ಬಿಡುಗಡೆಗೆ ಹತ್ತಿರವಾಗುತ್ತಿದೆ ‘ಗೋಲ್ಡನ್​ ಸ್ಟಾರ್’ ಗಣೇಶ್​ ನಟನೆಯ ಹೊಸ ಸಿನಿಮಾ ‘ಕೃಷ್ಣಂ ಪ್ರಣಯ ಸಖಿ’

‘ಗೋಲ್ಡನ್​ ಸ್ಟಾರ್’ ಗಣೇಶ್​ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾಗೆ ಶ್ರೀನಿವಾಸ್​ ರಾಜು ಅವರು ನಿರ್ದೇಶನ ಮಾಡುತ್ತಿದ್ದಾರೆ. ಸಾಕಷ್ಟು ಕಾರಣಗಳಿಂದಾಗಿ ಈ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಸದ್ಯಕ್ಕೆ ಈ ಸಿನಿಮಾಗೆ ಚಿತ್ರೀಕರಣ ಮುಕ್ತಾಯ ಆಗಿದೆ. ಡಬ್ಬಿಂಗ್ ಕಾರ್ಯ ಕೂಡ ಮುಕ್ತಾಯ ಹಂತವನ್ನು ತಲುಪಿದೆ.

ಬಿಡುಗಡೆಗೆ ಹತ್ತಿರವಾಗುತ್ತಿದೆ ‘ಗೋಲ್ಡನ್​ ಸ್ಟಾರ್’ ಗಣೇಶ್​ ನಟನೆಯ ಹೊಸ ಸಿನಿಮಾ ‘ಕೃಷ್ಣಂ ಪ್ರಣಯ ಸಖಿ’
ಮಾಳವಿಕಾ ನಾಯರ್, ಗಣೇಶ್​

Updated on: Dec 06, 2023 | 3:02 PM

ನಟ ‘ಗೋಲ್ಡನ್ ಸ್ಟಾರ್​’ ಗಣೇಶ್​ (Golden Star Ganesh) ಅವರ ಸಿನಿಮಾಗಳೆಂದರೆ ಫ್ಯಾಮಿಲಿ ಪ್ರೇಕ್ಷಕರಿಗೆ ತುಂಬ ಇಷ್ಟ. ಆ ರೀತಿಯ ಕಥೆಗಳನ್ನೇ ಆಯ್ಕೆ ಮಾಡಿಕೊಂಡು ಗಣೇಶ್​ ಸಿನಿಮಾ ಮಾಡುತ್ತಾರೆ. ಆ ಕಾರಣದಿಂದ ಅವರ ಪ್ರತಿ ಸಿನಿಮಾ ಮೇಲೂ ಫ್ಯಾಮಿಲಿ ಪ್ರೇಕ್ಷಕರು ನಿರೀಕ್ಷೆ ಇಟ್ಟುಕೊಳ್ಳುತ್ತಾರೆ. ಈಗ ಗಣೇಶ್​ ಅವರು ‘ಕೃಷ್ಣಂ ಪ್ರಣಯ ಸಖಿ’ (Krishnam Pranaya Sakhi) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ಜೋಡಿಯಾಗಿ ಮಾಳವಿಕಾ ನಾಯರ್ (Malvika Nair) ಅಭಿನಯಿಸುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಯಾವ ಹಂತದಲ್ಲಿ ಸಾಗುತ್ತಿವೆ ಎಂಬ ಬಗ್ಗೆ ಚಿತ್ರತಂಡದಿಂದ ಅಪ್​ಡೇಟ್​ ಸಿಕ್ಕಿದೆ. ಆ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ..

ಕನ್ನಡ ಚಿತ್ರರಂಗದ ಖ್ಯಾತ ಡೈರೆಕ್ಟರ್​ ಶ್ರೀನಿವಾಸ್​ ರಾಜು ಅವರು ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಸಾಕಷ್ಟು ಕಾರಣಗಳಿಂದಾಗಿ ಈ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಸದ್ಯಕ್ಕೆ ಈ ಸಿನಿಮಾಗೆ ಚಿತ್ರೀಕರಣ ಮುಕ್ತಾಯ ಆಗಿದೆ. ಆ ಮೂಲಕ ಅಭಿಮಾನಿಗಳಿಗೆ ಗುಡ್​ ನ್ಯೂಸ್​ ನೀಡಲಾಗಿದೆ. ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಬೆಂಗಳೂರು, ಇಟಲಿ ಮತ್ತು ಮಾಲ್ಟಾದಲ್ಲಿ ಈ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಸಾಧುಕೋಕಿಲ, ಶರಣ್ಯ ಶೆಟ್ಟಿ, ಶಶಿಕುಮಾರ್, ರಂಗಾಯಣ ರಘು, ಶ್ರುತಿ, ಭಾವನಾ, ರಾಮಕೃಷ್ಣ, ಅಶೋಕ್, ಮಾನಸಿ ಸುಧೀರ್, ಶಿವಧ್ವಜ್, ರಘುರಾಮ್, ಗಿರಿ ಶಿವಣ್ಣ, ಅಂಬುಜಾ ಮುಂತಾದವರು ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಸದ್ಯಕ್ಕೆ ಶೂಟಿಂಗ್​ ಮುಗಿಸಿಕೊಂಡಿರುವ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ತಂಡವು ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ತೊಡಗಿಕೊಂಡಿದೆ. ಸಿನಿಮಾದ ಡಬ್ಬಿಂಗ್ ಕಾರ್ಯ ಕೂಡ ಮುಕ್ತಾಯ ಹಂತವನ್ನು ತಲುಪಿದೆ. ಶೀಘ್ರದಲ್ಲೇ ಈ ಚಿತ್ರದ ಬಿಡುಗಡೆ ದಿನಾಂಕದ ಬಗ್ಗೆ ಅಪ್​ಡೇಟ್​ ಸಿಗಲಿದೆ. ಅದನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ವೆಂಕಟ್ ಪ್ರಸಾದ್ ಅವರ ಛಾಯಾಗ್ರಹಣ ಮತ್ತು ಕೆ.ಎಂ. ಪ್ರಕಾಶ್ ಅವರ ಸಂಕಲನ ಈ ಸಿನಿಮಾಗಿದೆ.

ಇದನ್ನೂ ಓದಿ: ‘ಅನುಬಂಧ’ ವೇದಿಕೆ ಮೇಲೆ ‘ಮುಂಗಾರು ಮಳೆ’ ಮರು ಸೃಷ್ಟಿ; ಗಣೇಶ್ ಡೈಲಾಗ್​ಗೆ ಅಭಿಮಾನಿಗಳು ಖುಷ್

‘ಕೃಷ್ಣಂ ಪ್ರಣಯ ಸಖಿ’ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್​ ಜನ್ಯ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ 5 ಹಾಡುಗಳು ಇರಲಿವೆ. ‘ತ್ರಿಶೂಲ್ ಎಂಟರ್​ಟೇನ್ಮೆಂಟ್​’ ಮೂಲಕ ಪ್ರಶಾಂತ್ ಜಿ. ರುದ್ರಪ್ಪ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಈ ಸಂಸ್ಥೆಯಿಂದ ನಿರ್ಮಾಣ ಆಗುತ್ತಿರುವ 3ನೇ ಸಿನಿಮಾ. ‘ಗೋಲ್ಡನ್ ಸ್ಟಾರ್’ ಗಣೇಶ್ ನಟನೆಯ 41ನೇ ಚಿತ್ರವಾಗಿ ‘ಕೃಷ್ಣಂ ಪ್ರಣಯ ಸಖಿ’ ಮೂಡಿಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us