AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ 14ಕ್ಕೆ ‘ರಾಜು ಜೇಮ್ಸ್ ಬಾಂಡ್’ ರಿಲೀಸ್​; ಪ್ರೇಮಿಗಳ ದಿನಕ್ಕೆ ಈ ಕೊಡುಗೆ

‘ರಾಜು ಜೇಮ್ಸ್ ಬಾಂಡ್’ ಸಿನಿಮಾದ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಈ ಚಿತ್ರದಲ್ಲಿ ಗುರುನಂದನ್ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಮೃದುಲಾ, ಚಿಕ್ಕಣ್ಣ, ಸಾಧು ಕೋಕಿಲ, ಅಚ್ಯುತ್ ಕುಮಾರ್ ಮುಂತಾದವರು ಪಾತ್ರವರ್ಗದಲ್ಲಿ ಇದ್ದಾರೆ. ಫೆಬ್ರವರಿ 14ರಂದು ಸಿನಿಮಾ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಫೆಬ್ರವರಿ 14ಕ್ಕೆ ‘ರಾಜು ಜೇಮ್ಸ್ ಬಾಂಡ್’ ರಿಲೀಸ್​; ಪ್ರೇಮಿಗಳ ದಿನಕ್ಕೆ ಈ ಕೊಡುಗೆ
Gurunandan
ಮದನ್​ ಕುಮಾರ್​
|

Updated on: Jan 01, 2025 | 9:11 PM

Share

ಹೊಸ ವರ್ಷ ಬಂದಿದೆ. ಚಿತ್ರರಂಗ ಕೂಡ ಹೊಸ ಭರವಸೆಯೊಂದಿಗೆ ಸಕ್ರಿಯವಾಗಿದೆ. 2025ರಲ್ಲಿ ಯಾವೆಲ್ಲ ಸಿನಿಮಾಗಳು ಸೂಪರ್​ ಹಿಟ್ ಆಗಲಿವೆ ಎಂಬುದನ್ನು ನೋಡುವ ಕೌತುಕ ಮೂಡಿದೆ. ಹೊಸ ವರ್ಷದ ಮೊದಲ ದಿನವೇ ಅನೇಕ ಸಿನಿಮಾ ತಂಡಗಳಿಂದ ಸಾಕಷ್ಟು ಅಪ್​ಡೇಟ್ಸ್​ ಸಿಕ್ಕಿವೆ. ‘ರಾಜು ಜೇಮ್ಸ್ ಬಾಂಡ್’ ಚಿತ್ರತಂಡ ಕೂಡ ಸಿಹಿ ಸುದ್ದಿಯನ್ನು ಹಂಚಿಕೊಂಡಿದೆ. ಹೌದು, ಹೊಸ ವರ್ಷದ ಪ್ರಯುಕ್ತ ಈ ಸಿನಿಮಾದ ರಿಲೀಸ್​ ಡೇಟ್​ ಅನೌನ್ಸ್ ಮಾಡಲಾಗಿದೆ. ಗುರುನಂದನ್ ಪ್ರಮುಖ ಪಾತ್ರ ಮಾಡುತ್ತಿರುವ ಈ ಸಿನಿಮಾ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

‘ರಾಜು ಜೇಮ್ಸ್ ಬಾಂಡ್’ ಚಿತ್ರವು ‘ಕರ್ಮ ಬ್ರೋಸ್ ಪ್ರೊಡಕ್ಷನ್ಸ್’ ಮೂಲಕ ನಿರ್ಮಣ ಆಗುತ್ತಿದೆ. ದೀಪಕ್ ಮಧುವನಹಳ್ಳಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ‘ಫಸ್ಟ್ ರ‍್ಯಾಂಕ್ ರಾಜು’ ಖ್ಯಾತಿಯ ಗುರುನಂದನ್ ಅವರು ಈ ಸಿನಿಮಾದಲ್ಲಿ ನಾಯಕನಾಗಿ ಅಭಿನಯಿಸಿದ್ದು, ಒಂದಷ್ಟು ಕಾರಣಗಳಿಂದ ನಿರೀಕ್ಷೆ ಹೆಚ್ಚಿದೆ. ಈ ಸಿನಿಮಾದಲ್ಲಿ ಹಾಸ್ಯವೇ ಪ್ರಧಾನವಾಗಿ ಇರಲಿದೆ. ಫೆಬ್ರವರಿ 14ರಂದು ‘ರಾಜು ಜೇಮ್ಸ್ ಬಾಂಡ್’ ರಿಲೀಸ್ ಆಗಲಿದೆ.

ಈ ಮೊದಲು ಪ್ರೇಮಿಗಳ ದಿನದಂದು (ಫೆ.14) ಬಿಡುಗಡೆಯಾಗಿ ಸೂಪರ್​ ಹಿಟ್​ ಆದ ಅನೇಕ ಸಿನಿಮಾಗಳು ಇವೆ. ಅವುಗಳ ಸಾಲಿಗೆ ‘ರಾಜು ಜೇಮ್ಸ್ ಬಾಂಡ್’ ಕೂಡ ಸೇರ್ಪಡೆ ಆಗುತ್ತಾ ಎಂಬುದನ್ನು ತಿಳಿಯುವ ಸಮಯ ಹತ್ತಿರ ಆಗುತ್ತಿದೆ. ಪ್ರಚಾರದ ಸಲುವಾಗಿ ಶೀಘ್ರದಲ್ಲೇ ಈ ಸಿನಿಮಾದಿಂದ ಹೊಸ ಹಾಡು ರಿಲೀಸ್ ಆಗಲಿದೆ. ಈ ಸಿನಿಮಾದಲ್ಲಿ ಗುರುನಂದನ್ ಜೊತೆ ಮೃದುಲಾ, ಅಚ್ಯುತ್ ಕುಮಾರ್, ಸಾಧು ಕೋಕಿಲ, ಚಿಕ್ಕಣ್ಣ, ಜೈ ಜಗದೀಶ್, ರವಿಶಂಕರ್ ಮುಂತಾದ ಕಲಾವಿದರು ನಟಿಸಿದ್ದಾರೆ.

ಇದನ್ನೂ ಓದಿ: 2025ರ ಬಹು ನಿರೀಕ್ಷಿತ ಕನ್ನಡ ಸಿನಿಮಾಗಳಿವು

‘ರಾಜು ಜೇಮ್ಸ್ ಬಾಂಡ್’ ಚಿತ್ರದಲ್ಲಿ ಮನಮೋಹಕ ಕಥೆ ಇದೆ ಎಂದು ಸಿನಿಮಾ ತಂಡ ಹೇಳಿಕೊಂಡಿದೆ. ಲಂಡನ್‌ನಲ್ಲಿ ಶೂಟಿಂಗ್ ಮಾಡಲಾಗಿದೆ. ಸಂಗೀತ ಕೂಡ ಈ ಸಿನಿಮಾದ ಹೈಲೈಟ್ ಎಂದು ನಿರ್ದೇಶಕರು ಭರವಸೆ ನೀಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಡಿಸೆಂಬರ್ 27ರಂದು ಈ ಸಿನಿಮಾ ಬಿಡುಗಡೆ ಆಗಿರಬೇಕಿತ್ತು. ಆದರೆ ಉಪೇಂದ್ರ ನಟನೆಯ ‘ಯುಐ’, ಕಿಚ್ಚ ಸುದೀಪ್ ಅಭಿನಯದ ‘ಮ್ಯಾಕ್ಸ್’ ಸಿನಿಮಾಗಳು ಡಿಸೆಂಬರ್ ಕೊನೆಯಲ್ಲಿ ರಿಲೀಸ್​ ಆದ ಕಾರಣ ‘ರಾಜು ಜೇಮ್ಸ್ ಬಾಂಡ್’ ಸಿನಿಮಾದ ರಿಲೀಸ್​ ಡೇಟ್​ ಮುಂದಕ್ಕೆ ಹೋಗಬೇಕಾಯಿತು ಎಂದು ನಿರ್ಮಾಪಕರಾದ ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರು ಹೇಳಿದ್ದಾರೆ. ಈಗ ಫೆಬ್ರವರಿ 14ಕ್ಕೆ ಸಿನಿಮಾ ತೆರೆಕಾಣಲಿಸಲು ನಿರ್ಧರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ದಾವಣಗೆರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ
ದಾವಣಗೆರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!
ಕೈದಿ ಬಿಡುಗಡೆಗೆ ಪತ್ನಿ ಮೇಲೆ ಆಸೆ: ಅಪರಾಧಿ ಪತ್ನಿಗೆ ಡಿಐಜಿ ವಿಡಿಯೋ ಕಾಲ್!
ಕೈದಿ ಬಿಡುಗಡೆಗೆ ಪತ್ನಿ ಮೇಲೆ ಆಸೆ: ಅಪರಾಧಿ ಪತ್ನಿಗೆ ಡಿಐಜಿ ವಿಡಿಯೋ ಕಾಲ್!
ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸ್ಪಷ್ಟನೆ ನೀಡಿದ ಡಿಕೆಶಿ
ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸ್ಪಷ್ಟನೆ ನೀಡಿದ ಡಿಕೆಶಿ
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ
ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!
ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್