ಶರಣ್ ಈಗ ಎಲೆಕ್ಟ್ರಿಷಿಯನ್; ಹುಟ್ಟುಹಬ್ಬದ ದಿನವೇ ಹೊಸ ಅಪ್​ಡೇಟ್ ನೀಡಿದ ನಟ  

ಕಳೆದ ವರ್ಷ ‘ಗುರು ಶಿಷ್ಯರು’ ಚಿತ್ರದಿಂದ ಶರಣ್ ಜನಪ್ರಿಯತೆ ಹೆಚ್ಚಿದೆ. ಈಗ ಹೊಸ ಚಿತ್ರದಲ್ಲಿ ಅವರು ಎಲೆಕ್ಟ್ರಿಷಿಯನ್ ಪಾತ್ರ ನಿರ್ವಹಿಸುತ್ತಿದ್ದಾರೆ.

ಶರಣ್ ಈಗ ಎಲೆಕ್ಟ್ರಿಷಿಯನ್; ಹುಟ್ಟುಹಬ್ಬದ ದಿನವೇ ಹೊಸ ಅಪ್​ಡೇಟ್ ನೀಡಿದ ನಟ  
ಶರಣ್ ಹೊಸ ಸಿನಿಮಾ
Follow us
ರಾಜೇಶ್ ದುಗ್ಗುಮನೆ
|

Updated on:Feb 06, 2023 | 12:10 PM

ಶರಣ್ (Sharan) ನಟನೆಯ ‘ಗುರು ಶಿಷ್ಯರು’ ಸಿನಿಮಾ 2022ರಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಶರಣ್ ಅವರು ಭಿನ್ನ ಪಾತ್ರ ಆಯ್ಕೆ ಮಾಡಿಕೊಂಡು ಗಮನ ಸೆಳೆದಿದ್ದರು. ಈಗ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ‘ಪುಗ್ಸಟ್ಟೆ ಲೈಫು ಪುರುಸೊತ್ತೇ ಇಲ್ಲ’ ಚಿತ್ರ ನಿರ್ದೇಶಿಸಿದ್ದ ಅರವಿಂದ್ ಕುಪ್ಲಿಕರ್ ಅವರು ಶರಣ್ ಮುಂದಿನ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಡಾರ್ಕ್ ಕಾಮಿಡಿ ಶೈಲಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಇಂದು (ಫೆಬ್ರವರಿ 6) ಶರಣ್ ಹುಟ್ಟುಹಬ್ಬ (Sharan Birthday). ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದೆ.

ಶರಣ್ ಅವರು ಹಾಸ್ಯ ಕಲಾವಿದನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು. ನಂತರ ಹೀರೋ ಆಗಿ ಬಡ್ತಿ ಪಡೆದರು. ಅವರ ಅನೇಕ ಸಿನಿಮಾಗಳು ಹಿಟ್ ಆಗಿವೆ. ಕಳೆದ ವರ್ಷ ‘ಗುರು ಶಿಷ್ಯರು’ ಚಿತ್ರದಿಂದ ಅವರ ಜನಪ್ರಿಯತೆ ಹೆಚ್ಚಿದೆ. ಈಗ ಹೊಸ ಚಿತ್ರದಲ್ಲಿ ಅವರು ಎಲೆಕ್ಟ್ರಿಷಿಯನ್ ಪಾತ್ರ ನಿರ್ವಹಿಸುತ್ತಿದ್ದಾರೆ.

ಶ್ರೀಧರ ಕೃಪ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಬಿ.ಬಸವರಾಜ್ ಹಾಗೂ ಶ್ರೀಧರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅರವಿಂದ್ ಕುಪ್ಲಿಕರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಸಂಚಾರಿ ವಿಜಯ್ ಅಭಿನಯದ ‘ಪುಗ್ಸಟ್ಟೆ ಲೈಫು ಪುರುಸೋತ್ತೇ ಇಲ್ಲ’ ಸಿನಿಮಾ ನಂತರ ಅರವಿಂದ್ ಕುಪ್ಲಿಕರ್ ಆ್ಯಕ್ಷನ್ ಕಟ್ ಹೇಳುತ್ತಿರುವ ಎರಡನೇ ಸಿನಿಮಾ ಇದಾಗಿದೆ.

ಇದನ್ನೂ ಓದಿ
Image
Choo Mantar Movie: ‘ಛೂ ಮಂತರ್’ ಸಿನಿಮಾ ಸೆಟ್​​ನಲ್ಲಿ ಶರಣ್​ಗೆ ಹಾರರ್ ಅನುಭವ
Image
Choo Mantar: ‘ಛೂ ಮಂತರ್​’ ಚಿತ್ರದಲ್ಲಿ ಮತ್ತೆ ಶರಣ್​-ಚಿಕ್ಕಣ್ಣ ಜೋಡಿ; ಸಿನಿಮಾ ಬಗ್ಗೆ ಪೂರ್ತಿ ವಿವರ ತೆರೆದಿಟ್ಟ ‘ಅಧ್ಯಕ್ಷ’
Image
‘ಗುರು ಶಿಷ್ಯರು’ ಸಿನಿಮಾದ ಹೆಸರು ಮರುಬಳಕೆ ಮಾಡಿಕೊಂಡಿದ್ದು ಯಾಕೆ? ಶರಣ್​ ನೀಡಿದ್ರು ಉತ್ತರ
Image
ನಟನಾಗುವ ಮೊದಲು ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದೆ ಅಂತ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ ಶರಣ್!

ಶರಣ್ ಹೊಸ ಸಿನಿಮಾದ ಕಥೆ ಬಾಗಲಕೋಟೆಯಲ್ಲಿ ಸಾಗಲಿದೆ. ಉತ್ತರ ಕರ್ನಾಟಕ ಶೈಲಿಯ ಭಾಷೆಯಲ್ಲಿ ಶರಣ್ ಗಮನ ಸೆಳೆಯಲಿದ್ದಾರೆ ಎಂದು ನಿರ್ದೇಶಕ ಅರವಿಂದ್ ಕುಪ್ಲಿಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ಶರಣ್​-ಶ್ರುತಿ ಕುಟುಂಬದ 3ನೇ ತಲೆಮಾರಿನ ನಟಿ ಕೀರ್ತಿ ಚಿತ್ರರಂಗಕ್ಕೆ ಎಂಟ್ರಿ; ‘ಧರಣಿ’ ಚಿತ್ರಕ್ಕೆ ನಾಯಕಿ

ಈ ಚಿತ್ರದಲ್ಲಿ ಹಲವು ಅನುಭವಿ ಕಲಾವಿದರು ನಟಿಸುತ್ತಿದ್ದಾರೆ. ಅಚ್ಯುತ್ ಕುಮಾರ್, ರಂಗಾಯಣ ರಘು ಮೊದಲಾದವರು ತಾರಾಬಳಗದಲ್ಲಿದ್ದಾರೆ. ಫೆ.20ರಿಂದ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದ ಟೈಟಲ್ ಹಾಗೂ ಸಿನಿಮಾ ಬಗೆಗಿನ ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ರಿವೀಲ್ ಆಗಲಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ, ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಉಲ್ಲಾಸ್ ಹೈದೂರ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:01 pm, Mon, 6 February 23

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್