AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ರೇಟಿಂಗ್, ಮೊದಲ ದಿನದ ಗಳಿಕೆ ಎಷ್ಟು?

ಗುರುವಾರ (ಆಗಸ್ಟ್​ 15) ಬಿಡುಗಡೆ ಆಗಿರುವ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾವನ್ನು ನೋಡಿ ಜನರು ಇಷ್ಟಪಟ್ಟಿದ್ದಾರೆ. ಈ ಚಿತ್ರದಲ್ಲಿ ಶರಣ್ಯ ಶೆಟ್ಟಿ, ‘ಗೋಲ್ಡನ್​ ಸ್ಟಾರ್​’ ಗಣೇಶ್​ ಮೊದಲಾದವರು ನಟಿಸಿದ್ದಾರೆ. ಈ ಚಿತ್ರದಿಂದ ಗಣೇಶ್ ಅವರು ಗೆಲುವು ಕಂಡಿದ್ದಾರೆ.

‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ರೇಟಿಂಗ್, ಮೊದಲ ದಿನದ ಗಳಿಕೆ ಎಷ್ಟು?
ಗಣೇಶ್
ರಾಜೇಶ್ ದುಗ್ಗುಮನೆ
|

Updated on:Aug 16, 2024 | 9:02 AM

Share

ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಆಗಸ್ಟ್ 15ರಂದು ಬಿಡುಗಡೆ ಆಗಿದೆ. ಈ ಚಿತ್ರದಿಂದ ಅವರು ದೊಡ್ಡ ಮಟ್ಟದ ಗೆಲುವು ಕಂಡಿದ್ದಾರೆ. ಈ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ಗಣೇಶ್ ಅವರ ನಟನೆಯನ್ನು ಎಲ್ಲರೂ ಹೊಗಳುತ್ತಿದ್ದಾರೆ. ಸಿನಿಮಾದಲ್ಲಿ ಭರ್ಜರಿ ಕಾಮಿಡಿ ಇದೆ ಎಂಬ ಅಭಿಪ್ರಾಯ ಅನೇಕರಿಂದ ವ್ಯಕ್ತವಾಗಿದೆ. ಮೊದಲ ದಿನ ಈ ಸಿನಿಮಾ ಉತ್ತಮ ಗಳಿಕೆ ಮಾಡಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಮತ್ತಷ್ಟು ಗಳಿಕೆ ಮಾಡುವ ನಿರೀಕ್ಷೆ ಇದೆ.

‘ಕೃಷ್ಣಂ ಪ್ರಣಯ ಸಖಿ’ ಚಿತ್ರದಲ್ಲಿ ಗಣೇಶ್, ರಂಗಾಯಣ ರಘು, ಸಾಧು ಕೋಕಿಲ, ಮಾಳವಿಕಾ ನಾಯರ್, ಶರಣ್ಯಾ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ನೋಡಿದ ಅನೇಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಚಿತ್ರ ಮೊದಲದಿನ 1.25 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು Sacnilk ವೆಬ್​ಸೈಟ್ ವರದಿ ಮಾಡಿದೆ. ಇಂದು (ಆಗಸ್ಟ್ 16), ಶನಿವಾರ (ಆಗಸ್ಟ್ 17), ಭಾನುವಾರ (ಆಗಸ್ಟ್ 18) ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಸಿನಿಮಾ ತಂಡದ ಕಡೆಯಿಂದ ಇನ್ನಷ್ಟೇ ಪಕ್ಕಾ ಲೆಕ್ಕ ಬರಬೇಕಿದೆ.

‘ಕೃಷ್ಣಂ ಪ್ರಣಯ ಸಖಿ’ ಚಿತ್ರಕ್ಕೆ ಬುಕ್ ಮೈ ಶೋನಲ್ಲಿ ಸದ್ಯ (ಆಗಸ್ಟ್​ 16ರ ಮುಂಜಾನೆ 9 ಗಂಟೆ ವೇಳೆಗೆ) 9.2 ರೇಟಿಂಗ್ ಸಿಕ್ಕಿದೆ. ಇನ್ನು, ಐಎಂಡಿಬಿಯಲ್ಲಿ 8.7 ರೇಟಿಂಗ್ ಸಿಕ್ಕಿದೆ. ಶ್ರೀನಿವಾಸ್ ರಾಜು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಿಂದ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಬಲ ಸಿಕ್ಕಿದೆ.

ಇದನ್ನೂ ಓದಿ: ಕೃಷ್ಣಂ ಪ್ರಣಯ ಸಖಿ ಸಿನಿಮಾ ನೋಡಲು ಬಂದ ಜನ ಸಾಗರ; ಶರಣ್ಯ ಶೆಟ್ಟಿಗೆ ಅಚ್ಚರಿ

ಇತ್ತೀಚೆಗೆ ಸಿನಿಮಾಗಳೇ ಇಲ್ಲದೆ ಕನ್ನಡ ಚಿತ್ರರಂಗ ಮಂಕಾಗಿದೆ. ಕಳೆದ ವಾರ ‘ಭೀಮ’ ಸಿನಿಮಾ ರಿಲೀಸ್ ಆಯಿತು. ಈ ವಾರ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಬಿಡುಗಡೆ ಕಂಡು ಯಶಸ್ಸು ಪಡೆದುಕೊಂಡಿದೆ. ಈ ಚಿತ್ರದಿಂದ ಗಣೇಶ್ ಗೆಲುವಿನ ನಗೆ ಬೀರಿದ್ದಾರೆ. ಮತ್ತೆ ಜನರು ಚಿತ್ರರಂಗದತ್ತ ಬರುತ್ತಿರುವುದು ಎಲ್ಲರ ಖುಷಿ ಹೆಚ್ಚಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:01 am, Fri, 16 August 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್