Golden Star Ganesh: ಪ್ಯಾನ್​ ಇಂಡಿಯಾ ಸಿನಿಮಾ ಮಾಡಲು ಸಜ್ಜಾದ ಗಣೇಶ್​; ಈ ಚಿತ್ರಕ್ಕೆ ವಿಖ್ಯಾತ್​ ಬಂಡವಾಳ

ಗಣೇಶ್​ ನಟಿಸಲಿರುವ 42ನೇ ಚಿತ್ರವಾಗಿ ಈ ಪ್ಯಾನ್​ ಇಂಡಿಯಾ ಸಿನಿಮಾ ಮೂಡಿಬರಲಿದೆ. ವಿಖ್ಯಾತ್​ ಅವರು ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರವನ್ನು ನಿರ್ಮಿಸಲು ಸಜ್ಜಾಗಿದ್ದಾರೆ.

Golden Star Ganesh: ಪ್ಯಾನ್​ ಇಂಡಿಯಾ ಸಿನಿಮಾ ಮಾಡಲು ಸಜ್ಜಾದ ಗಣೇಶ್​; ಈ ಚಿತ್ರಕ್ಕೆ ವಿಖ್ಯಾತ್​ ಬಂಡವಾಳ
‘ಗೋಲ್ಡನ್​ ಸ್ಟಾರ್​’ ಗಣೇಶ್

Updated on: Jul 02, 2023 | 3:31 PM

ನಟ ‘ಗೋಲ್ಡನ್​ ಸ್ಟಾರ್​’ ಗಣೇಶ್ (Golden Star Ganesh) ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಇಂದು (ಜುಲೈ 2) ಅವರ ಜನ್ಮದಿನದ ಪ್ರಯುಕ್ತ ಒಂದಷ್ಟು ಹೊಸ ಅನೌನ್ಸ್​​ಮೆಂಟ್​ ಆಗಿವೆ. ವಿಶೇಷ ಏನೆಂದರೆ ಇದೇ ಮೊದಲ ಬಾರಿಗೆ ಗಣೇಶ್​ ಅವರು ಪ್ಯಾನ್​ ಇಂಡಿಯಾ ಸಿನಿಮಾವೊಂದನ್ನು (Pan India Movie) ಮಾಡಲು ಮುಂದಾಗಿದ್ದಾರೆ. ಈ ಚಿತ್ರದ ಬಗ್ಗೆ ಇಂದು ಮಾಹಿತಿ ಹೊರಬಿದ್ದಿದೆ. ಕನ್ನಡದ ಖ್ಯಾತ ನಿರ್ಮಾಪಕ ವಿಖ್ಯಾತ್​ (Vikhyath) ಅವರು ಈ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ. ‘ವಿಖ್ಯಾತ್​ ಚಿತ್ರ’ ಬ್ಯಾನರ್​ ಮೂಲಕ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಮೂಡಿಬರಲಿದೆ. ಇದನ್ನು ಅನೌನ್ಸ್​ ಮಾಡುವ ಸಲುವಾಗಿ ಒಂದು ಪೋಸ್ಟರ್​ ಅನಾವರಣ ಮಾಡಲಾಗಿದೆ.

ಕಿರುತೆರೆಯಲ್ಲಿ ನಿರೂಪಕನಾಗಿ ವೃತ್ತಿ ಜೀವನದ ಆರಂಭಿಸಿದ ಗಣೇಶ್​ ಅವರು ನಂತರ ಚಿತ್ರರಂಗಕ್ಕೆ ಕಾಲಿಟ್ಟರು. ಚಿಕ್ಕ-ಪುಟ್ಟ ಪಾತ್ರಗಳನ್ನು ಮಾಡುತ್ತಾ ಅವರು ಹೀರೋ ಆದರು. ‘ಮುಂಗಾರು ಮಳೆ’ ಚಿತ್ರದಿಂದ ಸ್ಟಾರ್​ ನಟನಾಗಿ ಹೊರಹೊಮ್ಮಿದರು. ಹೀಗೆ ಹಂತ ಹಂತವಾಗಿ ಬೆಳೆದು ಬಂದು ಅವರು ಬಹುಬೇಡಿಕೆಯ ಹೀರೋ ಆಗಿ ಗುರುತಿಸಿಕೊಂಡಿದ್ದಾರೆ. ವಿವಿಧ ರೀತಿಯ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ಅವರು ರಂಜಿಸುತ್ತಿದ್ದಾರೆ.

ಪ್ಯಾನ್​ ಇಂಡಿಯಾ ಸಿನಿಮಾಗಳು ಈಗ ಹೆಚ್ಚು ಸದ್ದು ಮಾಡುತ್ತಿವೆ. ಕನ್ನಡದ ಸ್ಟಾರ್ ನಟರು ಈ ಟ್ರೆಂಡ್​ ಫಾಲೋ ಮಾಡುತ್ತಿದ್ದಾರೆ. ಇಡೀ ದೇಶದ ಪ್ರೇಕ್ಷಕರಿಗೆ ಇಷ್ಟ ಆಗುವಂತಹ ಕಥೆ ಇದ್ದರೆ ಅದನ್ನು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ನಿರ್ಮಾಣ ಮಾಡಲಾಗುತ್ತದೆ. ಇದೇ ಮೊದಲ ಬಾರಿಗೆ ಗಣೇಶ್​ ಅವರು ಕೂಡ ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ಇದರ ಪೋಸ್ಟರ್​ ಗಮನ ಸೆಳೆಯುತ್ತಿದೆ. ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

​Golden Star Ganesh: ಹುಟ್ಟುಹಬ್ಬದ ದಿನ ಹೊಸ ಗೆಟಪ್​​ನಲ್ಲಿ ‘ಗೋಲ್ಡನ್​ ಸ್ಟಾರ್​’ ಗಣೇಶ್​; ಭಿನ್ನವಾಗಿದೆ ‘ಕೃಷ್ಣಂ ಪ್ರಣಯ ಸಖಿ’ ಪೋಸ್ಟರ್​

ಗಣೇಶ್​ ಅವರು ನಟಿಸಲಿರುವ 42ನೇ ಚಿತ್ರವಾಗಿ ಈ ಪ್ಯಾನ್​ ಇಂಡಿಯಾ ಸಿನಿಮಾ ಮೂಡಿಬರಲಿದೆ. ಸದ್ಯಕ್ಕೆ ಪ್ರೀ-ಪ್ರೊಡಕ್ಷನ್​ ಕೆಲಸಗಳು ಭರದಿಂದ ಸಾಗುತ್ತಿವೆ. ವಿಖ್ಯಾತ್​ ಅವರು ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾವನ್ನು ನಿರ್ಮಿಸಲು ಸಜ್ಜಾಗಿದ್ದಾರೆ. ನಿರ್ದೇಶನ ಮಾಡುವವರು ಯಾರು? ಗಣೇಶ್​ ಅವರಿಗೆ ಜೋಡಿಯಾಗಿ ಯಾರು ನಟಿಸುತ್ತಾರೆ? ಪಾತ್ರವರ್ಗದಲ್ಲಿ ಇನ್ನೂ ಯಾರೆಲ್ಲ ಇರಲಿದ್ದಾರೆ ಎಂಬಿತ್ಯಾದಿ ಪ್ರಶ್ನೆಗಳಿಗೆ ಮುಂದಿನ ದಿನಗಳಲ್ಲಿ ಉತ್ತರ ಸಿಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us