AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Yash: ಯಶ್​ ಹುಟ್ಟುಹಬ್ಬಕ್ಕೆ ‘ಕೆಜಿಎಫ್​ 2’ ಹೊಸ ಪೋಸ್ಟರ್​; ರಿಲೀಸ್​ ಡೇಟ್​ ಬಗ್ಗೆ ಇದ್ದ ಅನುಮಾನ ಕ್ಲಿಯರ್​

KGF Chapter 2 New Poster: ಯಶ್​ ಬರ್ತ್​ಡೇ ಪ್ರಯುಕ್ತ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಿಂದ ಹೊಸ ಪೋಸ್ಟರ್​ ರಿಲೀಸ್​ ಆಗಿದೆ. ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡು ಫ್ಯಾನ್ಸ್​ ಸಂಭ್ರಮಿಸುತ್ತಿದ್ದಾರೆ.

Happy Birthday Yash: ಯಶ್​ ಹುಟ್ಟುಹಬ್ಬಕ್ಕೆ ‘ಕೆಜಿಎಫ್​ 2’ ಹೊಸ ಪೋಸ್ಟರ್​; ರಿಲೀಸ್​ ಡೇಟ್​ ಬಗ್ಗೆ ಇದ್ದ ಅನುಮಾನ ಕ್ಲಿಯರ್​
ಕೆಜಿಎಫ್​: ಚಾಪ್ಟರ್​ 2 ಹೊಸ ಪೋಸ್ಟರ್
TV9 Web
| Edited By: |

Updated on:Jan 08, 2022 | 9:30 AM

Share

‘ರಾಕಿಂಗ್​ ಸ್ಟಾರ್​’ ಯಶ್​ (Yash) ಅವರಿಗೆ ಇಂದು (ಜ.8) ಹುಟ್ಟುಹಬ್ಬದ ಸಂಭ್ರಮ. ಈ ದಿನದ ಖುಷಿಯನ್ನು ಹೆಚ್ಚಿಸಲು ‘ಹೊಂಬಾಳೆ ಫಿಲ್ಮ್ಸ್​’ (Hombale Films) ಕೂಡ ಸಾಥ್​ ನೀಡಿದೆ. ಅಭಿಮಾನಿಗಳ ಆಸೆಯಂತೆಯೇ ಯಶ್​ ಜನ್ಮದಿನದ (Yash Birthday) ಪ್ರಯುಕ್ತ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾದಿಂದ ಹೊಸ ಪೋಸ್ಟರ್​ ಬಿಡುಗಡೆ ಆಗಿದೆ. ಬೆಳಗ್ಗೆ 9 ಗಂಟೆಗೆ ಪೋಸ್ಟರ್​ ರಿಲೀಸ್​ ಮಾಡುವುದಾಗಿ ಚಿತ್ರತಂಡ ಒಂದು ದಿನ ಮುಂಚಿತವಾಗಿ ಘೋಷಿಸಿತ್ತು. ಅದಕ್ಕಾಗಿ ಯಶ್​ ಫ್ಯಾನ್ಸ್​ ಕಾದು ಕುಳಿತಿದ್ದರು. ಈಗ ಹೊಸ ಪೋಸ್ಟರ್​ (KGF Chapter 2 New Poster) ಕಂಡು ಎಲ್ಲರೂ ಖುಷಿಪಟ್ಟಿದ್ದಾರೆ. ಅಲ್ಲದೇ, ‘ಕೆಜಿಎಫ್​ 2’ (KGF 2) ಚಿತ್ರದ ರಿಲೀಸ್​ ದಿನಾಂಕದ ಬಗ್ಗೆ ಕೆಲವರಿಗೆ ಅನುಮಾನ ಮೂಡಿತ್ತು. ಆ ಬಗ್ಗೆಯೂ ಚಿತ್ರತಂಡದಿಂದ ಸ್ಪಷ್ಟನೆ ಸಿಕ್ಕಿದೆ.

2022ರ ಏಪ್ರಿಲ್​ 14ರಂದು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬಿಡುಗಡೆ ಆಗಲಿದೆ ಎಂದು ಈ ಮೊದಲೇ ಘೋಷಿಸಲಾಗಿತ್ತು. ಆದರೆ ಈಗ ದೇಶದಲ್ಲಿ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಅನೇಕ ಬಿಗ್​ ಬಜೆಟ್​ ಸಿನಿಮಾಗಳು ತಮ್ಮ ರಿಲೀಸ್​ ಡೇಟ್​ ಮುಂದೂಡಿಕೊಂಡಿವೆ. ಹಾಗಾದ್ರೆ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ರಿಲೀಸ್​ ದಿನಾಂಕದಲ್ಲಿ ಬದಲಾವಣೆ ಆಗಬಹುದಾ ಎಂಬ ಅನುಮಾನ ಮೂಡಿತ್ತು. ಆದರೆ ಹೊಸ ಪೋಸ್ಟರ್​ ಕುರಿತು ಟ್ವೀಟ್​ ಮಾಡಿರುವ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯು #KGF2onApr14 ಎಂಬ ಹ್ಯಾಶ್​ ಟ್ಯಾಗ್​ ಬಳಸುವ ಮೂಲಕ ರಿಲೀಸ್​ ದಿನಾಂಕದಲ್ಲಿ ಸದ್ಯಕ್ಕಂತೂ ಯಾವುದೇ ಬದಲಾವಣೆ ಇಲ್ಲ ಎಂಬುದನ್ನು ಖಚಿತಪಡಿಸಿದೆ.

ಕಳೆದ ವರ್ಷ ಯಶ್​ ಹುಟ್ಟುಹಬ್ಬದ ದಿನ ‘ಕೆಜಿಎಫ್​: ಚಾಪ್ಟರ್​ 2’ ಟೀಸರ್​ ಬಿಡುಗಡೆಯಾಗಿ ಧೂಳೆಬ್ಬಿಸಿತ್ತು. ಈ ಬಾರಿ ಕೂಡ ಟೀಸರ್​ ಬರಬಹುದು ಎಂದು ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ಆ ರೀತಿ ಯಾವುದೇ ಪ್ಲ್ಯಾನ್​ ಇಲ್ಲ ಎಂಬುದನ್ನು ಕೆಲವೇ ದಿನಗಳ ಹಿಂದೆ ಯಶ್​ ಸ್ಪಷ್ಟಪಡಿಸಿದ್ದರು. ಅಭಿಮಾನಿಗಳಿಗಾಗಿ ಈಗ ಹೊಸ ಪೋಸ್ಟರ್​ ಬಂದಿದೆ. ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಳ್ಳುವ ಮೂಲಕ ಫ್ಯಾನ್ಸ್​ ಸಂಭ್ರಮಿಸುತ್ತಿದ್ದಾರೆ.

ಈ ಚಿತ್ರಕ್ಕೆ ಪ್ರಶಾಂತ್​ ನೀಲ್​ ನಿರ್ದೇಶನ ಮಾಡುತ್ತಿದ್ದಾರೆ. ಬಾಲಿವುಡ್​ ಕಲಾವಿದರಾದ ಸಂಜಯ್​ ದತ್​ ಹಾಗೂ ರವೀನಾ ಟಂಡನ್​ ನಟಿಸಿರುವುದರಿಂದ ಹೈಪ್​ ಹೆಚ್ಚಿದೆ. ಹೊಸದಾಗಿ ಪ್ರಕಾಶ್​ ರೈ ಎಂಟ್ರಿ ಕೂಡ ಆಗಿರುವುದು ನಿರೀಕ್ಷೆ ಹೆಚ್ಚಲು ಕಾರಣ ಆಗಿದೆ.

ಇದನ್ನೂ ಓದಿ:

‘ಯಶ್​ ಬರ್ತ್​ಡೇ ಮಾಡಲು ರಜೆ ಕೊಡಿ’; ಪತ್ರ ಬರೆದು ಪ್ರಾಂಶುಪಾಲರಿಗೆ ಮನವಿ ಮಾಡಿದ ವಿದ್ಯಾರ್ಥಿ

‘ಬರ್ತ್​ಡೇಗೆ ‘ಕೆಜಿಎಫ್​ 2’ ಟೀಸರ್​ ಬರಲ್ಲ, ಸ್ವಲ್ಪ ದಿನ ಕಾಯಿರಿ ಟ್ರೇಲರ್​ ಬಿಡ್ತೀವಿ’; ಯಶ್​

Published On - 9:03 am, Sat, 8 January 22

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ