AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನ ಕಳ್ಳಸಾಗಣೆ: ನಟಿ ರನ್ಯಾ ರಾವ್​ ಜಾಮೀನು ಅರ್ಜಿ ವಜಾ, ನೀಡಿದ ಕಾರಣಗಳೇನು?

Ranya Rao: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ ಆಗಿದೆ. ಮಾರ್ಚ್ 03 ರಂದು ಡಿಆರ್​ಐ ಅಧಿಕಾರಿಗಳು ರನ್ಯಾ ರಾವ್ ಅವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು. ಇದೀಗ ಜಾಮೀನು ಅರ್ಜಿ ವಜಾ ಆಗಿದ್ದು, ಇನ್ನಷ್ಟು ದಿನ ಪರಪ್ಪನ ಅಗ್ರಹಾರದಲ್ಲಿಯೇ ಕಳೆಯಬೇಕಿದೆ ರನ್ಯಾ.

ಚಿನ್ನ ಕಳ್ಳಸಾಗಣೆ: ನಟಿ ರನ್ಯಾ ರಾವ್​ ಜಾಮೀನು ಅರ್ಜಿ ವಜಾ, ನೀಡಿದ ಕಾರಣಗಳೇನು?
Ranya Rao
Follow us
ಮಂಜುನಾಥ ಸಿ.
|

Updated on:Mar 27, 2025 | 3:34 PM

ಚಿನ್ನ ಅಕ್ರಮ ಕಳ್ಳಸಾಗಣೆ ಪ್ರಕರಣದ ಆರೋಪಿ ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ ಆಗಿದೆ. ಪ್ರಕರಣದ ಗಂಭೀರತೆ ಪರಿಗಣಿಸಿ ಹಾಗೂ ನಟಿಯ ಪ್ರಭಾವ ಗಮಿನಿಸಿದಂತಿರುವ 64 ನೇ ಸಿಸಿಹೆಚ್ ನ್ಯಾಯಾಲಯವು ನಟಿಯ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ನಟಿ ರನ್ಯಾ ರಾವ್ ಇನ್ನೂ ಕೆಲ ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಕಳೆಯಬೇಕಾಗಿದೆ.

ರನ್ಯಾ ರಾವ್ ಕೇಸ್ ನಲ್ಲಿ ಅಂತರರಾಷ್ಟ್ರೀಯ ಲಿಂಕ್ ಗಳು ಇವೆ, ಕಸ್ಟಮ್ಸ್ ಬ್ಯಾಬೇಜ್ ನಿಯಮ ಉಲ್ಲಂಘನೆ ಮಾಡಲಾಗಿದೆ, ಹೊರ ಬಂದಲ್ಲಿ ಸಾಕ್ಷಿ ನಾಶ ಮತ್ತು ತನಿಖೆಯ ಹಾದಿ ತಪ್ಪಿಸಬಹುದು. ಆಕೆ ಒಂದು ವರ್ಷದ ಅವಧಿಯಲ್ಲಿ ಇಪತ್ತೇಳು ಬಾರಿ ವಿದೇಶಿ ಪ್ರಯಾಣ ಮಾಡಿದ್ದಾರೆ, ಈಕೆಯಿಂದ ಮೂವತ್ತೆಂಟು ಪರ್ಸೆಂಟ್ ಕಸ್ಟಮ್ಸ್ ಸುಂಕ ವಂಚನೆ ಆಗಿದೆ. ಒಟ್ಟು 4,83,72,694 ರೂ ಸುಂಕ ವಂಚನೆ ಆಗಿದೆ. ಜಾಮೀನು ಕೊಟ್ಟರೆ ದೇಶ ಬಿಡುವ ಸಾಧ್ಯತೆ ಇದೆ. ಪ್ರಭಾವಿಗಳು ಪ್ರಕರಣದಲ್ಲಿದ್ದು ತನಿಖೆಯ ಹಾದಿ ತಪ್ಪಿಸುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಜಾಮೀನು ಅರ್ಜಿ ವಜಾ ಆಗಿದೆ.

ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅನ್ನು ಡಿಆರ್​ಐ ಅಧಿಕಾರಿಗಳು ಮಾರ್ಚ್ 3 ರಂದು ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು. ಆ ಬಳಿಕ ನಡೆದ ತನಿಖೆಯಲ್ಲಿ ಹಲವು ಆಘಾತಕಾರಿ ಅಂಶಗಳು ಹೊರಬಂದಿದ್ದವು. ನಟಿ ರನ್ಯಾ ರಾವ್ ಬರೋಬ್ಬರಿ 14 ಕೆಜಿಗೂ ಹೆಚ್ಚಿನ ತೂಕದ ಚಿನ್ನವನ್ನು ಕಳ್ಳ ಸಾಗಣೆ ಮಾಡುವಾಗ ಸಿಕ್ಕಿ ಬಿದ್ದಿದ್ದಳು. ನಟಿ ರನ್ಯಾ ರಾವ್, ಸರ್ಕಾರದ ಉನ್ನತ ಅಧಿಕಾರಿಗಳಿಗೆ ನೀಡಲಾಗುವ ಸವಲತ್ತುಗಳನ್ನು ಬಳಸಿಕೊಂಡು ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಅಂಶ ಆ ನಂತರ ಬಹಿರಂಗವಾಯ್ತು.

ರನ್ಯಾ ರಾವ್ ಹಿಂದೆ ಕೆಲವು ಸಚಿವರು, ಶಾಸಕರು ಇರುವ ವಿಷಯ ಸಹ ಸುದ್ದು ಮಾಡಿತು. ರನ್ಯಾ ರಾವ್ ಬಂಧನ ಪ್ರಕರಣ ವಿಧಾನಸಭೆಯಲ್ಲಿಯೂ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. ರನ್ಯಾ ರಾವ್​ಗೆ ಶಿರಾ ಕೈಗಾರಿಕಾ ಪ್ರದೇಶದಲ್ಲಿ ಈ ಹಿಂದೆ ಇದ್ದ ಸರ್ಕಾರ 12 ಎಕರೆ ಜಮೀನು ಮಂಜೂರು ಮಾಡಿದ ವಿಷಯವೂ ಬಹಿರಂಗವಾಯ್ತು. ಮಾತ್ರವಲ್ಲದೆ, ಸರ್ಕಾರಿ ಅಧಿಕಾರಿಗಳನ್ನು, ವಿಶೇಷವಾಗಿ ಪೊಲೀಸ್ ವಾಹನಗಳು, ಸಿಬ್ಬಂದಿಗಳನ್ನು ನಟಿ ರನ್ಯಾ ತನ್ನ ಖಾಸಗಿ ವಿಷಯಗಳಿಗೆ ಬಳಸಿಕೊಂಡ ವಿಷಯಗಳು ತನಿಖೆಯಿಂದ ಬಹಿರಂಗವಾಗಿ ರಾಜ್ಯ ಮಾತ್ರವಲ್ಲದೆ ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದವು.

ಇದನ್ನೂ ಓದಿ:ಸಲ್ಮಾನ್ ಖಾನ್ ಸಿನಿಮಾದಲ್ಲಿ ಕಂತೆ ಕಂತೆ ನಕಲಿ ನೋಟು ಬಳಕೆ; ಇಲ್ಲಿದೆ ಸಾಕ್ಷಿ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ, ನಟಿಯ ಜೊತೆಗೆ ಆಕೆಯ ಬಾಯ್​ಫ್ರೆಂಡ್ ಆಗಿರುವ ತೆಲುಗು ಚಿತ್ರರಂಗದ ನಟ ತರುಣ್ ಕೊಂಡೂರು ಅನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರದಂದು ಡಿಆರ್​ಐ ಅಧಿಕಾರಿಗಳು ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಚಿನ್ನದ ವ್ಯಾಪಾರಿ ಸಾಹಿಲ್ ಸಕಾರಿಯಾ ಜೈನ್ ಎಂಬಾತನನ್ನು ಬಂಧಿಸಲಾಗಿದೆ. ಈ ವ್ಯಕ್ತಿ ರನ್ಯಾ ತಂದ ಚಿನ್ನವನ್ನು ಕರಗಿಸುವ ಕೆಲಸ ಮತ್ತು ಮಾರಾಟ ಮಾಡುವ ಕೆಲಸ ಮಾಡುತ್ತಿದ್ದನಂತೆ. ರನ್ಯಾ ಚಿನ್ನ ಕಳ್ಳಸಾಗಣೆ ಮಾಡುವಲ್ಲಿ, ಸಾಹಿಲ್ ಸಕಾರಿಯಾ ಜೈನ್ ಹಲವು ಬಾರಿ ಸಹಾಯ ಮಾಡಿದ್ದನಂತೆ. ದುಬೈನಿಂದ ರನ್ಯಾ, ಸಾಹಿಲ್​ಗೆ ಕರೆ ಮಾಡುತ್ತಿದ್ದಳಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:30 pm, Thu, 27 March 25

ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್