AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡೆವಿಲ್’ ಚಿತ್ರದಲ್ಲಿ ಗಿಲ್ಲಿ ನಟ; ಪೋಸ್ಟರ್ ರಿಲೀಸ್ ಮಾಡಿದ ದರ್ಶನ್ ಟೀಂ

ಬಿಗ್ ಬಾಸ್ ಕನ್ನಡ 12ರಲ್ಲಿ ಮಿಂಚುತ್ತಿರುವ ಗಿಲ್ಲಿ ನಟ, ದರ್ಶನ್ ಅವರ 'ಡೆವಿಲ್' ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ದರ್ಶನ್ ಜಾಮೀನಿನ ನಂತರ ಶೂಟಿಂಗ್ ಪೂರ್ಣಗೊಳಿಸಿದ್ದು, ಗಿಲ್ಲಿಯ ಪೋಸ್ಟರ್ ಕೂಡ ಬಿಡುಗಡೆಯಾಗಿದೆ. ಡಿಸೆಂಬರ್ 12ಕ್ಕೆ 'ಡೆವಿಲ್' ತೆರೆಗೆ ಬರಲಿದ್ದು, ರೇಣುಕಾಸ್ವಾಮಿ ಕೇಸ್ ನಂತರ ದರ್ಶನ್ ಮೊದಲ ಚಿತ್ರ ಇದಾಗಲಿದೆ.

‘ಡೆವಿಲ್’ ಚಿತ್ರದಲ್ಲಿ ಗಿಲ್ಲಿ ನಟ; ಪೋಸ್ಟರ್ ರಿಲೀಸ್ ಮಾಡಿದ ದರ್ಶನ್ ಟೀಂ
ಡೆವಿಲ್
ರಾಜೇಶ್ ದುಗ್ಗುಮನೆ
|

Updated on: Nov 05, 2025 | 8:35 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಗಿಲ್ಲಿ ನಟ ಅವರು ಮಿಂಚುತ್ತಿದ್ದಾರೆ. ಅವರು ಒಳಗೆ ಉತ್ತಮ ಆಟ ಆಡುತ್ತಿರುವಾಗಲೇ ಹೊರಗೆ ಒಂದು ವಿಶೇಷ ವಿಚಾರ ರಿವೀಲ್ ಆಗಿದೆ. ಅವರು ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದಲ್ಲಿ ನಟಿಸಿರುವ ಬಗ್ಗೆ ಅಪ್​​ಡೇಟ್ ನೀಡಲಾಗಿದೆ. ಜೊತೆಗೆ ಪೋಸ್ಟರ್ ಕೂಡ ಬಿಡುಗಡೆ ಆಗಿದೆ. ಈ ಪೋಸ್ಟರ್ ಗಮನ ಸೆಳೆಯೋ ರೀತಿಯಲ್ಲಿ ಇದೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಕಳೆದ ವರ್ಷ ದರ್ಶನ್ ಜೈಲು ಸೇರಿದರು. ಕರ್ನಾಟಕ ಹೈಕೋರ್ಟ್ ನೀಡಿದ ಜಾಮೀನು ಪಡೆದು ಹೊರಗೆ ಬಂದ ಅವರು, ‘ಡೆವಿಲ್’ ಚಿತ್ರದ ಶೂಟ್ ಪೂರ್ಣಗೊಳಿಸಿದ್ದರು. ಜೊತೆಗೆ ಡಬ್ಬಿಂಗ್ ಕೂಡ ಪೂರ್ಣಗೊಳಿಸಿದ್ದಾರೆ. ಈಗ ತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಇದೆ. ಹೀಗಿರುವಾಗಲೇ ಚಿತ್ರದಲ್ಲಿ ನಟಿಸಿದ ಕಲಾವಿದರ ಪೋಸ್ಟರ್ ರಿಲೀಸ್ ಮಾಡಲಾಗುತ್ತಿದೆ.

ಗಿಲ್ಲಿ ನಟ ಕೂಡ ದರ್ಶನ್ ಜೊತೆ ‘ಡೆವಿಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಮುಖ ಪಾತ್ರವನ್ನು ಅವರು ಮಾಡುತ್ತಿದ್ದಾರೆ ಎಂದು ತಂಡ ಮಾಹಿತಿ ನೀಡಿದೆ. ಶರ್ಟ್ ಹಾಕಿ, ಅದಕ್ಕೆ ಟೈ ಹಾಕಿ ಗಿಲ್ಲಿ ಅವರು ಕಾಣಿಸಿಕೊಂಡಿದ್ದಾರೆ ಅನ್ನೋದು ವಿಶೇಷ.

ಈ ಸಿನಿಮಾ ಬಿಡುಗಡೆ ರಿಲೀಸ್ ದಿನಾಂಕ ಮುಂದಕ್ಕೆ ಹೊಗಲಿದೆ ಎಂಬ ಮಾಹಿತಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಆದರೆ, ಇದನ್ನು ನಂಬಂದಂತೆ ಫ್ಯಾನ್ಸ್ ಕೋರಿಕೊಂಡಿದ್ದರು. ಈಗ ರಿಲೀಸ್ ಆಗಿರೋ ಪೋಸ್ಟರ್​ನಲ್ಲಿ ಡಿಸೆಂಬರ್ 12ರಂದೇ ಸಿನಿಮಾ ಬಿಡುಗಡೆ ಕಾಣಲಿದೆ ಎಂಬ ಸ್ಪಷ್ಟ ಉಲ್ಲೇಖ ಇದೆ.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿರೋ ಕಾವ್ಯಾ ಶೈವ ಅವರ ಫೇವರಿಟ್ ಹೀರೋ ಯಾರು ಗೊತ್ತಾ?

ದರ್ಶನ್, ರಚನಾ ರೈ, ಶರ್ಮಿಳಾ ಮಾಂಡ್ರೆ ಮುಂತಾದವರು ‘ದಿ ಡೆವಿಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಕಾಶ್ ವೀರ್ ಅವರು ನಿರ್ದೇಶನ ಮಾಡಿದ್ದಾರೆ. ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. ಈಗಾಗಲೇ ಟೀಸರ್ ಗಮನ ಸೆಳೆದಿದೆ. ಅಲ್ಲದೇ, ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಕೂಡ ಬಿಡುಗಡೆಯಾಗಿ ಧೂಳೆಬ್ಬಿಸುತ್ತಿದೆ. ಈ ಚಿತ್ರಕ್ಕೆ ಮಿಲನಾ ಪ್ರಕಾಶ್ ನಿರ್ದೇಶನ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ