ಗಮನ ಸೆಳೆಯುತ್ತಿದೆ ‘ಗೌರಿ’ ಸಿನಿಮಾದ ಯುವ ಜೋಡಿ

ಇಂದ್ರಜಿತ್ ಲಂಕೇಶ್ ನಿರ್ದೇಶಿಸಿ ಅವರ ಪುತ್ರ ಸಮರ್ಜಿತ್ ಲಂಕೇಶ್ ಮೊದಲ ಬಾರಿಗೆ ನಾಯಕ ನಟನಾಗಿ ನಟಿಸಿರುವ ‘ಗೌರಿ’ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು, ಯೂಟ್ಯೂಬ್​ನಲ್ಲಿ ಸಖತ್ ಟ್ರೆಂಡ್ ಆಗುತ್ತಿದೆ.

ಗಮನ ಸೆಳೆಯುತ್ತಿದೆ ‘ಗೌರಿ’ ಸಿನಿಮಾದ ಯುವ ಜೋಡಿ
ಗೌರಿ
Follow us
ಮಂಜುನಾಥ ಸಿ.
|

Updated on: Jun 22, 2024 | 10:55 PM

ಇಂದ್ರಜಿತ್ ಲಂಕೇಶ್ (Indrajith Lankesh) ನಿರ್ದೇಶಿಸಿ ಅವರ ಪುತ್ರ ಸಮರ್ಜಿತ್ ಮೊದಲ ಬಾರಿ ನಾಯಕ ನಟನಾಗಿ ನಟಿಸಿರುವ ‘ಗೌರಿ’ ಸಿನಿಮಾ ಚಿತ್ರೀಕರಣ ಆರಂಭಿಸಿದಾಗಿನಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿದೆ. ಈ ಸಿನಿಮಾದಲ್ಲಿ ನಟಿ, ಮಾಜಿ ಬಿಗ್​ಬಾಸ್ ಸ್ಪರ್ಧಿ ಸಾನ್ಯಾ ಅಯ್ಯರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಸಿನಿಮಾದ ಸ್ಟೈಲಿಷ್ ಫೋಟೊಶೂಟ್​ ಆರಂಭದಲ್ಲಿ ಸಖತ್ ಗಮನ ಸೆಳೆದಿತ್ತು. ಇದೀಗ ಸಿನಿಮಾದ ಹಾಡು ಬಿಡುಗಡೆ ಆಗಿದ್ದು ಟ್ರೆಂಡ್ ಆಗುತ್ತಿದೆ.

‘ಗೌರಿ’ ಸಿನಿಮಾದ ಹುಬ್ಬಳ್ಳಿ ಜವಾರಿ ಶೈಲಿಯ ‘ಧೂಳ್ ಎಬ್ಬಿಸಾವ..’ ಹಾಡು ಬಿಡುಗಡೆ ಆಗಿದ್ದು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೆಂಡಿಂಗ್ ನಲ್ಲಿದೆ. ‘ಧೂಳ್ ಎಬ್ಬಿಸಾವ’ ಹಾಡು, ಹಾಡಿನ ಜವಾರಿ ಸಾಹಿತ್ಯ, ಅದಕ್ಕೆ ನಟರು ನರ್ತಿಸಿರುವ ರೀತಿ ನೋಡುಗರಿಗೆ ಇಷ್ಟವಾಗುತ್ತಿದೆ. ಈ ಹಾಡು ಆಲ್ ಇಂಡಿಯಾ ಲೆವೆಲ್ ನಲ್ಲಿ ಟ್ರೆಂಡ್ ಆಗುತ್ತಿದೆ ಎನ್ನುತ್ತಿದೆ ಚಿತ್ರತಂಡ.

ಹಾಡಿಗೆ ಶಿವು ಬೆರ್ಗಿ ಸಾಹಿತ್ಯ ಬರೆದು, ಸಂಗೀತ ಸಂಯೋಜಿಸಿದ್ದಾರೆ. ಈ ಹಾಡನ್ನು ಅನಿರುದ್ಧ್ ಶಾಸ್ತ್ರೀ ಮತ್ತು ಅನನ್ಯಾ ಭಟ್ ಅವರು ಸುಂದರ ಕಂಠದಲ್ಲಿ ಹಾಡಿದ್ದಾರೆ. ‘ಗೌರಿ’ ಸಿನಿಮಾದ ನಾಯಕ ಸಮರ್ಜಿತ್ ಲಂಕೇಶ್ ಮತ್ತು ಖ್ಯಾತ ನಟಿ ಸಂಜನಾ ಆನಂದ್ ಈ ಹಾಡಿಗೆ ಭರ್ಜರಿಯಾಗಿ ಸ್ಟೆಪ್ ಹಾಕಿದ್ದಾರೆ. ಭಜರಂಗಿ ಮೋಹನ್ ಈ ಹಾಡಿಗೆ ನೃತ್ಯ ಸಂಯೋಜಿಸಿದ್ದಾರೆ. ಇನ್ಸ್ಟಾಗ್ರಾಂ ಮತ್ತು ಯೂಟ್ಯೂಬ್ ನಲ್ಲಿ ಟಾಪ್ 5 ಟ್ರೆಂಡಿಂಗ್ ನಲ್ಲಿರುವ ಈ ಹಾಡಿಗೆ ಹಲವರು ರೀಲ್ಸ್ ಸಹ ಮಾಡುತ್ತಿದ್ದಾರೆ.

ಇದನ್ನೂ ಓದಿ:‘ಗೌರಿ’ ಸಿನಿಮಾಕ್ಕೆ ಶ್ರೇಯಾಂಕಾ ಪಾಟೀಲ್ ಬೆಂಬಲ, ಹಾಡು ಬಿಡುಗಡೆ

ಮತ್ತೊಂದು ವಿಶೇಷ ಅಂದ್ರೆ ಆಲ್ ಇಂಡಿಯಾ ಲೆವೆಲ್ ಟ್ರೆಂಡಿಂಗ್ ನಲ್ಲಿ ಸೌತ್ ಸಾಂಗ್ ಗಳು ಸದ್ದು ಮಾಡುತ್ತಿರುವ ಲಿಸ್ಟ್ ನಲ್ಲಿ ಮೊದಲನೇ ಸ್ಥಾನ ಕಲ್ಕಿ ಚಿತ್ರದ ಹಾಡು ಪಡೆದುಕೊಂಡಿದ್ರೆ ಎರಡನೇ ಸ್ಥಾನ ಪುಷ್ಪ2 ಚಿತ್ರದ ಹಾಡು ಪಡೆದುಕೊಂಡಿದೆ. ಇನ್ನು ಮೂರನೇ ಸ್ಥಾನದಲ್ಲಿ ಕನ್ನಡದ ಇಂದ್ರಜಿತ್ ಲಂಕೇಶ್ ನಿರ್ದೇಶನದ ಗೌರಿ ಸಿನಿಮಾದ ಧೂಳ್ ಎಬ್ಬಿಸುವ ಇದೆ ಎನ್ನುತ್ತಿದೆ ಚಿತ್ರತಂಡ.

ಸಿನಿಮಾದ ಪ್ರಚಾರವನ್ನು ಚಿತ್ರತಂಡ ಅದ್ಧೂರಿಯಾಗಿ ಮಾಡುತ್ತಿದೆ. ನಾಡಿನ ಹಲವು ಜಿಲ್ಲೆಗಳಿಗೆ ತೆರಳಿ ಸಿನಿಮಾದ ಪ್ರಚಾರ ಮಾಡಲಾಗುತ್ತಿದೆ. ದರ್ಶನ್ ಪ್ರಕರಣದ ನಡುವೆಯೂ ‘ಗೌರಿ’ ಸಿನಿಮಾದ ಪ್ರಚಾರ ಜೋರಾಗಿ ನಡೆಯುತ್ತಿದೆ. ಸಿನಿಮಾ ಶೀಘ್ರವೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದ್ದು, ಯಶಸ್ಸು ಗಳಿಸುವ ವಿಶ್ವಾಸವನ್ನು ನಿರ್ದೇಶಕ ಇಂದ್ರಜಿತ್ ಲಂಕೇಶ್ ವ್ಯಕ್ತಪಡಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ