AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

​Harshika Poonacha Wedding: ಆಗಸ್ಟ್​ 24ರಂದು ಹರ್ಷಿಕಾ ಪೂಣಚ್ಚ-ಭುವನ್​ ಪೊನ್ನಣ್ಣ ಮದುವೆ; ಹಸೆಮಣೆ ಏರಲು ಸಜ್ಜಾದ ಚಂದನವನದ ಜೋಡಿ

Bhuvan Ponnanna Marriage: ಹಲವು ವರ್ಷಗಳಿಂದ ಹರ್ಷಿಕಾ ಪೂಣಚ್ಚ ಮತ್ತು ಭುವನ್​ ಪೊನ್ನಣ್ಣ ಅವರು ಆಪ್ತವಾಗಿದ್ದರು. ಈಗ ಅವರಿಬ್ಬರ ಜೀವನದಲ್ಲಿ ಹೊಸ ಅಧ್ಯಾಯ ಆರಂಭ ಆಗುತ್ತಿದೆ.

​Harshika Poonacha Wedding: ಆಗಸ್ಟ್​ 24ರಂದು ಹರ್ಷಿಕಾ ಪೂಣಚ್ಚ-ಭುವನ್​ ಪೊನ್ನಣ್ಣ ಮದುವೆ; ಹಸೆಮಣೆ ಏರಲು ಸಜ್ಜಾದ ಚಂದನವನದ ಜೋಡಿ
ಭುವನ್​ ಪೊನ್ನಣ್ಣ, ಹರ್ಷಿಕಾ ಪೂಣಚ್ಚ
ಮದನ್​ ಕುಮಾರ್​
|

Updated on:Jun 30, 2023 | 3:09 PM

Share

ಸ್ಯಾಂಡಲ್​ವುಡ್​ನ ಖ್ಯಾತ ಕಲಾವಿದರಾದ ಹರ್ಷಿಕಾ ಪೂಣಚ್ಚ (​Harshika Poonacha) ಮತ್ತು ಭುವನ್​ ಪೊನ್ನಣ್ಣ ಅವರು ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಆಗಸ್ಟ್​ 24ರಂದು ಇವರಿಬ್ಬರು ಹಸೆ ಮಣೆ ಏರಿಲಿದ್ದಾರೆ. ವಿರಾಜಪೇಟೆಯ ಅಮ್ಮತ್ತಿಯಲ್ಲಿ ಈ ಸ್ಟಾರ್​ ಜೋಡಿಯ ಮದುವೆ (​Bhuvan Ponnanna Marriage) ನಡೆಯಲಿದೆ. ಇಬ್ಬರ ವಿವಾಹದ ಆಮಂತ್ರಣ ಪತ್ರಿಕೆ ಲಭ್ಯವಾಗಿದೆ. ಕೊಡವ ಭಾಷೆಯಲ್ಲಿ ಮಂಗಳ ಪತ್ರ ಮುದ್ರಿಸಲಾಗಿದೆ. ಹಲವು ವರ್ಷಗಳಿಂದ ಹರ್ಷಿಕಾ ಪೂಣಚ್ಚ ಮತ್ತು ಭುವನ್​ ಪೊನ್ನಣ್ಣ (​Bhuvan Ponnanna) ಅವರು ಆಪ್ತವಾಗಿದ್ದರು. ಈಗ ಅವರಿಬ್ಬರ ಜೀವನದಲ್ಲಿ ಹೊಸ ಅಧ್ಯಾಯ ಆರಂಭ ಆಗುತ್ತಿದೆ. ದಾಂಪತ್ಯ ಜೀವನಕ್ಕೆ ಪ್ರವೇಶ ಪಡೆಯಲು ಸಜ್ಜಾಗಿರುವ ಹರ್ಷಿಕಾ ಮತ್ತು ಭುವನ್​ಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ಕೊಡವ ಸಂಪ್ರದಾಯದ ಪ್ರಕಾರ ಹರ್ಷಿಕಾ ಪೂಣಚ್ಚ ಮತ್ತು ಭುವನ್​ ಪೊನ್ನಣ್ಣ ಮದುವೆ ಕಾರ್ಯಗಳು ನಡೆಯಲಿವೆ. ಈ ಸಮಾರಂಭದಲ್ಲಿ ಚಿತ್ರರಂಗದ ಗಣ್ಯರು, ಕುಟುಂಬಸ್ಥರು ಮತ್ತು ಆಪ್ತರು ಪಾಲ್ಗೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಲಗ್ನಪತ್ರಿಕೆ ಶಾಸ್ತ್ರ ಸರಳವಾಗಿ ನಡೆದಿದೆ. ಮದುವೆ ಬಗ್ಗೆ ಈ ಜೋಡಿ ಯಾವುದೇ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ವಿವಾಹ ಆಮಂತ್ರಣ ಪತ್ರಿಕೆಯ ಫೋಟೋ ವೈರಲ್​ ಆದ ಬಳಿಕ ಸುದ್ದಿ ಜಗಜ್ಜಾಹೀರಾಗಿದೆ.

Harshika Poonacha Marriage invitation card

ಹರ್ಷಿಕಾ ಪೂಣಚ್ಚ ಮತ್ತು ಭುವನ್​ ಪೊನ್ನಣ್ಣ ವಿವಾಹ ಆಮಂತ್ರಣ ಪತ್ರಿಕೆ

ಹರ್ಷಿಕಾ ಪೂಣ್ಣಚ್ಚ ಮತ್ತು ಭುವನ್​ ಪೊನ್ನಣ್ಣ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇಬ್ಬರೂ ಜೊತೆಯಾಗಿ ಸಮಾಜಮುಖಿ ಕಾರ್ಯಗಳನ್ನೂ ಮಾಡಿದ್ದಾರೆ. ಕೊವಿಡ್​ ಲಾಕ್​ಡೌನ್​ ಸಂದರ್ಭದಲ್ಲಿ ಅನೇಕರಿಗೆ ಅವರು ನೆರವು ನೀಡಿದ್ದರು. ಇಬ್ಬರ ನಡುವೆ ಪ್ರೀತಿ ಇದೆ ಎಂದು ಅನೇಕ ಬಾರಿ ಗಾಸಿಪ್​ ಹಬ್ಬಿತ್ತು. ಆದರೆ ಆ ಕುರಿತು ಅವರು ಬಹಿರಂಗವಾಗಿ ಏನನ್ನೂ ಹೇಳಿಕೊಂಡಿರಲಿಲ್ಲ. ಈಗ ಅವರಿಬ್ಬರು ವೈವಾಹಿಕ ಜೀವನ ಆರಂಭಿಸುವ ಸಿದ್ಧತೆಯಲಿದ್ದಾರೆ. ಎರಡೂ ಕುಟುಂಬಗಳು ಮದುವೆಗೆ ತಯಾರಿ ಮಾಡಿಕೊಳ್ಳುತ್ತಿವೆ.

ಇದನ್ನೂ ಓದಿ: ಮಳವಳ್ಳಿ ಬಾಲಕಿಯ ಮನೆಗೆ ನಟಿ ಹರ್ಷಿಕಾ ಪೂಣಚ್ಚ ಭೇಟಿ, ಒಟ್ಟಿಗೆ ಹೋರಾಡೋಣ ಅಂತ ಕುಟುಂಬಕ್ಕೆ ಭರವಸೆ!

2008ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಹರ್ಷಿಕಾ ಪೂಣ್ಣಚ್ಚ ಅವರು ಈವರೆಗೂ ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ, ತಮಿಳು, ಭೋಜ್​ಪುರಿ, ತೆಲುಗು, ಕೊಡವ ಮತ್ತು ಕೊಂಕಣಿ ಭಾಷೆಯ ಸಿನಿಮಾಗಳಲ್ಲಿ ನಟಿಸಿರುವುದು ಅವರ ಹೆಚ್ಚುಗಾರಿಕೆ. ಭೋಜ್​ಪುರಿ ಚಿತ್ರರಂಗದಲ್ಲಿ ಅವರಿಗೆ ಬೇಡಿಕೆ ಇದೆ. ಕನ್ನಡದ ಹಲವು ಖ್ಯಾತ ನಿರ್ದೇಶಕರ ಸಿನಿಮಾಗಳಲ್ಲಿ ಹರ್ಷಿಕಾ ನಟಿಸಿದ್ದಾರೆ. ಸ್ಟಾರ್​ ಕಲಾವಿದರ ಜೊತೆ ಅಭಿನಯಿಸಿ ಅವರು ಜನಪ್ರಿಯತೆ ಪಡೆದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:25 pm, Fri, 30 June 23

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ