AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hansika Motwani: ‘ಬಿಂದಾಸ್​’ ನಟಿ ಹನ್ಸಿಕಾ ಮೋಟ್ವಾನಿ ಮದುವೆ; 450 ವರ್ಷ ಹಳೇ ಕೋಟೆಯಲ್ಲಿ ನಡೆಯಲಿದೆ ವಿವಾಹ

Hansika Motwani Marriage: ಖ್ಯಾತ ನಟಿ ಹನ್ಸಿಕಾ ಮೋಟ್ವಾನಿ ಅವರ ಮದುವೆ ಸುದ್ದಿ ಹರಡಿದೆ. ಈ ಅದ್ದೂರಿ ವಿವಾಹ ಒಟ್ಟು 10 ದಿನಗಳ ಕಾಲ ನಡೆಯಲಿದೆ ಎನ್ನಲಾಗುತ್ತಿದೆ.

Hansika Motwani: ‘ಬಿಂದಾಸ್​’ ನಟಿ ಹನ್ಸಿಕಾ ಮೋಟ್ವಾನಿ ಮದುವೆ; 450 ವರ್ಷ ಹಳೇ ಕೋಟೆಯಲ್ಲಿ ನಡೆಯಲಿದೆ ವಿವಾಹ
ಹನ್ಸಿಕಾ ಮೋಟ್ವಾನಿ
TV9 Web
| Edited By: |

Updated on: Oct 18, 2022 | 8:38 AM

Share

50ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿರುವ ಜನಪ್ರಿಯ ನಟಿ ಹನ್ಸಿಕಾ ಮೋಟ್ವಾನಿ (Hansika Motwani) ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಕುರಿತು ಅನೇಕ ಮಾಧ್ಯಮಗಳಲ್ಲಿ ವರದಿ ಆಗಿದೆ. ವಿವಾಹದ ಬಗ್ಗೆ ಅವರು ಅಧಿಕೃತವಾಗಿ ಎಲ್ಲಿಯೂ ಹೇಳಿಕೊಂಡಿಲ್ಲವಾದರೂ ಸುದ್ದಿ ಜೋರಾಗಿ ಹಬ್ಬಿದೆ. ಮೂಲಗಳ ಪ್ರಕಾರ, ಡಿಸೆಂಬರ್​ನಲ್ಲಿ ಹನ್ಸಿಕಾ ಮೋಟ್ವಾನಿ ಮದುವೆ (Hansika Motwani Marriage) ನಡೆಯಲಿದೆ. ಜೈಪುರದಲ್ಲಿ ಇರುವ 450 ವರ್ಷ ಹಳೆಯ ಕೋಟೆಯಲ್ಲಿ ಹನ್ಸಿಕಾ ಅವರು ಸಪ್ತಪದಿ ತುಳಿಯಲಿದ್ದಾರೆ ಎನ್ನಲಾಗುತ್ತಿದೆ. ಕನ್ನಡದ ಸಿನಿಪ್ರಿಯರಿಗೆ ಹನ್ಸಿಕಾ ಪರಿಚಿತರು. ಪುನೀತ್​ ರಾಜ್​ಕುಮಾರ್​ ಜೊತೆ ‘ಬಿಂದಾಸ್​’ (Bindaas Kannada Movie) ಚಿತ್ರದಲ್ಲಿ ನಟಿಸುವ ಮೂಲಕ ಅವರು ಕರ್ನಾಟಕದಲ್ಲಿ ಫೇಮಸ್​ ಆದರು. ಹನ್ಸಿಕಾ ಮೋಟ್ವಾನಿ ಮದುವೆ ಸುದ್ದಿ ಕೇಳಿ ಫ್ಯಾನ್ಸ್​ ಖುಷಿ ಆಗಿದ್ದಾರೆ.

ಡಿಸೆಂಬರ್​ನಲ್ಲಿ ಹನ್ಸಿಕಾ ಮೋಟ್ವಾನಿ ಅವರ ಮದುವೆ ನಡೆಯಲಿದೆ. ಆದರೆ ಡೇಟ್​ ಇನ್ನೂ ಖಚಿತ ಆಗಿಲ್ಲ. ಜೈಪುರದ ಪುರಾತನ ಕೋಟೆಯೊಂದರಲ್ಲಿ ಈಗಾಗಲೇ ತಯಾರಿ ಆರಂಭ ಆಗಿದೆ. ತುಂಬ ವೈಭವದಿಂದ ಈ ವಿವಾಹ ನೆರವೇರಲಿದೆ. ಆಪ್ತರು ಮತ್ತು ಕುಟುಂಬದವರನ್ನು ಮಾತ್ರ ಆಹ್ವಾನಿಸಲಾಗುವುದು. ಈಗಾಗಲೇ ಅನೇಕ ರೂಮ್​ಗಳನ್ನು ಅತಿಥಿಗಳಿಗಾಗಿ ಬುಕ್​ ಮಾಡಲಾಗಿದೆ.

ಹನ್ಸಿಕಾ ಮೋಟ್ವಾನಿ ಅವರಿಗೆ ಈಗ 31 ವರ್ಷ ವಯಸ್ಸು. ಚಿತ್ರರಂಗದಲ್ಲಿ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಬಾಲನಟಿಯಾಗಿಯೇ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಹೃತಿಕ್​ ರೋಷನ್​ ನಟನೆಯ ‘ಕೋಯಿ ಮಿಲ್​ ಗಯಾ’ ಸಿನಿಮಾದಲ್ಲಿ ಅವರು ನಟಿಸಿ, ಗಮನ ಸೆಳೆದಿದ್ದರು. ಬಳಿಕ ಹೀರೋಯಿನ್​ ಆಗಿ ಬಡ್ತಿ ಪಡೆದುಕೊಂಡರು. ತಮಿಳು, ತೆಲುಗು, ಮಲಯಾಳಂ, ಕನ್ನಡದಲ್ಲಿ ಅಭಿನಯಿಸಿ ಹೆಚ್ಚಿನ ಜನಪ್ರಿಯತೆ ಪಡೆದುಕೊಂಡರು.

ಇದನ್ನೂ ಓದಿ
Image
ಖ್ಯಾತ ನಿರ್ಮಾಪಕನ ಜತೆ ಮದುವೆ ಆದ ಕಿರುತೆರೆ ನಟಿ ಮಹಾಲಕ್ಷ್ಮೀ; ‘ನಿಜವಾದ ವಿವಾಹವೇ?’ ಎಂದ ಫ್ಯಾನ್ಸ್
Image
ಯಾಕೆ ನೀನಿನ್ನೂ ಮದುವೆ ಆಗಿಲ್ಲ…ವಿಡಿಯೋ ಮೂಲಕ ಉತ್ತರ ಕೊಟ್ಟ ನಟಿ ರಮ್ಯಾ
Image
Priya Anand: ನಿತ್ಯಾನಂದ ಜತೆ ಮದುವೆ ಆಗ್ತೀನಿ ಅಂತ ‘ಜೇಮ್ಸ್​’ ನಟಿ ಪ್ರಿಯಾ ಆನಂದ್​ ಹೇಳಿದ್ದೇಕೆ?
Image
Pavitra Lokesh: ‘ಸುಚೇಂದ್ರ ಪ್ರಸಾದ್​ ಜತೆ ನನ್ನ ಮದುವೆ ಆಗಿಲ್ಲ, 11 ವರ್ಷ ಒಟ್ಟಿಗೆ ಇದ್ದೆ ಅಷ್ಟೇ’: ನಟಿ ಪವಿತ್ರಾ ಲೋಕೇಶ್​

ದೆಹಲಿ ಮೂಲದ ಉದ್ಯಮಿಯೊಬ್ಬರ ಜೊತೆ ಹನ್ಸಿಕಾ ಮೋಟ್ವಾನಿ ಡೇಟಿಂಗ್​ ಮಾಡುತ್ತಿದ್ದಾರೆ ಎಂಬ ಸುದ್ದಿ ಬಹಳ ಹಿಂದೆಯೇ ಕೇಳಿಬಂದಿತ್ತು. ಆದರೆ ಆ ಬಗ್ಗೆ ಸ್ಪಷ್ಟತೆ ಸಿಕ್ಕಿರಲಿಲ್ಲ. ಈಗ ಏಕಾಏಕಿ ಅವರ ಮದುವೆ ಸುದ್ದಿ ಹರಡಿದೆ. ಈ ಅದ್ದೂರಿ ವಿವಾಹ ಒಟ್ಟು 10 ದಿನಗಳ ಕಾಲ ನಡೆಯಲಿದೆ ಎನ್ನಲಾಗುತ್ತಿದೆ.

ಮದುವೆ ಕುರಿತು ಕೇಳಿಬಂದ ಸುದ್ದಿಗೆ ಹನ್ಸಿಕಾ ಕಡೆಯಿಂದಲೇ ಪ್ರತಿಕ್ರಿಯೆ ಬರಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ. ಹನ್ಸಿಕಾ ಕೈಯಲ್ಲಿ ಈಗಲೂ ಅನೇಕ ಸಿನಿಮಾಗಳಿವೆ. ಚಿತ್ರರಂಗದಲ್ಲಿ ಬ್ಯುಸಿ ಆಗಿರುವಾಗಲೇ ಅವರು ದಾಂಪತ್ಯ ಜೀವನಕ್ಕೆ ಕಾಲಿಡುವ ನಿರ್ಧಾರಕ್ಕೆ ಬಂದಿರುವುದು ಕೆಲವರಿಗೆ ಅಚ್ಚರಿ ಮೂಡಿಸಿದೆ. ಹನ್ಸಿಕಾ ನಟಿಸಿದ 50ನೇ ಸಿನಿಮಾ ‘ಮಹಾ’ ಈ ವರ್ಷ ಜುಲೈನಲ್ಲಿ ರಿಲೀಸ್​ ಆಯಿತು. ಆದರೆ ಹೇಳಿಕೊಳ್ಳುವಂತಹ ಯಶಸ್ಸು ಕಾಣಲಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ