ತಲ್ವಾರ್​ನಿಂದ ಕೇಕ್ ಕತ್ತರಿಸಿದ ಕರಿ ಚಿರತೆ, ನೋಟಿಸ್ ನೀಡಲು ಗಿರಿನಗರ ಪೊಲೀಸರ ಸಿದ್ಧತೆ

ಬೆಂಗಳೂರು: ನಟ ದುನಿಯಾ ವಿಜಯ್ ಇಂದು ತಮ್ಮ 46ನೇ ವರ್ಷದ ಹುಟ್ಟುಹಬ್ಬವನ್ನು ಹೊಸಕೇರಿಹಳ್ಳಿಯ ತಮ್ಮ ನಿವಾಸದಲ್ಲಿ ಆಚರಿಸಿಕೊಂಡಿದ್ದಾರೆ. ಆದರೆ ಈ ಸೆಲಬ್ರೇಷನ್​ನಿಂದ ವಿಜಿಗೆ ಸಂಕಷ್ಟ ಎದುರಾಗಿದೆ. ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಕೇಕ್ ಕತ್ತರಿಸಿ ಆಚರಿಸಿಕೊಂಡಿದ್ದಾರೆ. ಆದರೆ ಸಂಕಷ್ಟತಂದಿದ್ದು, ಕೇಕ್ ಕತ್ತರಿಸಲು ಬಳಸಿದ ಲಾಂಗ್​ನಿಂದ. ನಿನ್ನೆ ತಡರಾತ್ರಿ ಅಭಿಮಾನಿಗಳ ಜೊತೆ ಬರ್ತಡೇ ಸೆಲಬ್ರೇಷನ್ ಮಾಡಿಕೊಂಡ ವಿಜಯ್ ತಲ್ವಾರ್‌ನಿಂದ ಕೇಕ್ ಕತ್ತರಿಸಿದ್ದಾರೆ. ಈ ಹಿನ್ನೆಲೆ ನಟ ದುನಿಯಾ ವಿಜಯ್‌ಗೆ ನೋಟಿಸ್ ನೀಡಲು ಸೂಚನೆ ನೀಡಲಾಗಿದೆ. ನೋಟಿಸ್ ನೀಡಿ ವಿಚಾರಣೆ […]

ತಲ್ವಾರ್​ನಿಂದ ಕೇಕ್ ಕತ್ತರಿಸಿದ ಕರಿ ಚಿರತೆ, ನೋಟಿಸ್ ನೀಡಲು ಗಿರಿನಗರ ಪೊಲೀಸರ ಸಿದ್ಧತೆ
Follow us
ಸಾಧು ಶ್ರೀನಾಥ್​
|

Updated on:Jan 20, 2020 | 11:01 AM

ಬೆಂಗಳೂರು: ನಟ ದುನಿಯಾ ವಿಜಯ್ ಇಂದು ತಮ್ಮ 46ನೇ ವರ್ಷದ ಹುಟ್ಟುಹಬ್ಬವನ್ನು ಹೊಸಕೇರಿಹಳ್ಳಿಯ ತಮ್ಮ ನಿವಾಸದಲ್ಲಿ ಆಚರಿಸಿಕೊಂಡಿದ್ದಾರೆ. ಆದರೆ ಈ ಸೆಲಬ್ರೇಷನ್​ನಿಂದ ವಿಜಿಗೆ ಸಂಕಷ್ಟ ಎದುರಾಗಿದೆ. ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಕೇಕ್ ಕತ್ತರಿಸಿ ಆಚರಿಸಿಕೊಂಡಿದ್ದಾರೆ. ಆದರೆ ಸಂಕಷ್ಟತಂದಿದ್ದು, ಕೇಕ್ ಕತ್ತರಿಸಲು ಬಳಸಿದ ಲಾಂಗ್​ನಿಂದ.

ನಿನ್ನೆ ತಡರಾತ್ರಿ ಅಭಿಮಾನಿಗಳ ಜೊತೆ ಬರ್ತಡೇ ಸೆಲಬ್ರೇಷನ್ ಮಾಡಿಕೊಂಡ ವಿಜಯ್ ತಲ್ವಾರ್‌ನಿಂದ ಕೇಕ್ ಕತ್ತರಿಸಿದ್ದಾರೆ. ಈ ಹಿನ್ನೆಲೆ ನಟ ದುನಿಯಾ ವಿಜಯ್‌ಗೆ ನೋಟಿಸ್ ನೀಡಲು ಸೂಚನೆ ನೀಡಲಾಗಿದೆ. ನೋಟಿಸ್ ನೀಡಿ ವಿಚಾರಣೆ ನಡೆಸುವಂತೆ ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ಸೆಪಟ್ ಬೆಂಗಳೂರಿನ ಗಿರಿನಗರ ಪೊಲೀಸರಿಗೆ ಸೂಚಿಸಿದ್ದಾರೆ.

ತಲ್ವಾರ್‌ನಿಂದ ಕೇಕ್ ಕತ್ತರಿಸಿದ್ದಕ್ಕೆ ಕ್ಷಮೆಯಾಚಿಸಿದ ವಿಜಯ್: ದುನಿಯಾ ವಿಜಯ್ ತಲ್ವಾರ್‌ನಿಂದ ಕೇಕ್ ಕತ್ತರಿಸಿದಕ್ಕೆ ಕ್ಷಮೆಯಾಚಿಸಿದ್ದಾರೆ. ಹುಟ್ಟುಹಬ್ಬ ಆಚರಣೆಯ ವೇಳೆ ಯಾರೋ ತಲ್ವಾರ್ ಕೊಟ್ರು. ಈ ವೇಳೆ ನಾನು ಗೊತ್ತಿಲ್ಲದೆ ಕೇಕ್ ಕಟ್ ಮಾಡಿದ್ದೇನೆ. ಇದಕ್ಕೆ ನಾನು ಕ್ಷಮೆ ಕೇಳುತ್ತೇನೆ. ಈ ಬಗ್ಗೆ ಪೊಲೀಸರಿಗೂ ನಾನು ಸ್ಪಷ್ಟನೆಯನ್ನು ನೀಡುತ್ತೇನೆ ಎಂದು ನಟ ದುನಿಯಾ ವಿಜಯ್ ಕ್ಷಮೆಯಾಚಿಸಿದ್ದಾರೆ.

ಹುಟ್ಟುಹಬ್ಬದಂದೆ ಸಲಗ ಟೀಸರ್ ರಿಲೀಸ್: ನಿನ್ನೆ ತಡರಾತ್ರಿ ರಾಜ್ಯದ ಅನೇಕ ಕಡೆಗಳಿಂದ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮನೆಗೆ ತೆರಳಿ ದುನಿಯಾ ವಿಜಿಯ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. ಇದೇ ವೇಳೆ ಸಲಗ ಚಿತ್ರದ ಟೀಸರ್ ಕೂಡ ಬಿಡುಗಡೆ ಮಾಡಿದ್ದು, ಟೀಸರ್ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

ನನ್ನ ಬರ್ತಡೇ ಅನ್ನೋದಕ್ಕಿಂತ ಇದು ಸಲಗ ಚಿತ್ರದ ಬರ್ತಡೆ. ಸ್ನೇಹದಲ್ಲಿ ಬದುಕೋದು ನನಗೆ ಇಷ್ಟ. ಚಿತ್ರದ ನಿರ್ದೇಶಕನಾದ ಮೇಲೆ ಇದು ಮೊದಲ ಹುಟ್ಟುಹಬ್ಬ. ಹೀಗಾಗಿ ಸಲಗದ ಹುಟ್ಟುಹಬ್ಬವಿದು. ಫೆಬ್ರವರಿ 14ಕ್ಕೆ ಮತ್ತೊಂದು ಸಾಂಗ್ ಟ್ರೈಲರ್ ಬಿಡ್ತೇವೆ. ನಮ್ಮ ಚಿತ್ರ ತಂಡ ನನಗೆ ಬಲ ತಂದು ಕೊಟ್ಟಿದೆ ಎಂದು ವಿಜಿ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.

Published On - 10:52 am, Mon, 20 January 20

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ