AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲು ರೆಡಿ ಆಗಿರೋ ಸಿನಿಮಾಗಳಿವು..

‘ಕೆಜಿಎಫ್’ , ‘ಪುಷ್ಪ’, ‘ಆರ್​ಆರ್​ಆರ್’ ಸೇರಿ ಅನೇಕ ಸಿನಿಮಾಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿ ಹಿಟ್ ಆಗಿವೆ. ಮುಂದಿನ ದಿನಗಳಲ್ಲಿ ಈ ಟ್ರೆಂಡ್ ಮತ್ತಷ್ಟು ಹೆಚ್ಚಲಿದೆ. ಈ ವರ್ಷ ರಿಲೀಸ್ ಆಗಲಿರುವ ಪ್ಯಾನ್ ಇಂಡಿಯಾ ಸಿನಿಮಾಗಳ ಬಗ್ಗೆ ಇಲ್ಲಿದೆ ಮಾಹಿತಿ.

ಈ ವರ್ಷ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲು ರೆಡಿ ಆಗಿರೋ ಸಿನಿಮಾಗಳಿವು..
ಪ್ಯಾನ್ ಇಂಡಿಯಾ ಸಿನಿಮಾ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Aug 26, 2023 | 8:18 AM

Share

ಎಸ್​ಎಸ್​ ರಾಜಮೌಳಿ (SS Rajamouli) ನಿರ್ದೇಶನದ ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಯಿತು. ತೆಲುಗಿನಲ್ಲಿ ಸಿದ್ಧಗೊಂಡ ಈ ಸಿನಿಮಾ ಪರಭಾಷೆಗೆ ಡಬ್ ಆಗಿ ರಿಲೀಸ್ ಆಯಿತು. ಅಲ್ಲಿಯೂ ಭರ್ಜರಿ ಕಮಾಯಿ ಮಾಡಿತು. ಅಲ್ಲಿಂದ ಪ್ಯಾನ್ ಇಂಡಿಯಾ ಸಿನಿಮಾ ಮಾಡುವ ಟ್ರೆಂಡ್ ಜೋರಾಯಿತು. ‘ಕೆಜಿಎಫ್’ (KGF Movie), ‘ಪುಷ್ಪ’, ‘ಆರ್​ಆರ್​ಆರ್’ ಸೇರಿ ಅನೇಕ ಸಿನಿಮಾಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿ ಹಿಟ್ ಆಗಿವೆ. ಮುಂದಿನ ದಿನಗಳಲ್ಲಿ ಈ ಟ್ರೆಂಡ್ ಮತ್ತಷ್ಟು ಹೆಚ್ಚಲಿದೆ. ಈ ವರ್ಷ ರಿಲೀಸ್ ಆಗಲಿರುವ ಪ್ಯಾನ್ ಇಂಡಿಯಾ ಸಿನಿಮಾಗಳ ಬಗ್ಗೆ ಇಲ್ಲಿದೆ ಮಾಹಿತಿ.

‘ಘೋಸ್ಟ್’

ಶಿವರಾಜ್​ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಎಂಜಿ ಶ್ರೀನಿವಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಟೀಸರ್ ಮೂಲಕ ಈ ಸಿನಿಮಾ ಗಮನ ಸೆಳೆದಿದೆ. ಕನ್ನಡ ಸೇರಿ ಮೂರು ಭಾಷೆಗಳಲ್ಲಿ ಚಿತ್ರ ರಿಲೀಸ್ ಆಗುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿರುವ ಚಿತ್ರದ ಬಗ್ಗೆ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿದೆ. ಅಕ್ಟೋಬರ್ 19ರಂದು ‘ಘೋಸ್ಟ್’ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ.

ಮಾರ್ಟಿನ್

ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಟೀಸರ್ ಮೂಲಕ ಗಮನ ಸೆಳೆಯಿತು. ಈ ಸಿನಿಮಾ 2023ರಲ್ಲೇ ರಿಲೀಸ್ ಆಗಲಿದೆ. ಎಪಿ ಅರ್ಜುನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಕ್ಲೈಮ್ಯಾಕ್ಸ್​ನ 50 ದಿನಗಳ ಕಾಲ ಶೂಟ್ ಮಾಡಲಾಗಿದೆ.

ಖುಷಿ

ವಿಜಯ್ ದೇವರಕೊಂಡ ಹಾಗೂ ಸಮಂತಾ ಟಾಲಿವುಡ್​ನಲ್ಲಿ ಹೆಚ್ಚು ಗುರುತಿಸಿಕೊಂಡಿದ್ದಾರೆ. ಇದರ ಜೊತೆಗೆ ಪರಭಾಷೆಯಲ್ಲೂ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಈ ಕಾರಣದಿಂದಲೇ ‘ಖುಷಿ’ ಚಿತ್ರವನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡಲಾಗುತ್ತಿದೆ. ಸೆಪ್ಟೆಂಬರ್ 1ರಂದು ಚಿತ್ರ ತೆರೆಗೆ ಬರುತ್ತಿದೆ. ವಿಜಯ್ ದೇವರಕೊಂಡ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ.

‘ಜವಾನ್’

‘ಜವಾನ್’ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಲು ಹಲವು ಕಾರಣಗಳಿವೆ. ಶಾರುಖ್ ಖಾನ್ ಹಾಗೂ ನಯನತಾರಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ತಮಿಳಿನ ಅಟ್ಲಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಗುತ್ತಿದೆ. ಹಿಂದಿ ಮಾತ್ರವಲ್ಲದೆ ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಚಿತ್ರ ಡಬ್ ಆಗಿ ರಿಲೀಸ್ ಆಗುತ್ತಿದೆ. ವಿದೇಶದಲ್ಲಿ ಈಗಾಗಲೇ ಪ್ರೀಬುಕ್ಕಿಂಗ್ ಶುರುವಾಗಿದ್ದು, ಸಿನಿಮಾ ಸದ್ದು ಮಾಡೋಕೆ ರೆಡಿ ಆಗಿದೆ.

ಚಂದ್ರಮುಖಿ 2

‘ಚಂದ್ರಮುಖಿ’ ಸಿನಿಮಾ ಹಿಟ್ ಆಯಿತು. ಹಾರರ್ ಶೈಲಿಯಲ್ಲಿ ಈ ಚಿತ್ರ ಮೂಡಿಬಂದಿತ್ತು. ಈಗ ಪಿ. ವಾಸು ‘ಚಂದ್ರಮುಖಿ 2’ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ರಾಘವ, ಕಂಗನಾ ರಣಾವತ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಸೈಕಾಲಜಿಕಲ್ ಡ್ರಾಮಾ ಶೈಲಿಯಲ್ಲಿ ಈ ಚಿತ್ರ ಮೂಡಿ ಬರುತ್ತಿದೆ. ಇದು ಕೂಡ ಪ್ಯಾನ್ ಇಂಡಿಯಾ ಸಿನಿಮಾ.

‘ಸಲಾರ್: ಪಾರ್ಟ್-1 ಸೀಸ್​ಫೈರ್​’

ಪ್ರಭಾಸ್ ಅವರು ಬ್ಯಾಕ್ ಟು ಬ್ಯಾಕ್ ಸೋಲು ಕಾಣುತ್ತಿದ್ದಾರೆ. ‘ಸಲಾರ್’ ಸಿನಿಮಾ ಮೂಲಕ ಅವರು ಗೆಲ್ಲುವ ಭರವಸೆಯಲ್ಲಿದ್ದಾರೆ. ಪ್ರಶಾಂತ್ ನೀಲ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 28ರಂದು ರಿಲೀಸ್ ಆಗುತ್ತಿದೆ. ತೆಲುಗು, ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ. ದೊಡ್ಡ ಪಾತ್ರವರ್ಗದ ಕಾರಣದಿಂದಲೂ ಚಿತ್ರ ಗಮನ ಸೆಳೆಯುತ್ತಿದೆ. ಕನ್ನಡದ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡುತ್ತಿದೆ.

ಗೇಮ್ ಚೇಂಜರ್

‘ಆರ್​ಆರ್​ಆರ್​’ ಚಿತ್ರದಿಂದ ರಾಮ್ ಚರಣ್ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಪಡೆದುಕೊಂಡಿದ್ದಾರೆ. ಈಗ ಅವರ ನಟನೆಯ ‘ಗೇಮ್ ಚೇಂಜರ್’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಖ್ಯಾತ ನಿರ್ದೇಶಕ ಶಂಕರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಕಿಯಾರಾ ಅಡ್ವಾಣಿ ಚಿತ್ರದ ನಾಯಕಿ. ತೆಲುಗು, ಹಿಂದಿ ಮೊದಲಾದ ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರದ ಸೆಟ್​ನ ಫೋಟೋ ಇತ್ತೀಚೆಗೆ ಲೀಕ್ ಆಗಿತ್ತು.

ಲಿಯೋ

ದಳಪತಿ ವಿಜಯ್ ನಟನೆಯ ‘ಲಿಯೋ’ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ. ಈ ವರ್ಷವೇ ಚಿತ್ರವನ್ನು ತೆರೆಗೆ ತರಬೇಕು ಎನ್ನುವ ಗುರಿಯನ್ನು ಲೋಕೇಶ್ ಕನಗರಾಜ್ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಹಲವು ಭಾಷೆಗಳಲ್ಲಿ ರಿಲೀಸ್ ಆಗಲಿದೆ. ಲೋಕೇಶ್ ನಿರ್ದೇಶನದ ‘ವಿಕ್ರಮ್’, ‘ಕೈದಿ’ ಸಿನಿಮಾಗಳಿಗೆ ‘ಲಿಯೋ’ ಚಿತ್ರದ ಜೊತೆ ಕನೆಕ್ಷನ್ ಇರಲಿದೆ ಎನ್ನಲಾಗುತ್ತಿದೆ.

ದೇವರ

ಜೂನಿಯರ್ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಪೋಸ್ಟರ್​ಗಳ ಮೂಲಕ ಗಮನ ಸೆಳೆದಿದೆ. ಕೊರಟಾಲ ಶಿವ ನಿರ್ದೇಶನದ ಈ ಚಿತ್ರದಲ್ಲಿ ಸೈಫ್ ಅಲಿ ಖಾನ್ ವಿಲನ್ ಪಾತ್ರ ಮಾಡಿದರೆ, ಜಾನ್ವಿ ಕಪೂರ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿರುವ ಸಿನಿಮಾ.

ಪುಷ್ಪ 2

ಪುಷ್ಪ 2 ಚಿತ್ರದ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಮೊದಲ ಪಾರ್ಟ್​ ಈಗಾಗಲೇ ರಿಲೀಸ್ ಆಗಿ ಭರ್ಜರಿ ಮೆಚ್ಚುಗೆ ಪಡೆದಿದೆ. ಎರಡನೇ ಪಾರ್ಟ್ ಕೂಡ ರಿಲೀಸ್​ಗೆ ರೆಡಿ ಆಗುತ್ತಿದೆ. ಸುಕುಮಾರ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಮೊದಲಾದವರು ನಟಿಸಿದ್ದಾರೆ.

ಇಂಡಿಯನ್ 2

‘ವಿಕ್ರಮ್’ ಗೆಲುವಿನ ಬಳಿಕ ಕಮಲ್ ಹಾಸನ್ ಅವ ಚಾರ್ಮ್ ಹೆಚ್ಚಿದೆ. ಸದ್ಯ ಅವರು ‘ಇಂಡಿಯನ್ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿದ್ಧವಾಗುತ್ತಿರುವ ಈ ಚಿತ್ರಕ್ಕೆ ಶಂಕರ್ ನಿರ್ದೇಶನ ಇದೆ.

ಇದನ್ನೂ ಓದಿ: Komal Kumar: ‘ನಮೋ ಭೂತಾತ್ಮ 2’ ಚಿತ್ರಕ್ಕೆ ಧ್ರುವ ಸರ್ಜಾ ಸಾಥ್​; ಟೀಸರ್​ ನೋಡಿ ಖುಷಿಪಟ್ಟ ಕೋಮಲ್​ ಫ್ಯಾನ್ಸ್​

ಕಲ್ಕಿ 2898 ಎಡಿ

ಪ್ರಭಾಸ್ ನಟನೆಯ ಮತ್ತೊಂದು ಪ್ರಮುಖ ಚಿತ್ರ ‘ಕಲ್ಕಿ 2898 ಎಡಿ’ ಸಿನಿಮಾ. ಈ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿದ್ಧವಾಗುತ್ತಿದೆ. ಆದರೆ, ಈ ಚಿತ್ರ ಈ ವರ್ಷವೇ ರಿಲೀಸ್ ಆಗುತ್ತದೆಯೋ ಅಥವಾ ಇಲ್ಲವೋ ಎನ್ನು ವಿಚಾರ ಪಕ್ಕಾ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ