ಚೆಕ್ ಬೌನ್ಸ್ ಕೇಸ್​ನಲ್ಲಿ ಸಿಲುಕಿದ್ದ ಗುರು ಪ್ರಸಾದ್; ನವೆಂಬರ್ 19ಕ್ಕೆ ಇತ್ತು ವಿಚಾರಣೆ

ಕನ್ನಡ ಚಿತ್ರ ನಿರ್ದೇಶಕ ಗುರು ಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮೇಲೆ ಹಲವು ಕೋಟಿ ರೂಪಾಯಿಗಳ ಸಾಲ ಮತ್ತು ನ್ಯಾಯಾಲಯದ ಪ್ರಕರಣ ಇತ್ತು. ಆನ್‌ಲೈನ್ ಗೇಮ್‌ನಲ್ಲಿ ಭಾರಿ ಹಣ ಕಳೆದುಕೊಂಡಿದ್ದಾರೆ ಎಂಬುದು ಕೂಡ ತಿಳಿದುಬಂದಿದೆ. ಈ ಆರ್ಥಿಕ ಮತ್ತು ಕಾನೂನು ಸಂಕಷ್ಟಗಳಿಂದಾಗಿ ಅವರು ಈ ತೀರ್ಮಾನಕ್ಕೆ ಬಂದಿರಬಹುದು ಎಂದು ಊಹಿಸಲಾಗಿದೆ.

ಚೆಕ್ ಬೌನ್ಸ್ ಕೇಸ್​ನಲ್ಲಿ ಸಿಲುಕಿದ್ದ ಗುರು ಪ್ರಸಾದ್; ನವೆಂಬರ್ 19ಕ್ಕೆ ಇತ್ತು ವಿಚಾರಣೆ
ಗುರುಪ್ರಸಾದ್
Follow us
Mangala RR
| Updated By: ರಾಜೇಶ್ ದುಗ್ಗುಮನೆ

Updated on: Nov 04, 2024 | 3:43 PM

ನಿರ್ದೇಶಕ ಗುರು ಪ್ರಸಾದ್ ಅವರು ಸಂಕಷ್ಟಕ್ಕೆ ಸಿಲುಕಿದ್ದರು. ಮೈತುಂಬ ಸಾಲ ಮಾಡಿಕೊಂಡಿದ್ದ ಅವರು ಕೊನೆಗೆ ಆತ್ಮಹತ್ಯೆಯ ಮೊರೆ ಹೋದರು. ತಾವು ವಾಸವಿದ್ದ ಅಪಾರ್ಟ್​ಮೆಂಟ್​ನಲ್ಲೇ ಕೊನೆಯುಸಿರು ಎಳೆದರು. ಅವರ ಸಾವು ಶಾಕಿಂಗ್ ಎನಿಸಿದೆ. ಕನ್ನಡ ಚಿತ್ರರಂಗದ ಅನೇಕರು ಅವರ ಸಾವಿಗೆ ಕಂಬನಿ ಮಿಡಿದಿದ್ದಾರೆ. ಅವರು ದುಡುಕಿನ ನಿರ್ಧಾರ ಮಾಡಿದರು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಸದ್ಯ ಗುರುಪ್ರಸಾದ್ ಅವರ ಚೆಕ್​ಬೌನ್ಸ್ ಪ್ರಕರಣದ ಬಗ್ಗೆ ಚರ್ಚೆ ನಡೆದಿದೆ.

ವಿ. ಶ್ರೀನಿವಾಸ್ ಅವರಿಗೆ 30 ಲಕ್ಷ ರೂಪಾಯಿ ಹಣವನ್ನು ಗುರುಪ್ರಸಾದ್ ನೀಡಬೇಕಿತ್ತು. ಗುರುಪ್ರಸಾದ್ ಈ ಮೊದಲು ನೀಡಿದ್ದ ಚೆಕ್​ಗಳು ಬೌನ್ಸ್ ಆಗಿದ್ದವು. ಹೀಗಾಗಿ, ಶ್ರೀನಿವಾಸ್ ಅವರು ಕೋರ್ಟ್ ಮೊರೆ ಹೋಗಿದ್ದರು. ಈ ಪ್ರಕರಣದ ಸಂಬಂಧ ಅಕ್ಟೋಬರ್ 22ರಂದು ಗುರುಪ್ರಸಾದ್ ಅವರು ಕೋರ್ಟ್​ಗೆ ಹಾಜರಾಗಬೇಕಿತ್ತು. ಆದರೆ, ಅನಾರೋಗ್ಯದ ಕಾರಣ ಹೇಳಿದ್ದ ಗುರುಪ್ರಸಾದ್ ಅವರು ಮೆಡಿಕಲ್ ಸರ್ಟಿಫಿಕೇಟ್ ಕೂಡ ನೀಡಿದ್ದರು.

ನವೆಂಬರ್ 19ಕ್ಕೆ ಮುಂದಿನ ವಿಚಾರಣೆ ಇತ್ತು. ಸದ್ಯದಲ್ಲೇ ಕೋರ್ಟ್​ನಲ್ಲಿ ಕೇಸ್ ಮುಗಿದು ಶ್ರೀನಿವಾಸ್ ಪರ ತೀರ್ಪು ಬರುವ ಎಲ್ಲಾ ಸಾಧ್ಯತೆ ಇತ್ತು ಎನ್ನಲಾಗಿದೆ. ಈಗಾಗಲೇ ಹಲವು ಬಾರಿ ಕೋರ್ಟ್​​ಗೆ ಬಾರದೆ ಗುರುಪ್ರಸಾದ್ ಅವರು ತಪ್ಪಿಸಿಕೊಂಡಿದ್ದರು. ಸದ್ಯದಲ್ಲೇ ಮತ್ತೊಮ್ಮೆ ಅರೆಸ್ಟ್ ವಾರಂಟ್ ಜಾರಿ ಆಗುವ ಸಾಧ್ಯತೆಗಳು ಇದ್ದವು ಎಂದು ವರದಿ ಆಗಿದೆ.

ಈ ರೀತಿಯ ಹಲವು ತೊಂದರೆಗಳಿಗೆ ಗುರು ಪ್ರಸಾದ್ ಒಳಗಾಗಿದ್ದರು. ಅವರು ತಮ್ಮ ಮಾತಿನ ಮೂಲಕ, ಸಿನಿಮಾಗಳಲ್ಲಿ ಭಿನ್ನ ಸಂಭಾಷಣೆ ಮೂಲಕ ಗಮನ ಸೆಳೆದಿದ್ದರು. ಅವರು ಮೂರು ಕೋಟಿ ರೂಪಾಯಿಗೂ ಅಧಿಕ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಗುರುಪ್ರಸಾದ್ ಗಡ್ಡವನ್ನು ಏಕೆ ಬಿಡುತ್ತಿದ್ದರು? ಇದೆ ರಾಜ್​ಕುಮಾರ್ ಕನೆಕ್ಷನ್

ಈ ಮಧ್ಯೆ ಗುರುಪ್ರಸಾದ್ ಬಗ್ಗೆ ಜಗ್ಗೇಶ್ ವಿವಿಧ ರೀತಿಯ ಹೇಳಿಕೆ ನೀಡುತ್ತಾ ಇದ್ದಾರೆ. ಆನ್​ಲೈನ್​ ಗೇಮ್​ನಲ್ಲಿ ಗುರುಪ್ರಸಾದ್ 70 ಲಕ್ಷ ರೂಪಾಯಿ ಕಳೆದುಕೊಂಡಿದ್ದರು ಎಂದು ಜಗ್ಗೇಶ್ ಹೇಳಿದ್ದಾರೆ. ‘ಗುರು ಅನೇಕರ ಬಳಿ ಸಾಲ ಮಾಡಿದ್ದ. ಅಷ್ಟೆಲ್ಲ ಸಾಲ ಆದಾಗ ತೀರಿಸಲು ಆಗಲ್ಲ ಎಂಬುದು ಗೊತ್ತಾದಾಗ ಭಯ ಬರುತ್ತದೆ. ಆ ಭಯವೇ ಆತನಿಗೆ ಆತ್ಮಹತ್ಯೆಯ ಆಲೋಚನೆ ಮೂಡಿಸಿರಬಹುದು’ ಎಂದು ಜಗ್ಗೇಶ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ