ಅಕ್ರಮ ಚಿನ್ನ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್​ 3 ದಿನ ಡಿಆರ್​ಐ ಕಸ್ಟಡಿಗೆ

|

Updated on: Mar 07, 2025 | 3:17 PM

ನ್ಯಾಯಾಂಗ ಬಂಧನದಲ್ಲಿ ಇದ್ದ ನಟಿ ರನ್ಯಾ ರಾವ್ ಅವರನ್ನು ಈಗ ಡಿಆರ್​ಐ ಕಸ್ಟಡಿಗೆ ಒಪ್ಪಿಸಲಾಗಿದೆ. ಮೂರು ದಿನಗಳ ಕಾಲ ಅವರನ್ನು ಡಿಆರ್​ಐ ಕಸ್ಟಡಿಗೆ ನೀಡಲಾಗಿದ್ದು, ತನಿಖೆ ತೀವ್ರಗೊಳ್ಳಲಿದೆ. ದುಬೈನಿಂದ 14 ಕೆಜಿ ಚಿನ್ನವನ್ನು ಕಳ್ಳ ಸಾಗಾಣಿಕೆ ಮಾಡುವಾಗ ರನ್ಯಾ ರಾವ್ ಸಿಕ್ಕಿಬಿದ್ದಿದ್ದು, ಇದರಲ್ಲಿ ಹಲವರು ಭಾಗಿ ಆಗಿರುವ ಶಂಕೆ ಇದೆ.

ಅಕ್ರಮ ಚಿನ್ನ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್​ 3 ದಿನ ಡಿಆರ್​ಐ ಕಸ್ಟಡಿಗೆ
Ranya Rao
Follow us on

ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ನಟಿ ರನ್ಯಾ ರಾವ್ (Ranya Rao) ಅವರಿಗೆ ಸಂಕಷ್ಟ ಇನ್ನಷ್ಟು ಹೆಚ್ಚಾಗಿದೆ. ಅವರನ್ನು ಮೂರು ದಿನಗಳ ಕಾಲ ಡಿಆರ್​ಐ ಅಧಿಕಾರಿಗಳ ಕಸ್ಟಡಿಗೆ ನೀಡಲಾಗಿದೆ. ಇತ್ತೀಚೆಗೆ ರನ್ಯಾ ರಾವ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈಗ ಅವರನ್ನು ಡಿಆರ್​ಐ ಕಸ್ಟಡಿಗೆ ನೀಡಲಾಗಿದೆ. ಆರ್ಥಿಕ ಅಪರಾಧಗಳ ನ್ಯಾಯಾಲಯ ಈ ಆದೇಶ ನೀಡಿದೆ. ಚಿನ್ನ ಕಳ್ಳ ಸಾಗಾಣಿಕೆ ಕೇಸ್​ನಲ್ಲಿ ರನ್ಯಾ ಅವರು ಹಲವು ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಡಿಆರ್​ಐ ಅಧಿಕಾರಿಗಳು ಕಸ್ಟಡಿಗೆ ಪಡೆದಿದ್ದಾರೆ.

ಬರೋಬ್ಬರಿ 14 ಕೆಜಿ ಚಿನ್ನ ಕಳ್ಳ ಸಾಗಾಣಿಕೆ ಮಾಡುವಾಗ ರನ್ಯಾ ರಾವ್ ಅವರು ರೆಡ್​ಹ್ಯಾಂಡ್​ ಆಗಿ ಸಿಕ್ಕಿ ಬಿದ್ದರು. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಬಂಧಿಸಲಾಯಿತು. ಕೇಸ್ ಬಗ್ಗೆ ಹೆಚ್ಚಿನ ತನಿಖೆ ಅಗತ್ಯ ಇರುವುದರಿಂದ ರನ್ಯಾ ಅವರನ್ನು ತಮ್ಮ ಕಸ್ಟಡಿಗೆ ನೀಡಬೇಕು ಎಂದು ಡಿಆರ್​ಐ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಿದ್ದರು. ನಟಿಗೆ ಜಾಮೀನು ನೀಡಬಾರದು ಎಂದು ಕೂಡ ಅಧಿಕಾರಿಗಳ ಪರ ವಕೀಲರು ವಾದ ಮಾಡಿದ್ದರು.

ನಟಿ ರನ್ಯಾ ಅವರದ್ದು ಹೈ ಪ್ರೊಫೈಲ್ ಕುಟುಂಬ. ಅವರ ಮಲತಂದೆ ಡಿಜಿಪಿ ಕೆ. ರಾಮಚಂದ್ರ ರಾವ್. ರನ್ಯಾ ಅವರಿಗೆ ಹಲವು ಪ್ರಭಾವಿ ವ್ಯಕ್ತಿಗಳ ಜೊತೆ ಸಂಪರ್ಕ ಇರುವ ಸಾಧ್ಯತೆ ಇದೆ. ಹಾಗಾಗಿಯೇ ಅವರು ಚಿನ್ನ ಕಳ್ಳ ಸಾಗಾಣಿಕೆ ವೇಳೆ ಹಲವು ಬಾರಿ ಭದ್ರತಾ ತಪಾಸಣೆಯಿಂದ ಎಸ್ಕೇಪ್ ಆಗಿರುವ ಸಾಧ್ಯತೆ ಇದೆ. ಈ ಪ್ರಕರಣದಲ್ಲಿ ಇನ್ನೂ ಯಾರೆಲ್ಲ ಶಾಮೀಲು ಆಗಿದ್ದಾರೆ ಎಂಬುದನ್ನು ತಿಳಿಯಲು ಡಿಆರ್​ಐ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ.

ಇದನ್ನೂ ಓದಿ
ಅಪ್ಪ ಪೋಲಿಸ್.. ಮಗಳು ಕಳ್ಳಿ.. ನಟಿ ರನ್ಯಾ ಚಿನ್ನದ ರಹಸ್ಯ!
ನಟಿ ರನ್ಯಾ ಚಿನ್ನ ಸ್ಮಗ್ಲಿಂಗ್​ನಲ್ಲಿ ಮಲತಂದೆ ಡಿಜಿಪಿಯ ಕೈವಾಡವೂ ಇತ್ತೇ?
ರನ್ಯಾ ರಾವ್ ಪ್ರಕರಣ, ಚಿನ್ನ, ನಗದು ಸೇರಿ 17.29 ಕೋಟಿ ಪತ್ತೆ
ಚಿನ್ನ ಕಳ್ಳಸಾಗಣೆ: ಮಾರ್ಚ್ 18ರವರೆಗೆ ನಟಿ ರನ್ಯಾ ರಾವ್​ಗೆ ನ್ಯಾಯಾಂಗ ಬಂಧನ

ರನ್ಯಾ ಅವರು ಪ್ರಭಾವಿ ಮಹಿಳೆ ಆದ್ದರಿಂದ ಪ್ರೋಟೋಕಾಲ್ ದುರ್ಬಳಕೆ ಮಾಡಿಕೊಂಡಿದ್ದರು. ಅಂಥ ಮಹಿಳೆಯನ್ನು ಜೈಲಾಧಿಕಾರಿಗಳ ಮುಂದೆ ಹೇಗೆ ವಿಚಾರಣೆ ಮಾಡಲು ಸಾಧ್ಯ? ರನ್ಯಾ ರಾವ್ ಸುತ್ತ ದೊಡ್ಡ ಸಿಂಡಿಕೇಟ್‌ ಇದೆ. ಸಿಂಡಿಕೇಟ್ ಬ್ರೇಕ್ ಮಾಡಲು ನಟಿಯನ್ನು ಕಸ್ಟಡಿಗೆ ನೀಡಬೇಕು. ದುಬೈಗೆ ಎಷ್ಟು ಬಾರಿ ಹೋಗಿದ್ದಾರೆ ಮತ್ತು ಯಾಕೆ ಹೋಗಿದ್ದಾರೆ ಎಂದು ಅವರೇ ಉತ್ತರಿಸಬೇಕು. ಹಾಗಾಗಿ ಅವರನ್ನು ಡಿಆರ್​ಐ ಅಧಿಕಾರಿಗಳ ಕಸ್ಟಡಿಗೆ ನೀಡಬೇಕೆಂದು ಅಧಿಕಾರಿಗಳ ಪರ ವಕೀಲರು ವಾದ ಮಾಡಿದ್ದರು.

ಇದನ್ನೂ ಓದಿ: ಹೇಗಿದ್ದ ರನ್ಯಾ ರಾವ್ ಹೇಗಾದ್ರು ನೋಡಿ: ಜೈಲು ಸೇರಿದ ಎರಡೇ ದಿನಕ್ಕೆ ಮಂಕಾದ ನಟಿ

ತನಿಖೆ ತೀವ್ರಗೊಂಡಂತೆಲ್ಲ ಈ ಕೇಸ್​​ಗೆ ಸಂಬಂಧಿಸಿಂತೆ ಹಲವು ಶಾಕಿಂಗ್ ಸಂಗತಿಗಳು ಹೊರಬರುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಡಿಆರ್​ಐ ಅಧಿಕಾರಿಗಳು ಸಾಕಷ್ಟು ಮಾಹಿತಿ ಸಂಗ್ರಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.