ಇಷ್ಟೊಂದು ಸಾವು-ನೋವಿನಲ್ಲಿ ಸಂಭ್ರಮಿಸುವುದು ಸರಿಯಲ್ಲ; ಅಭಿಮಾನಿಗಳಿಗೆ ಗಣೇಶ್​ ವಿಶೇಷ ಮನವಿ

Ganesh Birthday: ಜು.2ರಂದು ಗೋಲ್ಡನ್​ ಸ್ಟಾರ್​ ಗಣೇಶ್​ ಜನ್ಮದಿನ. ಹಾಗಾಗಿ, ಹುಟ್ಟುಹಬ್ಬ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಅವರು ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

ಇಷ್ಟೊಂದು ಸಾವು-ನೋವಿನಲ್ಲಿ ಸಂಭ್ರಮಿಸುವುದು ಸರಿಯಲ್ಲ; ಅಭಿಮಾನಿಗಳಿಗೆ ಗಣೇಶ್​ ವಿಶೇಷ ಮನವಿ
ಗಣೇಶ್​
Follow us
ಮದನ್​ ಕುಮಾರ್​
|

Updated on:Jun 29, 2021 | 10:07 AM

ಕೊರೊನಾ ವೈರಸ್​ನಿಂದಾಗಿ ಎಲ್ಲ ಕ್ಷೇತ್ರಗಳ ರೀತಿ ಚಿತ್ರರಂಗ ಕೂಡ ತತ್ತರಿಸಿದೆ. ಆರ್ಥಿಕ ನಷ್ಟದ ಹೊಡೆತ ಒಂದುಕಡೆಯಾದರೆ, ಜನರು ಪ್ರಾಣಗಳನ್ನು ಕಳೆದುಕೊಂಡಿರುವ ನೋವು ಇನ್ನೊಂದು ಕಡೆ. ಈ ಸಂದರ್ಭದಲ್ಲಿ ಯಾವುದೇ ಸಂಭ್ರಮಾಚರಣೆ ಬೇಡ ಎಂದು ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಹೇಳಿದ್ದಾರೆ. ಜು.2ರಂದು ಅವರ ಜನ್ಮದಿನ. ಹಾಗಾಗಿ, ಹುಟ್ಟುಹಬ್ಬ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಅವರು ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಎಲ್ಲರಿಗಾಗಿ ಪತ್ರ ಬರೆದಿದ್ದಾರೆ.

‘ಪ್ರೀತಿಯ ಅಭಿಮಾನಿ ಗೆಳೆಯರಿಗೆ… ಎಲ್ಲರಿಗೂ ನಿಮ್ಮ ಗಣೇಶ್​ ಮಾಡುವ ನಮಸ್ಕಾರಗಳು. ಮೊದಲಿಗೆ ನನಗೆ ಅರಿವಿದ್ದು ಅರಿವಿಲ್ಲದೆಯೋ ಈ ಕೊವಿಡ್​ ಸಮಯದಲ್ಲಿ ನನ್ನ ಹೆಸರಿನಲ್ಲಿ ಮಾಡಿರುವ ಕೆಲಸಗಳಿಗೆ ನಿಮಗೆ ಪ್ರಣಾಮಗಳು. ಈ ಮೂಲಕ ನಿಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ, ಪ್ರತಿ ವರ್ಷ ನನ್ನ ಜನ್ಮದಿನವನ್ನು ಹಬ್ಬದಂತೆ ಆಚರಿಸಿ ಆಶೀರ್ವದಿಸುತ್ತಾ ಬಂದಿದ್ದೀರಿ. ಆದರೆ ಈ ವರ್ಷ ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಸಿಕ್ಕು ನನ್ನ ಹಲವು ಸಿನಿಮಾ ಸಹೋದ್ಯೋಗಿಗಳು, ಆತ್ಮೀಯರು ಗೆಳೆಯರು ಬಲಿಯಾಗಿದ್ದು ನೋವು ತರಿಸಿದೆ. ಅದೆಷ್ಟೋ ಜನರ ಜೀವನ ನಲುಗಿ ಹೋಗಿದೆ’ ಎಂದು ಗಣೇಶ್​ ಹೇಳಿದ್ದಾರೆ.

‘ಇಷ್ಟೆಲ್ಲ ನೋವುಗಳ ನಡುವೆ ಸಂಭ್ರಮಕ್ಕಿದು ಸರಿಹೊಂದುವ ಸಮಯವಲ್ಲ ಎಂದೆನಿಸಿ, ಈ ವರ್ಷ ಜನ್ಮದಿನವನ್ನು ಆಚರಿಸಿಕೊಳ್ಳದಿರಲು ಇಚ್ಛಿಸಿರುತ್ತೇನೆ. ಅಲ್ಲದೇ ನಾನು ಜನ್ಮದಿನದಂದು ಹೊರಾಂಗಣ ಚಿತ್ರೀಕರಣದಲ್ಲಿ ತೊಡಗಿರುತ್ತೇನೆ. ಪ್ರತಿ ವರ್ಷವೂ ಹುಟ್ಟುಹಬ್ಬ ಆಚರಣೆಗೆ ಪ್ರೀತಿಯಿಂದ ನೀವು ತರುವ ಕೇಕ್​, ಹಾರ, ಉಡುಗೊರೆ ಮುಂತಾದವುಗಳಿಗಾಗಿ ಈ ವರ್ಷ ಹಣ ವ್ಯಯಿಸದೇ ಅದೇ ಖರ್ಚಿನ ಮೊತ್ತವನ್ನು ಕೊರೊನಾ ಸಂಕಷ್ಟದಲ್ಲಿ ಇರುವ ಮತ್ತಷ್ಟು ಜೀವಗಳಿಗೆ ಸಹಾಯ ಮಾಡಿ ಎಂದು ಕೇಳಿಕೊಳ್ಳುತ್ತೇನೆ. ಅದೇ ನನಗೆ ಶ್ರೀರಕ್ಷೆ. ಇಂತಿ ನಿಮ್ಮವ ಗಣೇಶ್​’ ಎಂದು ಪತ್ರದಲ್ಲಿ ಗೋಲ್ಡನ್​ ಸ್ಟಾರ್​ ಮನವಿ ಮಾಡಿಕೊಂಡಿದ್ದಾರೆ.

ಹಲವು ಸಿನಿಮಾ ಕೆಲಗಳಲ್ಲಿ ಗಣೇಶ್ ಬ್ಯುಸಿ ಆಗಿದ್ದಾರೆ. ಯೋಗರಾಜ್​ ಭಟ್​ ನಿರ್ದೇಶನ ಮಾಡುತ್ತಿರುವ ‘ಗಾಳಿಪಟ 2’ ಸಿನಿಮಾ ಭಾರಿ ನಿರೀಕ್ಷೆ ಮೂಡಿಸಿದೆ. ನಿರ್ದೇಶಕ ಸಿಂಪಲ್​ ಸುನಿ ಜೊತೆ ಅವರು ‘ಸಖತ್​’ ಚಿತ್ರ ಮಾಡುತ್ತಿದ್ದಾರೆ. ಆ ಸಿನಿಮಾದಲ್ಲಿ ಗಣೇಶ್​ಗೆ ಡಿಫರೆಂಟ್​ ಗೆಟಪ್​ ಇದೆ. ಈ ಸಿನಿಮಾ ತಂಡಗಳಿಂದ ಅವರ ಜನ್ಮದಿನ ಪ್ರಯುಕ್ತ ಹೊಸ ಪೋಸ್ಟರ್​ ಅಥವಾ ಟೀಸರ್​ಗಳ ಗಿಫ್ಟ್​ ಸಿಗುವ ನಿರೀಕ್ಷೆ ಇದೆ.

ಇದನ್ನೂ ಓದಿ:

ಕಣ್ಣಿಲ್ಲದ ವ್ಯಕ್ತಿ ಪಾತ್ರದಲ್ಲಿ ಗೋಲ್ಡನ್​ ಸ್ಟಾರ್​ ಗಣೇಶ್​! ಯಾವ ಸಿನಿಮಾ? ಯಾರದ್ದು ನಿರ್ದೇಶನ?

Published On - 9:54 am, Tue, 29 June 21

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ