Yash Birthday: ಯಶ್​ ಜನ್ಮದಿನಕ್ಕೆ ಆಯ್ರಾ, ಯಥರ್ವ್​ ಕೊಟ್ಟ ಗಿಫ್ಟ್​ ಏನು? ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್​

Happy Birthday Yash: ಯಶ್​ ಬರ್ತ್​ಡೇ ಸಲುವಾಗಿ ಪುತ್ರಿ ಆಯ್ರಾ ಮತ್ತು ಪುತ್ರ ಯಥರ್ವ್​ ಒಂದು ವಿಶೇಷ ಗಿಫ್ಟ್​ ನೀಡಿದ್ದಾರೆ. ಈ ಮುದ್ದಾದ ಉಡುಗೊರೆಯ ಫೋಟೋ ಈಗ ವೈರಲ್​ ಆಗುತ್ತಿದೆ.

Yash Birthday: ಯಶ್​ ಜನ್ಮದಿನಕ್ಕೆ ಆಯ್ರಾ, ಯಥರ್ವ್​ ಕೊಟ್ಟ ಗಿಫ್ಟ್​ ಏನು? ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್​
ರಾಧಿಕಾ ಪಂಡಿತ್, ಆಯ್ರಾ , ಯಥರ್ವ್,​ ಯಶ್​​
Follow us
TV9 Web
| Updated By: ಮದನ್​ ಕುಮಾರ್​

Updated on:Jan 08, 2022 | 10:31 AM

ಪ್ಯಾನ್​ ಇಂಡಿಯಾ ಸ್ಟಾರ್ ಆಗಿ ಬೆಳೆದಿರುವ ಕನ್ನಡದ ನಟ ಯಶ್​ (Yash) ಅವರು ಇಂದು (ಜ.8) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳು, ಸೆಲೆಬ್ರಿಟಿಗಳು, ಆಪ್ತರು, ಸ್ನೇಹಿತರು ಅವರಿಗೆ ಶುಭಾಶಯ ಕೋರುತ್ತಿದ್ದಾರೆ. ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಅಭಿಮಾನಿಗಳ ಜೊತೆ ಸೇರಿಕೊಂಡು ಬರ್ತ್​ಡೇ ಆಚರಿಸಿಕೊಳ್ಳಲು ಯಶ್​ಗೆ ಸಾಧ್ಯವಾಗುತ್ತಿಲ್ಲ. ಕೇವಲ ಕುಟುಂಬದವರು ಮತ್ತು ಆಪ್ತರ ಜತೆ ಅವರು ಈ ದಿನವನ್ನು ಕಳೆಯಲಿದ್ದಾರೆ. ಅಪ್ಪನ ಹುಟ್ಟುಹಬ್ಬಕ್ಕಾಗಿ ಆಯ್ರಾ ಯಶ್​ (Ayra Yash) ಮತ್ತು ಯಥರ್ವ್​ ಯಶ್​ (Yatharv Yash) ವಿಶೇಷ ಗಿಫ್ಟ್​ ನೀಡಿದ್ದಾರೆ. ಅದರ ಫೋಟೋವನ್ನು ರಾಧಿಕಾ ಪಂಡಿತ್​ (Radhika Pandit) ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.

ಯಶ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಸಿನಿಮಾ ಚಟುವಟಿಕೆಗಳಲ್ಲಿ ಎಷ್ಟೇ ಬ್ಯುಸಿ ಇದ್ದರೂ ಕೂಡ ಅವರು ಕುಟುಂಬದವರಿಗಾಗಿ ಸಮಯ ನೀಡುತ್ತಾರೆ. ಮಕ್ಕಳ ಜತೆ ಆಟವಾಡುತ್ತ ಕಾಲ ಕಳೆಯುತ್ತಾರೆ. ಅವರಿಗಾಗಿ ಪುತ್ರಿ ಆಯ್ರಾ ಮತ್ತು ಪುತ್ರ ಯಥರ್ವ್​ ಒಂದು ವಿಶೇಷ ಗಿಫ್ಟ್​ ನೀಡಿದ್ದಾರೆ. ಹೃದಯದ ಚಿತ್ರ ಬರೆದು, ಅದರೊಳಗೆ ಆಯ್ರಾ ಮತ್ತು ಯಥರ್ವ್​ ಅಂಗೈ ಮುದ್ರೆ ಒತ್ತಿದ್ದಾರೆ. ಈ ಮುದ್ದಾದ ಉಡುಗೊರೆಯ ಫೋಟೋ ಈಗ ವೈರಲ್​ ಆಗುತ್ತಿದೆ.

ವಿವಿಧ ಕ್ಷೇತ್ರದ ಗಣ್ಯರು ಕೂಡ ಯಶ್​ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಈ ದಿನದ ಖುಷಿಯನ್ನು ಹೆಚ್ಚಿಸಲು ‘ಹೊಂಬಾಳೆ ಫಿಲ್ಮ್ಸ್​’ ಕೂಡ ಸಾಥ್​ ನೀಡಿದೆ. ಅಭಿಮಾನಿಗಳ ಆಸೆಯಂತೆಯೇ ಯಶ್​ ಜನ್ಮದಿನದ ಪ್ರಯುಕ್ತ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಿಂದ ಹೊಸ ಪೋಸ್ಟರ್​ ಬಿಡುಗಡೆ ಆಗಿದೆ. ಬೆಳಗ್ಗೆ 9 ಗಂಟೆಗೆ ಪೋಸ್ಟರ್​ ರಿಲೀಸ್​ ಮಾಡುವುದಾಗಿ ಚಿತ್ರತಂಡ ಒಂದು ದಿನ ಮುಂಚಿತವಾಗಿ ಘೋಷಿಸಿತ್ತು. ಅದಕ್ಕಾಗಿ ಯಶ್​ ಫ್ಯಾನ್ಸ್​ ಕಾದು ಕುಳಿತಿದ್ದರು. ಈಗ ಹೊಸ ಪೋಸ್ಟರ್​ ಕಂಡು ಎಲ್ಲರೂ ಖುಷಿಪಟ್ಟಿದ್ದಾರೆ.

ಅಲ್ಲದೇ, ‘ಕೆಜಿಎಫ್​ 2’ ಚಿತ್ರದ ರಿಲೀಸ್​ ದಿನಾಂಕದ ಬಗ್ಗೆ ಕೆಲವರಿಗೆ ಅನುಮಾನ ಮೂಡಿತ್ತು. ಆ ಬಗ್ಗೆಯೂ ಚಿತ್ರತಂಡದಿಂದ ಸ್ಪಷ್ಟನೆ ಸಿಕ್ಕಿದೆ. ಹೊಸ ಪೋಸ್ಟರ್​ ಕುರಿತು ಟ್ವೀಟ್​ ಮಾಡಿರುವ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯು #KGF2onApr14 ಎಂಬ ಹ್ಯಾಶ್​ ಟ್ಯಾಗ್​ ಬಳಸುವ ಮೂಲಕ ರಿಲೀಸ್​ ದಿನಾಂಕದಲ್ಲಿ ಸದ್ಯಕ್ಕಂತೂ ಯಾವುದೇ ಬದಲಾವಣೆ ಇಲ್ಲ ಎಂಬುದನ್ನು ಖಚಿತಪಡಿಸಿದೆ.

ಇದನ್ನೂ ಓದಿ:

‘ಯಶ್​ ಬರ್ತ್​ಡೇ ಮಾಡಲು ರಜೆ ಕೊಡಿ’; ಪತ್ರ ಬರೆದು ಪ್ರಾಂಶುಪಾಲರಿಗೆ ಮನವಿ ಮಾಡಿದ ವಿದ್ಯಾರ್ಥಿ

ರಾಧಿಕಾ-ಯಶ್​ಗಾಗಿ ಸಾಂಟಾ ಕ್ಲಾಸ್​ ಆದ ಯಥರ್ವ್​​; ಕ್ಯೂಟ್​ ಆಗಿ ನಕ್ಕ ಆಯ್ರಾ

Published On - 9:57 am, Sat, 8 January 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ