ಸಂಕ್ರಾಂತಿ ಸಂದರ್ಭದಲ್ಲಿ ರಿಲೀಸ್ ಆಗಲಿರುವ ಸಿನಿಮಾಗಳ ವಿಶೇಷತೆ ಬಗ್ಗೆ ಇಲ್ಲಿದೆ ಮಾಹಿತಿ..

ಈ ವರ್ಷದ ಸಂಕ್ರಾಂತಿ ಸಂದರ್ಭದಲ್ಲಿ ಸಿನಿಮಾ ಜಾತ್ರೆ ನಡೆಯಲಿದೆ. ಈ ಪೈಕಿ ಕೆಲಸ ಸಿನಿಮಾಗಳಿಗೆ ರಿಲೀಸ್ ದಿನಾಂಕ ಮುಂದಕ್ಕೆ ಹಾಕಿಕೊಳ್ಳಲೇಬೇಕಾದ ಅನಿವಾರ್ಯತೆ ಇದೆ. ಪ್ರತಿ ಸಿನಿಮಾಗಳು ಒಂದೊಂದು ವಿಶೇಷತೆ ಹೊಂದಿವೆ. ಆ ಬಗ್ಗೆ ಇಲ್ಲಿದೆ ವಿವರ. 

ಸಂಕ್ರಾಂತಿ ಸಂದರ್ಭದಲ್ಲಿ ರಿಲೀಸ್ ಆಗಲಿರುವ ಸಿನಿಮಾಗಳ ವಿಶೇಷತೆ ಬಗ್ಗೆ ಇಲ್ಲಿದೆ ಮಾಹಿತಿ..
ಸಂಕ್ರಾಂತಿ ರಿಲೀಸ್ ಸಂದರ್ಭದಲ್ಲಿ ರಿಲೀಸ್ ಆಗಲಿರುವ ಸಿನಿಮಾಗಳ ವಿಶೇಷತೆ ಬಗ್ಗೆ ಇಲ್ಲಿದೆ ಮಾಹಿತಿ..
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Dec 30, 2023 | 10:17 AM

ಸಂಕ್ರಾಂತಿ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈ ಹಬ್ಬದ ಸಮಯದಲ್ಲಿ ದಕ್ಷಿಣ ಭಾರತದಲ್ಲಿ ಸಾಕಷ್ಟು ಸಿನಿಮಾಗಳು ರಿಲೀಸ್ ಆಗುತ್ತವೆ. ಈ ವರ್ಷದ ಸಂಕ್ರಾಂತಿ ಸಂದರ್ಭದಲ್ಲಿ ಸಿನಿಮಾ ಜಾತ್ರೆ ನಡೆಯಲಿದೆ. ‘ಗುಂಟೂರು ಖಾರಂ’, ‘ಹನು ಮಾನ್’, ‘ಈಗಲ್’, ‘ಸೈಂಧವ್’, ‘ನಾ ಸಾಮಿ ರಂಗ’, ಕ್ಯಾಪ್ಟನ್ ಮಿಲ್ಲರ್, ‘ಮೆರಿ ಕ್ರಿಸ್​ಮಸ್​ ಮೊದಲಾದ ಸಿನಿಮಾಗಳು ರಿಲೀಸ್ ಆಗುತ್ತಿವೆ. ಈ ಪೈಕಿ ಕೆಲಸ ಸಿನಿಮಾಗಳಿಗೆ ರಿಲೀಸ್ ದಿನಾಂಕ ಮುಂದಕ್ಕೆ ಹಾಕಿಕೊಳ್ಳಲೇಬೇಕಾದ ಅನಿವಾರ್ಯತೆ ಇದೆ. ಪ್ರತಿ ಸಿನಿಮಾಗಳು ಒಂದೊಂದು ವಿಶೇಷತೆ ಹೊಂದಿವೆ. ಆ ಬಗ್ಗೆ ಇಲ್ಲಿದೆ ವಿವರ.

‘ಗುಂಟೂರು ಖಾರಂ’

‘ಗುಂಟೂರು ಖಾರಂ’ ಸಿನಿಮಾ ಸಾಕಷ್ಟು ವಿಶೇಷತೆಗಳನ್ನು ಹೊಂದಿವೆ. ಈ ಚಿತ್ರಕ್ಕೆ ಮಹೇಶ್ ಬಾಬು ಹೀರೋ ಆದರೆ, ತ್ರಿವಿಕ್ರಂ ಅವರು ನಿರ್ದೇಶನ ಮಾಡಿದ್ದಾರೆ. ಇವರದ್ದು ಹಿಟ್ ಕಾಂಬಿನೇಷನ್. ಈ ಸಿನಿಮಾದ ಶೂಟಿಂಗ್ ಇನ್ನೂ ಪ್ರಗತಿಯಲ್ಲಿದೆ ಅನ್ನೋದು ಅಭಿಮಾನಿಗಳ ಟೆನ್ಷನ್ ಹೆಚ್ಚಿಸಿದೆ. ಪೋಸ್ಟರ್ ಮೂಲಕ ಈ ಸಿನಿಮಾ ಗಮನ ಸೆಳೆದಿದೆ. ಜನವರು 12ರಂದು ಸಿನಿಮಾ ರಿಲೀಸ್ ಆಗುತ್ತಿದೆ.  ಈ ಚಿತ್ರದ ಮೊದಲ ಕಾಪಿ ರೆಡಿ ಆಗೋದು ಜನವರಿ 8ರಂದು ಎನ್ನಲಾಗುತ್ತಿದೆ

ಹನುಮಾನ್

‘ಹನುಮಾನ್’ ಸಿನಿಮಾದ ಟ್ರೇಲರ್ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಸಾಕಷ್ಟು ವಿಎಫ್​ಎಕ್ಸ್ ಇದೆ. ಈ ಸಿನಿಮಾದ ಫೈನಲ್ ಕಾಪಿ ಈಗಾಗಲೇ ರೆಡಿ ಇದೆ. ಈ ಚಿತ್ರದಲ್ಲಿ ಆಧುನಿಕ ಕಥೆಯ ಜೊತೆಗೆ ಪುರಾಣದ ಕಥೆಯನ್ನು ಬೆರೆಸಲಾಗಿದೆ. ಟ್ರೇಲರ್ ನೋಡಿದವರಿಗೆ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.  ಜನವರಿ 12ರಂದು ಸಿನಿಮಾ ರಿಲೀಸ್ ಆಗಲಿದೆ.

ಸೈಂಧವ್

ದಗ್ಗುಬಾಟಿ ವೆಂಕಟೇಶ್ ನಟನೆಯ ‘ಸೈಂಧವ್’ ಸಿನಿಮಾದ ಫೈನಲ್ ಕಾಪಿ ರೆಡಿ ಇದೆ. ಈ ಚಿತ್ರವನ್ನು ಶೈಲೇಶ್ ಕೊಲನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಜನವರಿ 13ರಂದು ರಿಲೀಸ್ ಆಗಲಿದೆ. ಸಾಮಾನ್ಯವಾಗಿ ಸಿನಿಮಾಗಳು ಶುಕ್ರವಾರ ರಿಲೀಸ್ ಮಾಡೋದು ವಾಡಿಕೆ. ಆದರೆ, ‘ಸೈಂಧವ್’ ಸಿನಿಮಾ ಶನಿವಾರ ಬಿಡುಗಡೆ ಆಗುತ್ತಿದೆ.

ಈಗಲ್

ರವಿತೇಜ ಅವರು ಮಾಸ್ ಸಿನಿಮಾಗಳ ಮೂಲಕ ಗಮನ ಸೆಳೆಯುತ್ತಾರೆ. ಅವರು ‘ಈಗಲ್’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದ್ದಾರೆ. ಈ ಚಿತ್ರ ಕೂಡ ಶನಿವಾರ (ಜನವರಿ 13) ರಿಲೀಸ್ ಆಗುತ್ತಿದೆ. ಈ ಚಿತ್ರದ ಕೊನೆಯ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

ನಾ ಸಾಮಿ ರಂಗ

ನಾಗಾರ್ಜುನ ಅವರು ಇತ್ತೀಚೆಗೆ ದೊಡ್ಡ ಗೆಲುವು ಕಂಡಿಲ್ಲ. ‘ನಾ ಸಾಮಿ ರಂಗ’ ಚಿತ್ರದ ಮೂಲಕ ದೊಡ್ಡ ಗೆಲುವು ಕಾಣುವ ನಿರೀಕ್ಷೆಯಲ್ಲಿ ಅವರಿದ್ದಾರೆ. ಈ ಚಿತ್ರದಲ್ಲಿ ಆಶಿಕಾ ರಂಗನಾಥ್ ನಟಿಸಿದ್ದಾರೆ ಎಂಬ ಕಾರಣಕ್ಕೆ ಕನ್ನಡಿಗರೂ ಈ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ರಿಲೀಸ್ ದಿನಾಂಕ ಇನ್ನೂ ಫೈನಲ್ ಆಗಿಲ್ಲ. ಸಿನಿಮಾ ಬಿಡುಗಡೆ ಮುಂದಕ್ಕೆ ಹೋದರೂ ಅಚ್ಚರಿ ಏನಿಲ್ಲ

ಕ್ಯಾಪ್ಟನ್ ಮಿಲ್ಲರ್

ತಮಿಳು ನಟ ಧನುಷ್ ಅವರು ವಿವಿಧ ರೀತಿಯ ಪಾತ್ರಗಳ ಮೂಲಕ ಗಮನ ಸೆಳೆದಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಸ್ವತಂತ್ರ ಪೂರ್ವದ ಕಥೆಯನ್ನು ಚಿತ್ರ ಹೊಂದಿದೆ. ಕನ್ನಡದ ಶಿವರಾಜ್​ಕುಮಾರ್ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಕೊನೆಯ ಹಂತದ ಕೆಲಸಗಳು ನಡೆಯುತ್ತಿವೆ. ಈ ಚಿತ್ರ ಸಂಕ್ರಾಂತಿ ಸಂದರ್ಭದಲ್ಲಿ ರಿಲೀಸ್ ಆಗುತ್ತಿದ್ದು, ದಿನಾಂಕ ಇನ್ನೂ ನಿಗದಿ ಆಗಿಲ್ಲ.

ಮೆರಿ ಕ್ರಿಸ್​ಮಸ್

ಕತ್ರಿನಾ ಕೈಫ್ ಹಾಗೂ ವಿಜಯ್ ಸೇತುಪತಿ ಇದೇ ಮೊದಲ ಬಾರಿಗೆ ‘ಮೆರಿ ಕ್ರಿಸ್​ಮಸ್​’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಸಿನಿಮಾ ಕ್ರಿಸ್​ಮಸ್ ಸಂದರ್ಭದಲ್ಲಿ ರಿಲೀಸ್ ಆಗಬೇಕಿತ್ತು. ‘ಡಂಕಿ’ ಹಾಗೂ ‘ಸಲಾರ್’ ಸಿನಿಮಾ ಮಧ್ಯೆ ಸಿಕ್ಕಿ ಒದ್ದಾಡುವುದು ಬೇಡ ಎನ್ನುವ ಕಾರಣಕ್ಕೆ ತಂಡ ಚಿತ್ರದ ರಿಲೀಸ್ ದಿನಾಂಕವನ್ನು ಜನವರಿ 12ಕ್ಕೆ ಮುಂದೂಡಿಕೊಂಡಿದೆ.

ಇದನ್ನೂ ಓದಿ: ಕತ್ರಿನಾ ಕೈಫ್ ಮನೆಯಲ್ಲಿ ಅದ್ದೂರಿ ದೀಪಾವಳಿ ಆಚರಣೆ

ಉಳಿದ ಸಿನಿಮಾಗಳು

ರಜನಿಕಾಂತ್ ನಟನೆಯ ‘ಲಾಲ್ ಸಲಾಮ್’ ಸಿನಿಮಾ ಸಂಕ್ರಾಂತಿಗೆ ರಿಲೀಸ್ ಆಗಬೇಕಿತ್ತು. ಆದರೆ, ಸಿನಿಮಾದ ಕೆಲಸ ಪೂರ್ಣಗೊಂಡಿಲ್ಲ ಎನ್ನಲಾಗಿದೆ. ಈ ಚಿತ್ರದ ಹಾರ್ಡ್​ ಡಿಸ್ಕ್ ಕಳೆದು ಹೋಗಿದೆ ಎನ್ನುವ ಸುದ್ದಿ ಕೂಡ ಹರಿದಾಡಿತ್ತು. ‘ಮಿಷನ್ ಚಾಪ್ಟರ್ 1’, ‘ಅಯಲಾನ್’ ಮೊದಲಾದ ಚಿತ್ರಗಳು ಸಂಕ್ರಾಂತಿಗೆ ರಿಲೀಸ್ ಆಗುತ್ತಿವೆ. ಈ ಪೈಕಿ ಯಾವ ಸಿನಿಮಾ ಗೆಲ್ಲುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:04 am, Sat, 30 December 23

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು