AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಣಾ ದಗ್ಗುಬಾಟಿ ಆಫೀಸ್​ನಲ್ಲಿ ಅಪ್ಪು​ ಪುತ್ಥಳಿ; ಫೋಟೋ ತೋರಿಸಿ ಹೆಮ್ಮೆಯಿಂದ ಹೇಳಿಕೊಂಡ ನಟ

Puneeth Rajkumar | Rana Daggubati: ರಾಣಾ ದಗ್ಗುಬಾಟಿ ಅವರಿಗೆ ಪುನೀತ್​ ರಾಜ್​ಕುಮಾರ್​ ಮೇಲೆ ವಿಶೇಷ ಗೌರವ ಇದೆ. ಅವರ ಕಚೇರಿಯಲ್ಲಿ ಇರುವ ಈ ಪುತ್ಥಳಿಯೇ ಅದಕ್ಕೆ ಸಾಕ್ಷಿ ನೀಡುತ್ತದೆ.

ರಾಣಾ ದಗ್ಗುಬಾಟಿ ಆಫೀಸ್​ನಲ್ಲಿ ಅಪ್ಪು​ ಪುತ್ಥಳಿ; ಫೋಟೋ ತೋರಿಸಿ ಹೆಮ್ಮೆಯಿಂದ ಹೇಳಿಕೊಂಡ ನಟ
ಪುನೀತ್​ ರಾಜ್​ಕುಮಾರ್ ಪುತ್ಥಳಿ, ರಾಣಾ ದಗ್ಗುಬಾಟಿ
TV9 Web
| Edited By: |

Updated on: Oct 04, 2022 | 11:39 AM

Share

ಎಲ್ಲರ ಪ್ರೀತಿಯ ‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ (Puneeth Rajkumar) ನಿಧನರಾಗಿ ಒಂದು ವರ್ಷ ಸಮೀಪಿಸುತ್ತಿದೆ. ಎಷ್ಟೇ ತಿಂಗಳುಗಳು ಉರುಳಿದರೂ ಕೂಡ ಅಭಿಮಾನಿಗಳ ಎದೆಯಲ್ಲಿ ನೋವು ಕಡಿಮೆ ಆಗಿಲ್ಲ. ಒಂದಿಲ್ಲೊಂದು ರೀತಿಯಲ್ಲಿ ಜನರು ಪುನೀತ್​ ರಾಜ್​ಕುಮಾರ್​ ಅವರಿಗೆ ನಮನ ಸಲ್ಲಿಸುತ್ತಲೇ ಇದ್ದಾರೆ. ಅಭಿಮಾನಿಗಳು ಮಾತ್ರವಲ್ಲದೇ ಸ್ಟಾರ್​ ಕಲಾವಿದರು ಕೂಡ ಅಪ್ಪು ಕುರಿತು ನೆನಪಿನ ಪುಟ ತೆರೆಯುತ್ತಿದ್ದಾರೆ. ಕನ್ನಡ ಚಿತ್ರರಂಗದ ಎಲ್ಲರ ಜೊತೆಗೂ ಪುನೀತ್​ ಬಾಂಧವ್ಯ ಹೊಂದಿದ್ದರು. ಅದೇ ರೀತಿ ಪರಭಾಷೆಯ ಅನೇಕ ಸೆಲೆಬ್ರಿಟಿಗಳು ಕೂಡ ಅಪ್ಪು ಸ್ನೇಹಕ್ಕೆ ಮನಸೋತಿದ್ದರು. ಈಗ ಅವರನ್ನು ಎಲ್ಲರೂ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ವಿಶೇಷ ಏನೆಂದರೆ, ಟಾಲಿವುಡ್​ ನಟ ರಾಣಾ ದಗ್ಗುಬಾಟಿ (Rana Daggubati) ಅವರ ಕಚೇರಿಯಲ್ಲಿ ಪುನೀತ್​ ರಾಜ್​ಕುಮಾರ್​ ಪುತ್ಥಳಿ ಇದೆ!

ತಮ್ಮ ಆಫೀಸ್​ನಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಪುತ್ಥಳಿ ಇದೆ ಎಂಬುದನ್ನು ರಾಣಾ ದಗ್ಗುಬಾಟಿ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಬಗ್ಗೆ ಅವರೊಂದು ಫೋಟೋ ಹಂಚಿಕೊಂಡಿದ್ದಾರೆ. ‘ತುಂಬ ಸುಂದರವಾದ ಸ್ಮರಣಿಕೆ ಇಂದು ನನ್ನ ಕಚೇರಿಗೆ ಬಂತು. ಮಿಸ್​ ಯೂ ಮೈ ಫ್ರೆಂಡ್​ ಪುನೀತ್​ ರಾಜ್​ಕುಮಾರ್​’ ಎಂದು ರಾಣಾ ದಗ್ಗುಬಾಟಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ
Image
Puneeth Rajkumar: ಪುನೀತ್​ ರಾಜ್​ಕುಮಾರ್ ಇಲ್ಲದೇ ಕಳೆಯಿತು 11 ತಿಂಗಳು; ಸಮಾಧಿ ಬಳಿ ಕಣ್ಣೀರು ಹಾಕಿದ ಫ್ಯಾನ್ಸ್​
Image
ಹೊಸಪೇಟೆ ಪುನೀತ್ ಪುತ್ಥಳಿಗೆ ವಿನಯ್ ರಾಜ್​ಕುಮಾರ್ ಮಾಲಾರ್ಪಣೆ
Image
Kantara: ‘ಕಾಂತಾರ’ ಚಿತ್ರಕ್ಕೆ ಪುನೀತ್​ ಹೀರೋ ಆಗ್ಬೇಕಿತ್ತು; ಆ ಸ್ಥಾನಕ್ಕೆ ರಿಷಬ್ ಶೆಟ್ಟಿ ಬಂದಿದ್ದು ಹೇಗೆ? ಇಲ್ಲಿದೆ ಉತ್ತರ
Image
ಪುನೀತ್ ಜನ್ಮದಿನ ಇನ್ಮುಂದೆ ‘ಸ್ಫೂರ್ತಿ ದಿನ’; ಸಚಿವ ಸುನೀಲ್ ಕುಮಾರ್ ಮನವಿ ಪುರಸ್ಕರಿಸಿದ ಸಿಎಂ ಬೊಮ್ಮಾಯಿ

ರಾಣಾ ಹಂಚಿಕೊಂಡಿರುವ ಈ ಫೋಟೋ ನೋಡಿ ಪುನೀತ್​ ರಾಜ್​ಕುಮಾರ್​ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಅಪ್ಪು ನಿಧನರಾದಾಗ ಪರಭಾಷೆಯ ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿ​ದ್ದರು. ಬೇರೆ ಬೇರೆ ರಾಜ್ಯಗಳ ಹಲವಾರು ನಟ-ನಟಿಯರು, ತಂತ್ರಜ್ಞರು ಪುನೀತ್​ ನಿವಾಸಕ್ಕೆ ಆಗಮಿಸಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು. ಇಂದಿಗೂ ಅನೇಕ ವೇದಿಕೆಯಲ್ಲಿ ಪರಭಾಷೆ ಸೆಲೆಬ್ರಿಟಿಗಳು ಅಪ್ಪು ಗುಣಗಾನ ಮಾಡುತ್ತಾರೆ.

ಪುನೀತ್​ ರಾಜ್​ಕುಮಾರ್​ ಅವರು ವಿಶೇಷ ಕಾಳಜಿ ವಹಿಸಿ ತಯಾರಿಸಿದ ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಅಕ್ಟೋಬರ್ 28ರಂದು ಚಿತ್ರಮಂದಿರಗಳಲ್ಲಿ ಈ ಡಾಕ್ಯುಮೆಂಟರಿ ರಿಲೀಸ್​ ಆಗಲಿರುವುದು ವಿಶೇಷ. ಕರ್ನಾಟಕದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ಕುರಿತಾದ ಈ ಸಾಕ್ಷ್ಯಚಿತ್ರ ನೋಡಲು ಅಭಿಮಾನಿಗಳು ಕಾದಿದ್ದಾರೆ. ಹಲವು ಸೆಲೆಬ್ರಿಟಿಗಳು ಕೂಡ ಈ ಬಗ್ಗೆ ಟ್ವೀಟ್​ ಮಾಡುತ್ತಿದ್ದಾರೆ.

ಇಂದು ಪುನೀತ್​ ಭೌತಿಕವಾಗಿ ನಮ್ಮೊಂದಿಗೆ ಇಲ್ಲದೇ ಇರಬಹುದು. ಆದರೆ ಸಾಮಾಜಿಕ ಕಾರ್ಯಗಳ ಮೂಲಕ, ಸಿನಿಮಾಗಳ ಮೂಲಕ ಎಂದಿಗೂ ಅವರು ಅಭಿಮಾನಿಗಳ ಎದೆಯಲ್ಲಿ ಶಾಶ್ವತವಾಗಿ ನೆಲೆಸಿರುತ್ತಾರೆ. ಎಷ್ಟೋ ಊರಿನ ರಸ್ತೆ, ವೃತ್ತ, ಪಾರ್ಕ್​ಗಳಿಗೆ ಪುನೀತ್​ ರಾಜ್​ಕುಮಾರ್​ ಹೆಸರು ಇಡಲಾಗಿದೆ. ಅನೇಕರು ತಮ್ಮ ಮಕ್ಕಳಿಗೆ ಅಪ್ಪು, ಪುನೀತ್​ ಎಂದು ನಾಮಕರಣ ಮಾಡಿ ಅಭಿಮಾನ ಮೆರೆಯುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ