AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Movie Ticket Price: ಶುಕ್ರವಾರವೇ ಸಿನಿ ಪ್ರಿಯರಿಗೆ ಸಿಹಿ ಸುದ್ದಿ; 200 ರೂ. ಟಿಕೆಟ್ ದರ ಜಾರಿ; ಷರತ್ತುಗಳೇನು?

Cinema Ticket Fare in Karnataka: ಕರ್ನಾಟಕ ಸರ್ಕಾರವು ಸಿನಿಮಾ ಟಿಕೆಟ್ ದರಗಳಿಗೆ ಮಿತಿ ಹೇರಿದೆ. ಸೆಪ್ಟೆಂಬರ್ 12ರಿಂದ ಏಕಪರದೆ ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ ಟಿಕೆಟ್‌ನ ಮೂಲ ಬೆಲೆ 200 ರೂಪಾಯಿಗಿಂತ ಹೆಚ್ಚಿರಬಾರದು. ತೆರಿಗೆ ಸೇರಿದಂತೆ ಗರಿಷ್ಠ ದರ 236 ಆಗುತ್ತದೆ. ಈ ನಿಯಮ ಜಾರಿಯಿಂದ ಪ್ರೇಕ್ಷಕ ನಿಟ್ಟುಸಿರು ಬಿಟ್ಟಿದ್ದಾರೆ.

Movie Ticket Price: ಶುಕ್ರವಾರವೇ ಸಿನಿ ಪ್ರಿಯರಿಗೆ ಸಿಹಿ ಸುದ್ದಿ; 200 ರೂ. ಟಿಕೆಟ್ ದರ ಜಾರಿ; ಷರತ್ತುಗಳೇನು?
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:Sep 12, 2025 | 12:58 PM

Share

ಪ್ರತಿ ಬಾರಿ ಬಿಗ್ ಬಜೆಟ್ ಸಿನಿಮಾಗಳು ಬರುವಾಗಲೂ ದುಬಾರಿ ಟಿಕೆಟ್ ದರ (Movie Ticket Price) ನಿಗದಿ ಮಾಡಲಾಗುತ್ತದೆ. ಅದರಲ್ಲೂ ಪರಭಾಷಾ ಸಿನಿಮಾಗಳು ಕರ್ನಾಟಕದಲ್ಲಿ ರಿಲೀಸ್ ಆಗುತ್ತವೆ ಎಂದರೆ ಟಿಕೆಟ್ ದರ 500ರಿಂದ ಆರಂಭ ಆಗಿ 1000 ರೂಪಾಯಿ ತಲುಪಿದ ಉದಾಹರಣೆ ಇದೆ. ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಏಕರೂಪ ಟಿಕೆಟ್ ದರ ಜಾರಿಗೆ ತರೋದಾಗಿ ಹೇಳಿತ್ತು. ಸೆಪ್ಟೆಂಬರ್ 12ರಿಂದ ಈ ನಿಯಮ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಇದಕ್ಕೆ ಕೆಲವು ಷರತ್ತುಗಳು ಕೂಡ ಇರಲಿವೆ.

ಮಲ್ಟಿಪ್ಲೆಕ್ಸ್​ಗಳಲ್ಲಿ ಟಿಕೆಟ್ ದರಕ್ಕೆ ಕಡಿವಾಣವೇ ಇಲ್ಲದಂತೆ ಆಗಿತ್ತು. ಇದರಿಂದ ಜನಸಾಮಾನ್ಯರು ಸಿನಿಮಾ ನೋಡೋದು ಕಷ್ಟ ಎಂಬಂತಹ ಪರಿಸ್ಥಿತಿ ನಿರ್ಮಾಣ ಆಗಿತ್ತು. ಈ ಕಾರಣದಿಂದಲೇ ಜನರು ಥಿಯೇಟರ್​​ನತ್ತ ಮುಖ ಮಾಡುವುದಿಲ್ಲ ಎಂಬ ಮಾತುಗಳು ಕೂಡ ಕೇಳಿ ಬಂದವು. ಈಗ ಇದಕ್ಕೆ ಕಡಿವಾಣ ಬಿದ್ದಿದೆ. ಸರ್ಕಾರ ಇಂದು ಹೊಸ ಆದೇಶವನ್ನು ಹೊರಡಿಸಿದೆ.

ಹೊಸ ಆದೇಶವು ಇಂದಿನಿಂದಲೇ ಅನ್ವಯ ಆಗಲಿದೆ. ಇದರ ಪ್ರಕಾರ ಏಕಪರದೆ ಹಾಗೂ ಮಲ್ಟಿಪ್ಲೆಕ್ಸ್​ನಲ್ಲಿ ಟಿಕೆಟ್​ನ ಮೂಲ ಬೆಲೆ 200 ರೂಪಾಯಿ ದಾಟುವಂತಿಲ್ಲ. ಶೇ.18 ತೆರಿಗೆಯೂ ಸೇರಿದರೆ ಸಿನಿಮಾದ ಟಿಕೆಟ್ ದರ 236 ರೂಪಾಯಿ ಆಗಲಿದೆ. ಇದು ಪ್ರೇಕ್ಷಕ ನಿಟ್ಟುಸಿರು ಬಿಡುವಂತೆ ಮಾಡಿದೆ.

ಇದನ್ನೂ ಓದಿ
Image
ಅಕ್ಷಯ್ ಹೇಗೆ ಅಷ್ಟು ಬೇಗ ಸಿನಿಮಾ ಮಾಡ್ತಾರೆ? ಅಜಯ್ ದೇವಗನ್ ಫನ್ನಿ ವಿವರಣೆ
Image
ಟಾಪ್​ನಲ್ಲಿ ಯಾರೂ ಊಹಿಸದ ಸೀರಿಯಲ್; ‘ಅಮೃತಧಾರೆ’ಗೆ ಎಷ್ಟನೇ ಸ್ಥಾನ?
Image
ಮದುವೆ ಬಳಿಕ ಕೆಲಸಕ್ಕೆ ಮರಳಿದ ಅನುಶ್ರೀ ಈ ವಿಚಾರದಲ್ಲಿ ತಪ್ಪು ಮಾಡಲಿಲ್ಲ
Image
ಹಠ ಮಾಡಿ ವಿಷ್ಣುವರ್ಧನ್ ಸಿನಿಮಾದಲ್ಲಿ ನಟಿಸಿದ್ದ ನಟ ಅಕ್ಷಯ್ ಕುಮಾರ್

ಇನ್ನು ಕೆಲವು ಷರತ್ತುಗಳನ್ನು ಕೂಡ ಸರ್ಕಾರ ಹೇರಿದೆ. ಅನೇಕ ಮಲ್ಟಿಪ್ಲೆಕ್ಸ್​ಗಳಲ್ಲಿ ಗೋಲ್ಡ್ ಕ್ಲಾಸ್ ವ್ಯವಸ್ಥೆ ಇರುತ್ತವೆ. ಇವುಗಳಿಗೆ 200 ರೂಪಾಯಿ ಟಿಕೆಟ್ ದರದ ಮಿತಿ ಇಲ್ಲ. ಆ ಆಸನಗಳಿಗೆ ಮಲ್ಟಿಪ್ಲೆಕ್ಸ್​ಗಳು ತಮ್ಮಿಷ್ಟದ ದರ ನಿಗದಿ ಮಾಡಬಹುದು.

ಇದನ್ನೂ ಓದಿ: ಜಿಎಸ್​ಟಿ ದರ ಪರಿಷ್ಕರಣೆ: ಸಿನಿಮಾ ಟಿಕೆಟ್ ದರ ಇಳಿಕೆ, ಆದರೆ…

ಬಹುತೇಕ ಮಲ್ಟಿಪ್ಲೆಕ್ಸ್​ಗಳಲ್ಲಿ ರಿಕ್ಲೈನ್ ಸೀಟ್​ಗಳು ಇರುತ್ತವೆ. ಅವುಗಳಿಗೂ 200 ರೂಪಾಯಿ ಟಿಕೆಟ್ ದರ ಅನ್ವಯ ಆಗುತ್ತದೆ ಎನ್ನಲಾಗಿದೆ. ಸದ್ಯ ಟಿಕೆಟ್ ಮಂದಿರಗಳಿಗೆ ಆದೇಶ ಪ್ರತಿ ತಲುಪಿಲ್ಲ. ಇದು ತಲುಪಿದ ಬಳಿಕ ನಿಯಮ ಜಾರಿಗೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:27 pm, Fri, 12 September 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ