ನಿರ್ದೇಶನಕ್ಕೆ ಕಂಬ್ಯಾಕ್ ಮಾಡಲಿದ್ದಾರೆ ‘ಅಂಬಿ ನಿಂಗ್ ವಯಸ್ಸಾಯ್ತೋ’ ಖ್ಯಾತಿಯ ಗುರುದತ್ ಗಾಣಿಗ
‘ಅಂಬಿ ನಿಂಗ್ ವಯಸ್ಸಾಯ್ತೋ’ ಸಿನಿಮಾ ನಿರ್ದೇಶನ ಮಾಡುವಾಗ ಗುರುದತ್ಗೆ ಸಣ್ಣ ವಯಸ್ಸು. ಹಲವು ದೊಡ್ಡ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದರು. ಎಲ್ಲವನ್ನೂ ಅವರು ಯಶಸ್ವಿಯಾಗಿ ನಿಭಾಯಿಸಿ ಭೇಷ್ ಎನಿಸಿಕೊಂಡರು. ಈ ಮೂಲಕ ಭರವಸೆಯ ನಿರ್ದೇಶಕನಾಗಿ ಹೊರಹೊಮ್ಮಿದರು.
2018ರಲ್ಲಿ ರಿಲೀಸ್ ಆದ ‘ಅಂಬಿ ನಿಂಗ್ ವಯಸ್ಸಾಯ್ತೋ’ ಸಿನಿಮಾ ಮೆಚ್ಚುಗೆ ಪಡೆಯಿತು. ಅಂಬರೀಷ್ (Ambareesh) ಮುಖ್ಯಭೂಮಿಕೆಯಲ್ಲಿ ನಟಿಸಿದ ಕೊನೆಯ ಸಿನಿಮಾ ಎಂಬ ಕಾರಣಕ್ಕೆ ಇದು ವಿಶೇಷ ಎನಿಸಿಕೊಂಡಿದೆ. ಈ ಚಿತ್ರದಲ್ಲಿ ಸುದೀಪ್, ಸುಹಾಸಿನಿ, ಶ್ರುತಿ ಹರಿಹರನ್ ಮೊದಲಾದವರು ನಟಿಸಿದ್ದರು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ಗುರುದತ್ ಗಾಣಿಗ. ಕಳೆದ ಐದು ವರ್ಷಗಳಲ್ಲಿ ಅವರು ಯಾವುದೇ ಹೊಸ ಸಿನಿಮಾ ಅನೌನ್ಸ್ ಮಾಡಿಲ್ಲ. ಈಗ ಅವರು ನಿರ್ದೇಶನಕ್ಕೆ ಕಂಬ್ಯಾಕ್ ಮಾಡೋಕೆ ರೆಡಿ ಆಗಿದ್ದಾರೆ. ಸ್ಟಾರ್ ಕಲಾವಿದರ ಜೊತೆ ಅವರು ಕೈ ಜೋಡಿಸಿದ್ದಾರೆ. ಈ ಬಗ್ಗೆ ಶೀಘ್ರವೇ ಅಪ್ಡೇಟ್ ಸಿಗಲಿದೆ.
‘ಅಂಬಿ ನಿಂಗ್ ವಯಸ್ಸಾಯ್ತೋ’ ಸಿನಿಮಾ ನಿರ್ದೇಶನ ಮಾಡುವಾಗ ಗುರುದತ್ಗೆ ಸಣ್ಣ ವಯಸ್ಸು. ಹಲವು ದೊಡ್ಡ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದರು. ಎಲ್ಲವನ್ನೂ ಅವರು ಯಶಸ್ವಿಯಾಗಿ ನಿಭಾಯಿಸಿ ಭೇಷ್ ಎನಿಸಿಕೊಂಡರು. ಈ ಮೂಲಕ ಭರವಸೆಯ ನಿರ್ದೇಶಕನಾಗಿ ಹೊರಹೊಮ್ಮಿದರು. ಅವರ ಎರಡನೇ ಸಿನಿಮಾ ಬಗ್ಗೆ ಶೀಘ್ರವೇ ದೊಡ್ಡ ಸುದ್ದಿ ಸಿಗಲಿದೆ.
ಒಂದು ಗ್ಯಾಪ್ನ ಬಳಿಕ ಗುರುದತ್ ಅವರು ನಿರ್ದೇಶಕನ ಕ್ಯಾಪ್ ಧರಿಸುತ್ತಿದ್ದಾರೆ. ಈ ಬಾರಿ ಗುರುದತ್ ಅವರು ಯಾವ ಕಲಾವಿದರ ಜೊತೆ ಸಿನಿಮಾ ಮಾಡುತ್ತಾರೆ? ಇದಕ್ಕೆ ಬಂಡವಾಳ ಹೂಡುವವರು ಯಾರು ಎನ್ನುವ ಕುತೂಹಲ ಮೂಡಿದೆ. ಸದ್ಯದಲ್ಲೇ ಸಿನಿಮಾದ ಟೈಟಲ್ ಹಾಗೂ ಹೀರೋ ಹೆಸರನ್ನು ಅವರು ರಿವೀಲ್ ಮಾಡಲಿದ್ದಾರೆ. ಈ ಬಾರಿ ಅವರು ಭಿನ್ನ ಕಾನ್ಸೆಪ್ಟ್‌ನ ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರತಂಡಕ್ಕೆ ನಿರೂಪ್ ಭಂಡಾರಿ ಎಂಟ್ರಿ; ಸ್ವಾಗತ ಕೋರಿದ ದಿಗಂತ್
ಇನ್ನು ನಿರ್ಮಾಣದಲ್ಲೂ ಗುರುದತ್ ಬ್ಯುಸಿ ಆಗಿದ್ದಾರೆ. ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾಗೆ ಅವರು ಬಂಡವಾಳ ಹೂಡುತ್ತಿದ್ದಾರೆ. ಈ ಚಿತ್ರದ ಟೀಸರ್ ಗಮನ ಸೆಳೆದಿದೆ. ಈ ಚಿತ್ರದಲ್ಲಿ ದಿಗಂತ್, ನರೂಪ್ ಬಂಡಾರಿ ಮೊದಲಾದವರು ನಟಿಸಿದ್ದಾರೆ. ಸದ್ಯ, ಗುರುದತ್ ಅವರ ಹೊಸ ಸಿನಿಮಾ ಘೋಷಣೆಗೆ ಫ್ಯಾನ್ಸ್ ಕಾದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:40 am, Wed, 11 October 23