ಈ ವರ್ಷ ಬರ್ತ್ಡೇ ಆಚರಿಸಿಕೊಳ್ಳಲ್ಲ ಎಂದ ಗಣೇಶ್; ‘ಅವರು ನಿಮ್ಮಿಂದ ದೂರಾಗ್ತಾರೆ’ ಎಂದ ಫ್ಯಾನ್ಸ್
ಗಣೇಶ್ ಅವರು ಈ ವರ್ಷ ಬರ್ತ್ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ‘ಜುಲೈ 2ರಂದು ನಾನು ನನ್ನ ಬೆಂಗಳೂರು ನಿವಾಸದಲ್ಲಿ ಲಭ್ಯವಿಲ್ಲ. ಮುಂದಿನ ವರ್ಷ ಖಂಡಿತ ಒಟ್ಟಿಗೆ ಹುಟ್ಟುಹಬ್ಬ ಆಚರಿಸೋಣ’ ಎಂದಿದ್ದಾರೆ ಗಣೇಶ್.
ಸೆಲೆಬ್ರಿಟಿಗಳ ಬರ್ತ್ಡೇ ಬಂತು ಎಂದರೆ ಫ್ಯಾನ್ಸ್ಗೆ ಭರ್ಜರಿ ಖುಷಿ ಆಗುತ್ತದೆ. ತಮ್ಮ ನೆಚ್ಚಿನ ನಟ/ನಟಿಯ ಬರ್ತ್ಡೇನ ಅವರ ಜೊತೆಯೇ ಅದ್ದೂರಿಯಾಗಿ ಆಚರಿಸಲು ಫ್ಯಾನ್ಸ್ ಇಷ್ಟಪಡುತ್ತಾರೆ. ಆದರೆ, ಎಲ್ಲಾ ಸಂದರ್ಭದಲ್ಲೂ ಸಮಯ ಒಂದೇ ರೀತಿ ಇರುವುದಿಲ್ಲ. ಕೆಲವೊಮ್ಮೆ ಸೆಲೆಬ್ರಿಟಿಗಳು ಬರ್ತ್ಡೇನ ಆಚರಿಸಿಕೊಳ್ಳಲು ಇಷ್ಟಪಡುವುದಿಲ್ಲ. ಶೂಟಿಂಗ್ ಕಾರಣದಿಂದ ದೂರ ಇರುತ್ತಾರೆ. ಈ ಬಾರಿ ಗೋಲ್ಡನ್ ಸ್ಟಾರ್ ಗಣೇಶ್ ಕೂಡ ತಮ್ಮ ಬರ್ತ್ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
‘ಮುಂಗಾರು ಮಳೆ’ ಚಿತ್ರದ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಪಡೆದವರು ಗಣೇಶ್. ಆ ಬಳಿಕ ಅವರು ಗೋಲ್ಡನ್ ಸ್ಟಾರ್ ಎಂದೇ ಫೇಮಸ್ ಆದರು. ಅವರು ವೃತ್ತಿ ಜೀವನದಲ್ಲಿ ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಬರ್ತ್ಡೇ ಆಚರಿಸಿಕೊಳ್ಳದೆ ಇರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ವಿಯೆಟ್ನಾಂನಲ್ಲಿ ಶೂಟಿಂಗ್ ಪೂರ್ಣಗೊಳಿಸಿದ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ತಂಡ
‘ನನ್ನ ಆತ್ಮೀಯ ಅಭಿಮಾನಿಗಳೇ, ಜುಲೈ 2ರಂದು ನಾನು ನನ್ನ ಬೆಂಗಳೂರು ನಿವಾಸದಲ್ಲಿ ಲಭ್ಯವಿಲ್ಲ. ಅದೇಕೋ ತಮ್ಮೊಂದಿಗೆ ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕೆಂಬ ನನ್ನ ಹಂಬಲ ಈ ಬಾರಿಯೂ ಕೈಗೂಡುತ್ತಿಲ್ಲ. ಹೀಗಾಗಿ ನನ್ನ ಪ್ರೀತಿಯ ಅಭಿಮಾನಿಗಳು ಮನೆಯ ಬಳಿ ಬಾರದೇ ತಾವು ಇದ್ದಲ್ಲಿಂದಲೇ ನನ್ನನ್ನು ಹರಸಿ, ಆಶೀರ್ವದಿಸಿ. ಮುಂದಿನ ವರ್ಷ ಖಂಡಿತ ಒಟ್ಟಿಗೆ ಹುಟ್ಟುಹಬ್ಬ ಆಚರಿಸೋಣ. ಅನಾನುಕೂಲಕ್ಕೆ ಕ್ಷಮೆಯಿರಲಿ. ಎಂದಿನ ತಮ್ಮ ಅಭಿಮಾನದ ನಿರೀಕ್ಷೆಯೊಂದಿಗೆ, ನಿಮ್ಮವ ಗಣೇಶ’ ಎಂದು ಬರೆದುಕೊಂಡಿದ್ದಾರೆ.
View this post on Instagram
ಗಣೇಶ್ ಅವರ ಈ ಪೋಸ್ಟ್ಗೆ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ‘ಆದಷ್ಟು ಜನಗಳನ್ನು ತಲುಪಲು ಪ್ರಯತ್ನಿಸಿ. ನೀವು ದೂರ ಆದಷ್ಟು ಅವರು ನಿಮ್ಮನ್ನು ಜನರು ಶಾಶ್ವತವಾಗಿ ದೂರ ಮಾಡುತ್ತಾರೆ. ಎಲ್ಲರಿಗೂ ದೇವ್ರು ಆ ಭಾಗ್ಯ ಕೊಡಲ್ಲ. ಕೊಟ್ಟಿದ್ದನ್ನ ಉಳಿಸಿಕೊಳ್ಳಿ. ಹ್ಯಾಪಿ ಬರ್ತ್ಡೇ’ ಎಂದು ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.