AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghost Movie: ‘ಬಿಗ್​ ಡ್ಯಾಡಿ’ ಪೋಸ್ಟರ್​ ಮೂಲಕ ಕೌತುಕ ಹೆಚ್ಚಿಸಿದ ‘ಘೋಸ್ಟ್​’; ಹೇಗಿದೆ ನೋಡಿ ಶಿವಣ್ಣನ ಲುಕ್​

Shivarajkumar: ಇಂದು (ಜುಲೈ 9) ನಿರ್ದೇಶಕ ಎಂ.ಜಿ. ಶ್ರೀನಿವಾಸ್​ ಅವರ ಜನ್ಮದಿನ. ಈ ಸಂದರ್ಭದಲ್ಲೇ ‘ಬಿಗ್​ ಡ್ಯಾಡಿ’ ಪೋಸ್ಟರ್​ ಬಿಡುಗಡೆ ಆಗಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

Ghost Movie: ‘ಬಿಗ್​ ಡ್ಯಾಡಿ’ ಪೋಸ್ಟರ್​ ಮೂಲಕ ಕೌತುಕ ಹೆಚ್ಚಿಸಿದ ‘ಘೋಸ್ಟ್​’; ಹೇಗಿದೆ ನೋಡಿ ಶಿವಣ್ಣನ ಲುಕ್​
ಶಿವರಾಜ್​ಕುಮಾರ್​
ಮದನ್​ ಕುಮಾರ್​
|

Updated on: Jul 09, 2023 | 12:29 PM

Share

ನಟ ಶಿವರಾಜ್​ಕುಮಾರ್​ (Shivarajkumar) ಅವರ ಅಭಿಮಾನಿಗಳ ವಲಯದಲ್ಲಿ ಈಗ ‘ಬಿಗ್​ ಡ್ಯಾಡಿ’ (Big Daddy) ಬಗ್ಗೆಯೇ ಮಾತುಕಥೆ ನಡೆಯುತ್ತಿದೆ. ಯಾರು ಈ ಬಿಗ್​ ಡ್ಯಾಡಿ? ಏನಿದರ ಕಥೆ ಎಂದು ಫ್ಯಾನ್ಸ್​ ತಲೆ ಕೆರೆದುಕೊಳ್ಳುತ್ತಿದ್ದಾರೆ. ಆ ಎಲ್ಲ ಪ್ರಶ್ನೆಗಳಿಗೆ ಜುಲೈ 12ರಂದು ಉತ್ತರ ಸಿಗಲಿದೆ. ಹೌದು, ಶಿವರಾಜ್​ಕುಮಾರ್​ ನಟಿಸುತ್ತಿರುವ ‘ಘೋಸ್ಟ್​’ (Ghost Movie) ಸಿನಿಮಾದಿಂದ ‘ಬಿಗ್ ಡ್ಯಾಡಿ’ ಟೀಸರ್​ ರಿಲೀಸ್​ ಆಗಲಿದೆ. ಅದಕ್ಕೂ ಮುನ್ನ ಹೊಸ ಪೋಸ್ಟರ್​ ಮೂಲಕ ಕುತೂಹಲ ಹೆಚ್ಚಿಸುವ ಕೆಲಸ ಮಾಡಲಾಗಿದೆ. ಇಂದು (ಜುಲೈ 9) ನಿರ್ದೇಶಕ ಶ್ರೀನಿ (ಎಂ.ಜಿ. ಶ್ರೀನಿವಾಸ್​) ಅವರು ಒಂದು ಪೋಸ್ಟರ್​ ಹಂಚಿಕೊಂಡಿದ್ದಾರೆ. ಅದರಲ್ಲಿ ಶಿವರಾಜ್​ಕುಮಾರ್​ ಅವರ ಲುಕ್​ ಗಮನ ಸೆಳೆಯುತ್ತಿದೆ.

ಜುಲೈ 12ರಂದು ಶಿವರಾಜ್​ಕುಮಾರ್​ ಅವರ ಜನ್ಮದಿನ. ಪ್ರತಿ ವರ್ಷದಂತೆ ಈ ಬಾರಿ ಕೂಡ ಅಭಿಮಾನಿಗಳು ಅದ್ದೂರಿಯಾಗಿ ಬರ್ತ್​ಡೇ ಆಚರಿಸಲು ಕಾದಿದ್ದಾರೆ. ಅವರ ಸಂಭ್ರಮವನ್ನು ಹೆಚ್ಚು ಮಾಡಲು ‘ಘೋಸ್ಟ್​’ ಸಿನಿಮಾ ತಂಡದಿಂದ ‘ಬಿಗ್ ಡ್ಯಾಡಿ’ ವಿಡಿಯೋ ರಿಲೀಸ್​ ಆಗಲಿದೆ. ಅಂದು ಬೆಳಗ್ಗೆ 11.45ಕ್ಕೆ ‘ಬಿಗ್​ ಡ್ಯಾಡಿ’ ಪರಿಚಯ ಆಗಲಿದೆ. ಅದರ ಝಲಕ್ ತೋರಿಸಲು ಈಗ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ.

ಈ ಪೋಸ್ಟರ್​ನಲ್ಲಿ ಶಿವರಾಜ್​ಕುಮಾರ್​ ಅವರು ರೈಫಲ್​ ಹಿಡಿದು ನಿಂತಿದ್ದಾರೆ. ಈ ಸಿನಿಮಾ ಸಖತ್​ ಮಾಸ್​ ಆಗಿರಲಿದೆ ಎಂಬುದಕ್ಕೆ ಸುಳಿವು ಸಿಕ್ಕಿದೆ. ಇಂದು (ಜುಲೈ 9) ನಿರ್ದೇಶಕ ಎಂ.ಜಿ. ಶ್ರೀನಿವಾಸ್​ ಅವರ ಜನ್ಮದಿನ. ಈ ಸಂದರ್ಭದಲ್ಲೇ ಪೊಸ್ಟರ್​ ಬಿಡುಗಡೆ ಆಗಿರುವುದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಕನ್ನಡ ಚಿತ್ರರಂಗದಲ್ಲಿ ಶ್ರೀನಿ ಅವರು ನಟನಾಗಿ, ನಿರ್ದೇಶಕನಾಗಿ ಹೆಸರು ಮಾಡಿದ್ದಾರೆ. ‘ಘೋಸ್ಟ್​’ ಚಿತ್ರದಲ್ಲಿ ಅವರು ಶಿವರಾಜ್​ಕುಮಾರ್​ ಜೊತೆ ಕೈ ಜೋಡಿಸಿರುವುದರಿಂದ ಹೈಪ್​ ಹೆಚ್ಚಾಗಿದೆ.

Ghost Movie: ಶಿವರಾಜ್​ಕುಮಾರ್​ ನಟನೆಯ ‘ಘೋಸ್ಟ್​’ ಚಿತ್ರದ ಸೆಟ್​ಗೆ ಸಚಿವ ಮಧು ಬಂಗಾರಪ್ಪ ಭೇಟಿ; ಇಲ್ಲಿದೆ ಫೋಟೋ ಗ್ಯಾಲರಿ

‘ಘೋಸ್ಟ್​’ ಸಿನಿಮಾವನ್ನು ಸಂದೇಶ್​ ಎನ್​. ಅವರು ನಿರ್ಮಾಣ ಮಾಡುತ್ತಿದ್ದಾರೆ. ‘ಸಂದೇಶ್ ಪ್ರೊಡಕ್ಷನ್ಸ್’ ಸಂಸ್ಥೆ ಮೂಲಕ ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರ ಸಿದ್ಧವಾಗುತ್ತಿದೆ. ಅಭಿಮಾನಿಗಳು ಈ ಸಿನಿಮಾ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಶಿವರಾಜ್​ಕುಮಾರ್ ಜೊತೆ ಜಯರಾಂ, ಅನುಪಮ್ ಖೇರ್, ಸತ್ಯಪ್ರಕಾಶ್, ದತ್ತಣ್ಣ, ಅಭಿಜಿತ್, ಪ್ರಶಾಂತ್ ನಾರಾಯಣನ್ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ