‘ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಚಿಂತನೆಯನ್ನು ಮಕ್ಕಳು ಅಳವಡಿಸಿಕೊಳ್ಳಲಿ’: ಶಿವರಾಜ್​ಕುಮಾರ್​

‘ಇಂದು ನಮ್ಮ ಶಕ್ತಿಧಾಮ ಮಕ್ಕಳ ಜೊತೆ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನವನ್ನು ಆಚರಿಸಿದ್ದು ಸಂತೋಷವಾಯ್ತು. ಮಕ್ಕಳು ಈ ಧೀಮಂತ ನಾಯಕರ ಚಿಂತನೆಯನ್ನು ತಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಲಿ’ ಎಂದು ಶಿವರಾಜ್​ಕುಮಾರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

‘ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಚಿಂತನೆಯನ್ನು ಮಕ್ಕಳು ಅಳವಡಿಸಿಕೊಳ್ಳಲಿ’: ಶಿವರಾಜ್​ಕುಮಾರ್​
ಶಕ್ತಿಧಾಮದ ಮಕ್ಕಳ ಜೊತೆ ಶಿವರಾಜ್​ಕುಮಾರ್​
Follow us
ಮದನ್​ ಕುಮಾರ್​
|

Updated on: Oct 02, 2023 | 4:16 PM

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮದಿನವನ್ನು (Gandhi Jayanti) ಇಂದು (ಅಕ್ಟೋಬರ್​ 2) ಎಲ್ಲಡೆ ಆಚರಿಸಲಾಗುತ್ತಿದೆ. ಹಾಗೆಯೇ ಲಾಲ್​ ಬಹದ್ದೂರ್​ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಗಿದೆ. ಶಾಲೆ, ಕಾಲೇಜು, ಸರ್ಕಾರಿ ಕಚೇರಿ ಮುಂತಾದ ಕಡೆಗಳಲ್ಲಿ ಈ ನಾಯಕರ ಜನ್ಮದಿನವನ್ನು ಸೆಲೆಬ್ರೇಟ್​ ಮಾಡಲಾಗಿದೆ. ನಟ ಶಿವರಾಜ್​ಕುಮಾರ್​ (Shivarajkumar) ಕೂಡ ಮೈಸೂರಿನ ಶಕ್ತಿಧಾಮದಲ್ಲಿ ಮಕ್ಕಳ ಜೊತೆ ಸೇರಿ ಈ ನಾಯಕರ ಜಯಂತಿಯಲ್ಲಿ ಪಾಲ್ಗೊಂಡಿದ್ದಾರೆ. ಮಹಾತ್ಮ ಗಾಂಧಿ (Mahatma Gandhi) ಮತ್ತು ಲಾಲ್​ ಬಹದ್ದೂರ್​ ಶಾಸ್ತ್ರಿ ರೀತಿ ವೇಷ ಧರಿಸಿದ ಮಕ್ಕಳ ಜೊತೆ ನಿಂತು ಶಿವರಾಜ್​ಕುಮಾರ್​ ಅವರು ಪೋಸ್​ ನೀಡಿದ್ದಾರೆ. ಆ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅವರು ಶುಭ ಕೋರಿದ್ದಾರೆ.

‘ಇಂದು ನಮ್ಮ ಶಕ್ತಿಧಾಮ ಮಕ್ಕಳ ಜೊತೆ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಿದ್ದು ಸಂತೋಷವಾಯ್ತು. ಮಕ್ಕಳು ಈ ಧೀಮಂತ ನಾಯಕರ ಚಿಂತನೆಯನ್ನು ತಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಲಿ’ ಎಂದು ಶಿವರಾಜ್​ಕುಮಾರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ. ಶಕ್ತಿಧಾಮದ ಮಕ್ಕಳ ಬಗ್ಗೆ ಡಾ. ರಾಜ್​ಕುಮಾರ್​ ಅವರ ಕುಟುಂಬ ಬಹಳ ಕಾಳಜಿ ಹೊಂದಿದೆ. ಹಲವು ವಿಶೇಷ ದಿನಗಳಲ್ಲಿ ಶಿವರಾಜ್​ಕುಮಾರ್​ ಅವರು ಅಲ್ಲಿಗೆ ಭೇಟಿ ನೀಡುತ್ತಾರೆ. ಇಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಪ್ರಯುಕ್ತ ಅಲ್ಲಿಗೆ ಶಿವಣ್ಣ ತೆರಳಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ, ಶಿವರಾಜ್​ಕುಮಾರ್​ ನಟನೆಯ ‘ಘೋಸ್ಟ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಅಕ್ಟೋಬರ್​ 19ರಂದು ಈ ಚಿತ್ರ ಅದ್ದೂರಿಯಾಗಿ ತೆರೆ ಕಾಣಲಿದೆ. ಈ ಸಿನಿಮಾಗೆ ಶ್ರೀನಿ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗಷ್ಟೇ ಈ ಸಿನಿಮಾದ ಟ್ರೇಲರ್​ ಬಿಡುಗಡೆಯಾಗಿ ಧೂಳೆಬ್ಬಿಸುತ್ತಿದೆ. ಅನುಪಮ್​ ಖೇರ್​, ಅರ್ಚನಾ ಜೋಯಿಸ್​ ಮುಂತಾದವರು ‘ಘೋಸ್ಟ್​’ ಚಿತ್ರದಲ್ಲಿ ನಟಿಸಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.

ಮಹಾತ್ಮ ಗಾಂಧಿ-ಲಾಲ್​ ಬಹದ್ದೂರ್​ ಶಾಸ್ತ್ರಿ ಜನ್ಮದಿನ; ಇಬ್ಬರೂ ನಾಯಕರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ

‘ಘೋಸ್ಟ್​’ ಟ್ರೇಲರ್​ನಲ್ಲಿ ಹಲವು ಅಂಶಗಳು ಹೈಲೈಟ್​ ಆಗಿವೆ. ಶಿವರಾಜ್​ಕುಮಾರ್​ ಅವರ ಎರಡು ಗೆಟಪ್​ಗಳನ್ನು ನೋಡಿ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಹಿನ್ನೆಲೆ ಸಂಗೀತ ಕೂಡ ಗಮನ ಸೆಳೆದಿದೆ. ಅದ್ದೂರಿ ಮೇಕಿಂಗ್​ ಮತ್ತು ಮೈನವಿರೇಳಿಸುವಂತಹ ಆ್ಯಕ್ಷನ್​ ಸನ್ನಿವೇಶಗಳ ಝಲಕ್​ ಈ ಟ್ರೇಲರ್​ನಲ್ಲಿ ಕಾಣಿಸಿದೆ. ಸಂದೇಶ್​ ಎನ್​. ಅವರು ನಿರ್ಮಾಣ ಮಾಡಿದ್ದಾರೆ. ಅರ್ಜುನ್​ ಜನ್ಯ ಸಂಗೀತ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ