಿಮಾ ಮೂಲಕ ಮತ್ತೊಂದು ಗೆಲುವು ಕಂಡಿದ್ದಾರೆ ಅವರು. ತಮಿಳಿನಲ್ಲಿ ‘ಲಿಯೋ’ ಹಾಗೂ ತೆಲುಗಿನಲ್ಲಿ ‘ಭಗವಂತ್ ಕೇಸರಿ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರಗಳ ಜೊತೆ ‘ಘೋಸ್ಟ್’ ಸ್ಪರ್ಧಿಸಿ ಗೆದ್ದಿದೆ.

ಇದನ್ನೂ ಓದಿ: Ghost Review: ಮಾಸ್​ ಪ್ರೇಕ್ಷಕರಿಗಾಗಿ ಅವಸರದಲ್ಲಿ ಹೇಳಿಮುಗಿಸಿದ ‘ಘೋಸ್ಟ್​’ ಕಹಾನಿ

‘ಘೋಸ್ಟ್’ ಸಿನಿಮಾದಲ್ಲಿ ಜಯರಾಂ, ಅರ್ಚನಾ ಜೋಯಿಸ್, ಅನುಪಮ್ ಖೇರ್ ಮೊದಲಾದವರು ನಟಿಸಿದ್ದಾರೆ. ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆ ಜನರಿಗೆ ಇಷ್ಟವಾಗಿದೆ. ಈ ಚಿತ್ರದಲ್ಲಿ ಹೀರೋಯಿನ್ ಹಾಗೂ ಸಾಂಗ್ ಎರಡೂ ಇಲ್ಲ. ಈ ಕಾರಣಕ್ಕೂ ಸಿನಿಮಾ ವಿಶೇಷ ಎನಿಸಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ