AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duniya Vijay Birthday: ದುನಿಯಾ ವಿಜಯ್​ಗೆ ಹುಟ್ಟುಹಬ್ಬದ ಸಂಭ್ರಮ; ವಿಶೇಷ ದಿನಕ್ಕೆ ಅಭಿಮಾನಿಗಳ ಹಾರೈಕೆ

Happy Birthday Duniya Vijay: ಬಾಲಯ್ಯ 107ನೇ ಚಿತ್ರಕ್ಕೆ ದುನಿಯಾ ವಿಜಯ್​ ವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದ ಹೊಸ ಪೋಸ್ಟರ್​ ರಿಲೀಸ್​ ಆಗಲಿದೆಯೇ ಎನ್ನುವ ಕುತೂಹಲ ಅಭಿಮಾನಿಗಳನ್ನು ಕಾಡಿದೆ.

Duniya Vijay Birthday: ದುನಿಯಾ ವಿಜಯ್​ಗೆ ಹುಟ್ಟುಹಬ್ಬದ ಸಂಭ್ರಮ; ವಿಶೇಷ ದಿನಕ್ಕೆ ಅಭಿಮಾನಿಗಳ ಹಾರೈಕೆ
ವಿಜಯ್
TV9 Web
| Edited By: |

Updated on: Jan 20, 2022 | 6:00 AM

Share

ನಟ ದುನಿಯಾ ವಿಜಯ್​ಗೆ (Duniya Vijay Birthday) ಇಂದು (ಜನವರಿ 20) ಹುಟ್ಟು ಹಬ್ಬದ ಸಂಭ್ರಮ. ಸ್ಯಾಂಡಲ್​ವುಡ್​ನಲ್ಲಿ (Sandalwood) ಹಲವು ವರ್ಷಗಳಿಂದ ಸ್ಟಾರ್​ ಆಗಿ ಮಿಂಚುತ್ತಿರುವ ಅವರಿಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳಿಂದ ಜನ್ಮದಿನದ ಶುಭಾಶಯ ಸಂದೇಶ ಬಂದಿದೆ. ಟ್ವಿಟರ್​ನಲ್ಲಿ ಅಭಿಮಾನಿಗಳು ಅವರಿಗೆ ಶುಭಾಶಯ ತಿಳಿಸುತ್ತಿದ್ದಾರೆ. ಬಾಲಯ್ಯ ನಟನೆಯ ಮುಂದಿನ ಚಿತ್ರದಲ್ಲಿ ವಿಲನ್​ ಆಗಿ ದುನಿಯಾ ವಿಜಯ್​ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರತಂಡದಿಂದ ಪೋಸ್ಟರ್​ ರಿಲೀಸ್​ ಆಗಲಿದೆಯೇ ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ. ಜನ್ಮದಿನ ಆಚರಿಸಿಕೊಳ್ಳುವುದಿಲ್ಲ ಎಂದು ದುನಿಯಾ ವಿಜಯ್​ ಈ ಮೊದಲೇ ತಿಳಿಸಿದ್ದಾರೆ. ಹೀಗಾಗಿ, ಅಭಿಮಾನಿಗಳಿಗೆ ಈ ವಿಚಾರದಲ್ಲಿ ಕೊಂಚ ನಿರಾಸೆ ಆಗಿದೆ.

ದುನಿಯಾ ವಿಜಯ್​ಗೆ ಈ ವರ್ಷದ ಬರ್ತ್​ಡೇ ವಿಶೇಷ ಆಗಬೇಕಿತ್ತು. ಕಳೆದ ವರ್ಷ ತೆರೆಗೆ ಬಂದಿರುವ ‘ಸಲಗ’ ಚಿತ್ರದಲ್ಲಿ ನಟಿಸುವುದರ ಜತೆಗೆ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದಾರೆ ವಿಜಯ್​. ನಿರ್ದೇಶಕನಾಗಿ ದುನಿಯಾ ವಿಜಯ್​ ಎಲ್ಲರಿಂದಲೂ ಮೆಚ್ಚುಗೆ ಪಡೆದುಕೊಂಡಿದ್ದಾರೆ. ರೌಡಿಸಂ ಕಥೆಯನ್ನು ಅವರು ಅದ್ಭುತವಾಗಿ ಕಟ್ಟಿಕೊಟ್ಟಿದ್ದರು ಅವರು. ಹೀಗಾಗಿ, ಅಭಿಮಾನಿಗಳು ಖುಷಿಪಟ್ಟಿದ್ದರು. ಹೀಗಾಗಿ, ಅವರ ಬರ್ತ್​ಡೇ ಜೋರಾಗಿ ಇರಲಿದೆ ಎಂದು ಅಭಿಮಾನಿಗಳು ಭಾವಿಸಿದ್ದರು. ಆದರೆ, ಸಾಕಷ್ಟು ಕಹಿ ಘಟನೆಗಳು ನಡೆದವು.

ಸ್ಯಾಂಡಲ್​ವುಡ್​ನ ಖ್ಯಾತ ನಟ ಪುನೀತ್​ ರಾಜ್​ಕುಮಾರ್​ ಅವರು ಅಕ್ಟೋಬರ್​ ತಿಂಗಳಲ್ಲಿ ಮೃತಪಟ್ಟರು. ಇದು ಇಡೀ ಚಿತ್ರರಂಗಕ್ಕೆ ನೋವು ತಂದಿದೆ. ದುನಿಯಾ ವಿಜಯ್​ ಅವರಿಗೂ ಈ ವಿಚಾರ ದುಃಖ ನೀಡಿದೆ. ಕಳೆದ ವರ್ಷ ದುನಿಯಾ ವಿಜಯ್​ ಅವರ ತಂದೆ, ತಾಯಿ ಇಬ್ಬರೂ ಮೃತಪಟ್ಟರು. ದುನಿಯಾ ವಿಜಯ್​ಗೆ ಬೆನ್ನೆಲುಬಾಗಿದ್ದ ಇಬ್ಬರನ್ನೂ ಒಂದೇ ವರ್ಷ ಕಳೆದುಕೊಂಡಿದ್ದು ಅವರಿಗೆ ಸಾಕಷ್ಟು ನೋವು ತಂದಿದೆ. ಈ ಮೂರು ಪ್ರಮುಖ ಕಾರಣಕ್ಕೆ ಅವರು ಹುಟ್ಟುಹಬ್ಬ ಆಚರಿಸಿಕೊಂಡಿಲ್ಲ.

ದೇಶದಲ್ಲಿ ಕೊವಿಡ್ ಪ್ರಕರಣ ಹೆಚ್ಚುತ್ತಿದೆ. ಅದನ್ನು ನಿಯಂತ್ರಿಸೋಕೆ ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕೆ ಹಲವು ಕಠಿಣ ನಿಯಮ ಜಾರಿಗೆ ತರಲಾಗಿದೆ. ಈ ಸಂದರ್ಭದಲ್ಲಿ ಅಭಿಮಾನಿಗಳು ಮನೆಯ ಬಳಿ ಸೇರಿದರೆ ಕೊವಿಡ್​ ಹೆಚ್ಚುವ ಸಾಧ್ಯತೆ ಇರುತ್ತದೆ. ಹೀಗಾಗಿ, ಮನೆಯ ಸಮೀಪ ಅಭಿಮಾನಿಗಳು ಬರದಂತೆ ದುನಿಯಾ ವಿಜಯ್​ ಕೋರಿಕೊಂಡಿದ್ದಾರೆ. ಈ ಮೂಲಕ ಅವರು ಸಾಮಾಜಿಕ ಕಳಕಳಿ ಮೆರೆದಿದ್ದಾರೆ.

ಬಾಲಯ್ಯ 107ನೇ ಚಿತ್ರಕ್ಕೆ ದುನಿಯಾ ವಿಜಯ್​ ವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದ ಹೊಸ ಪೋಸ್ಟರ್​ ರಿಲೀಸ್​ ಆಗಲಿದೆಯೇ ಎನ್ನುವ ಕುತೂಹಲ ಅಭಿಮಾನಿಗಳನ್ನು ಕಾಡಿದೆ. ಇದರ ಜತೆಗೆ ಯಾವುದಾದರೂ ಹೊಸ ಸಿನಿಮಾ ಘೋಷಣೆ ಆದರೆ, ಅಭಿಮಾನಿಗಳ ಖುಷಿ ದುಪ್ಪಟ್ಟಾಗಲಿದೆ.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆಯಲ್ಲಿ ದುನಿಯಾ ವಿಜಯ್ ಭಾಗಿ; ​ನೀರಿಗಾಗಿ ಹೋರಾಟಕ್ಕೆ ‘ಸಲಗ’ ಬೆಂಬಲ

‘ಅಪ್ಪ, ಅಮ್ಮ, ಅಪ್ಪು ಅವರನ್ನು ಕಳೆದುಕೊಂಡ ನೋವು ಕಾಡುತ್ತಿದೆ’ ಎಂದು ಬರ್ತ್​ಡೇ ಆಚರಣೆಗೆ ದುನಿಯಾ ವಿಜಯ್​ ಬ್ರೇಕ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ