ಮದುವೆಗೂ ಮೊದಲೇ ಇನ್ನೊಂದು ಗುಡ್​ ನ್ಯೂಸ್​ ನೀಡಿದ ಹರ್ಷಿಕಾ ಪೂಣಚ್ಚ-ಭುವನ್​ ಪೊನ್ನಣ್ಣ

‘ಭುವನಂ ಶ್ರೇಷ್ಠಮ್​ ಗಚ್ಚಾಮಿ’ ಸಿನಿಮಾದ ಪೋಸ್ಟರ್​ ಲಾಂಚ್​ ಮಾಡುವುದರ ಜೊತೆಗೆ ಒಂದಷ್ಟು ಮಾಹಿತಿಯನ್ನೂ ಹಂಚಿಕೊಳ್ಳಲಾಗಿದೆ. ಬಾಕ್ಸಿಂಗ್​ ಕುರಿತಾದ ಕಥೆಯನ್ನು ಈ ಸಿನಿಮಾ ಹೊಂದಿರಲಿದೆ. ಭುವನ್​ ಪೊನ್ನಣ್ಣ ಅವರು ಈ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡಲಿದ್ದಾರೆ. ಈಗಾಗಲೇ ಸ್ಕ್ರಿಪ್ಟ್​ ಕೆಲಸ ಪೂರ್ಣಗೊಂಡಿದೆ. ಸಿನಿಮಾ ಸೆಟ್ಟೇರುವುದು ಇನ್ನೂ ಬಾಕಿ ಇದೆ.

ಮದುವೆಗೂ ಮೊದಲೇ ಇನ್ನೊಂದು ಗುಡ್​ ನ್ಯೂಸ್​ ನೀಡಿದ ಹರ್ಷಿಕಾ ಪೂಣಚ್ಚ-ಭುವನ್​ ಪೊನ್ನಣ್ಣ
ಹರ್ಷಿಕಾ ಪೂಣ್ಣಚ್ಚ, ಭುವನ್​ ಪೊನ್ನಣ್ಣ
Follow us
ಮದನ್​ ಕುಮಾರ್​
|

Updated on: Aug 17, 2023 | 6:37 PM

ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್​ ಪೊನ್ನಣ್ಣ (Bhuvan Ponnanna) ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಬಹಳ ಕಾಲದಿಂದ ತಮ್ಮ ಪ್ರೀತಿಯನ್ನು ಗುಟ್ಟಾಗಿ ಇಟ್ಟಿದ್ದ ಅವರು ಈಗ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಆಗಸ್ಟ್​ 23 ಮತ್ತು 24ರಂದು ಕೊಡಗಿನ ಅಮ್ಮತ್ತಿ ಕೊಡವ ಸಮಾಜದಲ್ಲಿ ಅವರಿಬ್ಬರು ಸಪ್ತಪದಿ ತುಳಿಯಲಿದ್ದಾರೆ. ವಿಶೇಷ ಏನೆಂದರೆ ಮದುವೆಗೂ (Harshika Poonacha Marriage) ಮುನ್ನ ಅವರು ಇನ್ನೊಂದು ಗುಡ್​ ನ್ಯೂಸ್​ ನೀಡಿದ್ದಾರೆ. ಅದೇನೆಂದರೆ, ಹರ್ಷಿಕಾ ಪೂಣಚ್ಚ ಮತ್ತು ಭುವನ್​ ಪೊನ್ನಣ್ಣ ಅವರು ಹೊಸ ಪ್ರೊಡಕ್ಷನ್​ ಹೌಸ್​ ಶುರು ಮಾಡಿದ್ದಾರೆ. ‘ಭುವನಂ ಎಂಟರ್​ಟೇನ್ಮೆಂಟ್​’ ಎಂಬುದು ಆ ಸಂಸ್ಥೆಯ ಹೆಸರು. ಈ ಬ್ಯಾನರ್​ ಮೂಲಕ ‘ಭುವನಂ ಶ್ರೇಷ್ಠಮ್​ ಗಚ್ಚಾಮಿ’ ಸಿನಿಮಾ ಲಾಂಚ್​ ಆಗಿದೆ. ಚಿತ್ರದ ಫಸ್ಟ್​ ಲುಕ್​ ಕೂಡ ಅನಾವರಣ ಮಾಡಲಾಗಿದೆ. ಈ ಸಿನಿಮಾ ಮೂಲಕ ಹರ್ಷಿಕಾ ಪೂಣಚ್ಚ (Harshika Poonacha) ಅವರ ನಿರ್ಮಾಪಕಿ ಆಗಿ ಬಡ್ತಿ ಪಡೆಯುತ್ತಿದ್ದಾರೆ.

‘ಭುವನಂ ಶ್ರೇಷ್ಠಮ್​ ಗಚ್ಚಾಮಿ’ ಸಿನಿಮಾದ ಪೋಸ್ಟರ್​ ಲಾಂಚ್​ ಮಾಡುವುದರ ಜೊತೆಗೆ ಒಂದಷ್ಟು ಮಾಹಿತಿಯನ್ನೂ ಹಂಚಿಕೊಳ್ಳಲಾಗಿದೆ. ಬಾಕ್ಸಿಂಗ್​ ಕುರಿತಾದ ಕತೆಯನ್ನು ಸಿನಿಮಾ ಹೊಂದಿರಲಿದೆ. ಭುವನ್​ ಪೊನ್ನಣ್ಣ ಅವರು ಈ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡಲಿದ್ದಾರೆ. ಈಗಾಗಲೇ ಸ್ಕ್ರಿಪ್ಟ್​ ಕೆಲಸ ಪೂರ್ಣಗೊಂಡಿದೆ. ಸಿನಿಮಾ ಸೆಟ್ಟೇರುವುದು ಇನ್ನೂ ಬಾಕಿ ಇದೆ. ಇಬ್ಬರು ನಾಯಕಿಯರು ಈ ಸಿನಿಮಾದಲ್ಲಿ ಇರಲಿದ್ದಾರೆ. ಕಥೆ, ಚಿತ್ರಕಥೆ ಮತ್ತು ನಿರ್ದೇಶನದ ಜವಾಬ್ದಾರಿಯನ್ನೂ ಭುವನ್​ ಪೊನ್ನಣ್ಣ ಅವರು ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ: ಸಿನಿಮಾ ಹಾಗೂ ರಾಜಕೀಯ ಗಣ್ಯರಿಗೆ ಮದುವೆ ಆಮಂತ್ರಣ ನೀಡಿದ ಭುವನ್-ಹರ್ಷಿಕಾ

ಬಾಕ್ಸರ್​ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಲುವಾಗಿ ಭುವನ್​ ಪೊನ್ನಣ್ಣ ಅವರು ಸಾಕಷ್ಟು ತರಬೇತಿ ಪಡೆದುಕೊಂಡಿದ್ದಾರೆ. ಈ ಪಾತ್ರಕ್ಕೆ ಹಲವು ಶೇಡ್​ ಇರಲಿದೆ ಎಂದು ಅವರು ಹೇಳಿದ್ದಾರೆ. ಒಂದಷ್ಟು ವರ್ಷಗಳ ಹಿಂದೆ ಹೊಳೆದ ಕಥೆಯ ಎಳೆಯನ್ನು ಇಟ್ಟುಕೊಂಡು ಅವರು ಈ ಸಿನಿಮಾವನ್ನು ಕಟ್ಟಿಕೊಡುತ್ತಿದ್ದಾರೆ. ಸಿನಿಮಾಗಳ ಸಂಖ್ಯೆಗಿಂತಲೂ ಗುಣಮಟ್ಟ ಮುಖ್ಯ ಎಂಬುದು ಅವರ ನಂಬಿಕೆ. ಹಾಗಾಗಿ ಗಡಿಬಿಡಿಯಲ್ಲಿ ಬೇರೆ ಯಾವುದೇ ಸಿನಿಮಾ ಒಪ್ಪಿಕೊಳ್ಳದೇ ಕಳೆದ ಎರಡು ವರ್ಷಗಳಿಂದ ಈ ಸಿನಿಮಾದ ಸ್ಕ್ರಿಪ್ಟ್​ ಮೇಲೆ ಅವರು ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮದುವೆ ವಿಚಾರ ಹಂಚಿಕೊಂಡ ಹರ್ಷಿಕಾ ಪೂಣಚ್ಚ-ಭುವನ್ ಪೊನ್ನಣ್ಣ: ಸುದ್ದಿಗೋಷ್ಠಿಯ ಲೈವ್ ಇಲ್ಲಿ ವೀಕ್ಷಿಸಿ

ಇನ್ನು, ಹರ್ಷಿಕಾ ಪೂಣಚ್ಚ ಮತ್ತು ಭುವನ್​ ಪೊನ್ನಣ್ಣ ಅವರ ಲವ್​ಸ್ಟೋರಿ ವಿಚಾರಕ್ಕೆ ಬರುವುದಾದರೆ, ಅವರಿಬ್ಬರದ್ದು ಹಲವು ವರ್ಷಗಳ ಪ್ರೇಮ. 2012ರಿಂದಲೂ ಅವರಿಬ್ಬರು ಪ್ರೀತಿಸುತ್ತಿದ್ದಾರೆ. ಇಬ್ಬರ ಪ್ರೇಮಕ್ಕೆ ಮನೆಯವರಿಂದ ಒಪ್ಪಿಗೆ ಸಿಕ್ಕು ಬಹಳ ಸಮಯ ಆಗಿದೆ. ಆದರೆ ವೈಯಕ್ತಿಕ ವಿಚಾರ ಬಹಿರಂಗ ಆಗುವುದು ಬೇಡ ಎಂಬ ಕಾರಣಕ್ಕೆ ಅವರಿಬ್ಬರು ಪ್ರೀತಿಯ ವಿಚಾರವನ್ನು ಸಾರ್ವಜನಿಕವಾಗಿ ಹೇಳಿಕೊಂಡಿರಲಿಲ್ಲ. ಈಗ ಅಂತೂ-ಇಂತೂ ಈ ಪ್ರೇಮಪಕ್ಷಿಗಳು ದಾಂಪತ್ಯ ಜೀವನಕ್ಕೆ ಕಾಲಿಡುವ ಸಮಯ ಬಂದಿದೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್