ಕನ್ನಡ ಚಿತ್ರರಂಗದಲ್ಲಿ ರಿಷಬ್ ಶೆಟ್ಟಿ (Rishab Shetty) ಅವರು ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಸಕ್ರಿಯರಾಗಿದ್ದಾರೆ. ಅವರ ಪ್ರತಿ ಸಿನಿಮಾಗಳು ಕೂಡ ಒಂದಿಲ್ಲೊಂದು ರೀತಿಯಲ್ಲಿ ಗಮನ ಸೆಳೆಯುತ್ತಿವೆ. ಕೆಲವೇ ದಿನಗಳ ಹಿಂದೆ ಅವರ ‘ಹರಿಕಥೆ ಅಲ್ಲ ಗಿರಿಕಥೆ’ ಸಿನಿಮಾ ಬಿಡುಗಡೆ ಆಯಿತು. ಪ್ರೇಕ್ಷಕರಿಗೆ ನಗುವಿನ ಕಚಗುಳಿ ಇಡುವಲ್ಲಿ ಈ ಚಿತ್ರ ಯಶಸ್ವಿ ಆಯಿತು. ಈ ಸಿನಿಮಾ ರಿಲೀಸ್ ಆಗುತ್ತಿದ್ದಂತೆಯೇ ರಿಷಬ್ ಶೆಟ್ಟಿ ಅವರ ಮನೆಗೆ ಹೊಸ ಕಾರು ಬಂದಿದೆ. ಹೌದು, ದುಬಾರಿ ಐಷಾರಾಮಿ ಕಾರನ್ನು ಅವರು ಖರೀದಿಸಿದ್ದಾರೆ. ಅದರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ ಪತ್ನಿ ಪ್ರಗತಿ ಶೆಟ್ಟಿ (Pragathi Shetty). ‘ಆಡಿ ಕ್ಯೂ7’ ಕಾರನ್ನು (Audi Q7) ಖರೀದಿಸಿರುವ ರಿಷಬ್ ಶೆಟ್ಟಿ ಅವರಿಗೆ ಅಭಿಮಾನಿಗಳು ಮತ್ತು ಸ್ನೇಹಿತರು ಅಭಿನಂದನೆ ತಿಳಿಸುತ್ತಿದ್ದಾರೆ.
ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಅವರು ಕೂಡ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಹಲವಾರು ಸಿನಿಮಾಗಳಿಗೆ ಅವರು ಕಾಸ್ಟ್ಯೂಮ್ ಡಿಸೈನ್ ಮಾಡಿದ್ದಾರೆ. ಮನೆಗೆ ಬಂದಿರುವ ಹೊಸ ಕಾರಿನ ಎದುರು ನಿಂತು ಅವರು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ. ‘ಆಡಿ ಕ್ಯೂ7 ಹೊಸದಾಗಿ ಸೇರ್ಪಡೆ ಆಯ್ತು. ನಿಮ್ಮ ಪರಿಶ್ರಮ ಮತ್ತು ಬದ್ಧತೆ ಬಗ್ಗೆ ಯಾವಾಗಲೂ ಹೆಮ್ಮೆ ಆಗುತ್ತದೆ’ ಎಂದು ಪ್ರಗತಿ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
‘ಕಿರಿಕ್ ಪಾರ್ಟಿ’ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ಭರ್ಜರಿ ಗೆಲುವು ಕಂಡವರು ರಿಷಬ್ ಶೆಟ್ಟಿ. ನಂತರ ಅವರು ನಿರ್ದೇಶನ ಮಾಡಿದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ: ಕಾಸರಗೋಡು’ ಚಿತ್ರ ಕೂಡ ಯಶಸ್ವಿ ಆಯಿತು. ‘ಬೆಲ್ ಬಾಟಂ’ ಸಿನಿಮಾ ಮೂಲಕ ರಿಷಬ್ ಶೆಟ್ಟಿ ಹೀರೋ ಆದರು. ಅದರಲ್ಲೂ ಅವರಿಗೆ ದೊಡ್ಡ ಗೆಲುವು ಸಿಕ್ಕಿತು. ಈಗ ಹಲವು ಪ್ರಾಜೆಕ್ಟ್ಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.
ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್’ ಬ್ಯಾನರ್ನಲ್ಲಿ ‘ಕಾಂತಾರ’ ಸಿನಿಮಾ ಮೂಡಿಬರುತ್ತಿವೆ. ಈ ಚಿತ್ರಕ್ಕೆ ರಿಷಬ್ ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯಪಾತ್ರವನ್ನೂ ಮಾಡುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್ ಸಖತ್ ಗಮನ ಸೆಳೆದಿದೆ. ಈ ವರ್ಷ ದಸರಾ ಹಬ್ಬದ ಪ್ರಯುಕ್ತ ಸೆಪ್ಟೆಂಬರ್ 30ರಂದು ಈ ಸಿನಿಮಾ ರಿಲೀಸ್ ಆಗಲಿದೆ.
ಇದನ್ನೂ ಓದಿ: Rishab Shetty: ರಿಷಬ್ ಶೆಟ್ಟಿ ರಿಯಲ್ ಬದುಕಿಗೆ ಹತ್ತಿರವಾಗಿದೆ ‘ಹರಿಕಥೆ ಅಲ್ಲ ಗಿರಿಕಥೆ’ ಸಿನಿಮಾ; ಏನು ಇದರ ಕಹಾನಿ?
ದಸರಾ ಹಬ್ಬಕ್ಕೆ ಬರಲಿದೆ ‘ಕಾಂತಾರ’; ರಿಷಬ್ ಶೆಟ್ಟಿ ಚಿತ್ರದ ರಿಲೀಸ್ ಡೇಟ್ ಘೋಷಿಸಿದ ‘ಹೊಂಬಾಳೆ ಫಿಲ್ಮ್ಸ್’
Published On - 11:26 am, Sun, 3 July 22