ತಾಯಿಯಾಗುತ್ತಿರುವ ಹರ್ಷಿಕಾ, ಭಿನ್ನ ಫೋಟೊಶೂಟ್ ಮೂಲಕ ಗಮನ ಸೆಳೆದ ಜೋಡಿ

ಹರ್ಷಿಕಾ ಪೂಣಚ್ಚ ಮತ್ತು ಭುವನ್ ಅವರು ಕಳೆದ ವರ್ಷ ಕೊಡವು ಶೈಲಿಯಲ್ಲಿ ವಿವಾಹವಾಗಿದ್ದರು. ಇದೀಗ ಈ ಜೋಡಿ ಪೋಷಕರಾಗುತ್ತಿದ್ದಾರೆ. ಹರ್ಷಿಕಾ ತಾಯಿಯಾಗಲಿದ್ದು, ಅಕ್ಟೋಬರ್​ಗೆ ಇಬ್ಬರ ಬಾಳಿಗೆ ಹೊಸ ಜೀವನದ ಆಗಮನ ಆಗಲಿದೆ.

ತಾಯಿಯಾಗುತ್ತಿರುವ ಹರ್ಷಿಕಾ, ಭಿನ್ನ ಫೋಟೊಶೂಟ್ ಮೂಲಕ ಗಮನ ಸೆಳೆದ ಜೋಡಿ
Follow us
ಮಂಜುನಾಥ ಸಿ.
|

Updated on:Jul 02, 2024 | 10:36 AM

ಕಳೆದ ವರ್ಷ ಆಗಸ್ಟ್​ನಲ್ಲಿ ವಿವಾಹವಾಗಿದ್ದ ಜೋಡಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಈಗ ಪೋಷಕರಾಗುತ್ತಿದ್ದಾರೆ. ತಾಯಿಯಾಗುತ್ತಿರುವ ಸಂಭ್ರಮವನ್ನು ಹರ್ಷಿಕಾ ಪೂಣಚ್ಚ ಹಂಚಿಕೊಂಡಿದ್ದಾರೆ. ಅಕ್ಟೋಬರ್​ನಲ್ಲಿ ಭುವನ್ ಹಾಗೂ ಹರ್ಷಿಕಾ ಮನೆಗೆ ಹೊಸ ಅಥಿತಿ ಆಗಮನವಾಗಲಿದೆ. ತಾಯಿಯಾಗುತ್ತಿರುವ ಸಂಭ್ರಮವನ್ನು ನಟಿ ಹರ್ಷಿಕಾ ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ. ಹರ್ಷಿಕಾ, ಭುವನ್ ಹಾಗೂ ಅವರ ಕುಟುಂಬದವರು ಕೊಡವ ಶೈಲಿಯ ಉಡುಗೆ ತೊಟ್ಟು ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

ಹರ್ಷಿಕಾ‌ ಮತ್ತು ಭುವನ್ ಪೊನ್ನಣ್ಣ ಅನೇಕ ವರ್ಷಗಳ ಸ್ನೇಹಿತರಾಗಿದ್ದರು. ಮನೆಯವರ ಒಪ್ಪಿಗೆ ಮೇರೆಗೆ ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಕೊಡವ ಸಂಪ್ರದಾಯದಂತೆ ವಿರಾಜಪೇಟೆಯ ಅಮ್ಮತ್ತಿಯಲ್ಲಿ ಹರ್ಷಿಕಾ ಮತ್ತು ಭುವನ್ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಈ ಇಬ್ಬರ ವಿವಾಹಕ್ಕೆ ಸ್ಯಾಂಡಲ್​ವುಡ್​ನ ಅನೇಕ ಸೆಲೆಬ್ರಿಟಿಗಳು ಭಾಗಿಯಾಗಿದ್ದರು.

ತಾವು ಪೋಷಕರಾಗುತ್ತಿರೋ ವಿಚಾರ ಭುವನ್ ಮತ್ತು ಹರ್ಷಿಕಾ ತಮ್ಮ ಸಾಮಾಜಿಕಾ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ಸದ್ಯ ಹರ್ಷಿಕಾ ಐದು ತಿಂಗಳ ಗರ್ಭಿಣಿ ಆಗಿದ್ದು, ಕುಟುಂಬದೊಟ್ಟಿಗೆ ಸೇರಿ ಭಿನ್ನ ರೀತಿಯ ಫೋಟೊಶೂಟ್ ಮಾಡಿಸಿ ಖುಷಿಪಟ್ಟಿದ್ದಾರೆ. ಪ್ರೆಗ್ನೆನ್ಸಿ ಶೂಟ್ ಎಂಬುದು ಇತ್ತೀಚೆಗೆ ಬಹಳ ಟ್ರೆಂಡ್​ನಲ್ಲಿದೆ. ಆದರೆ ನಟಿಯರು ಪ್ರೆಗ್ನೆನ್ಸಿ ಶೂಟ್​ನಲ್ಲೂ ಗ್ಲಾಮರ್ ಆಂಗಲ್​ ತೋರಿಸುವುದು ಸಾಮಾನ್ಯವಾಗಿದೆ. ಆದರೆ ಹರ್ಷಿಕಾ ಪೂಣಚ್ಚ ಕುಟುಂಬದೊಟ್ಟಿಗೆ ಸಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಭಿನ್ನವಾಗಿ ಫೋಟೊಶೂಟ್ ಮಾಡಿಸಿದ್ದಾರೆ.

ಇದನ್ನೂ ಓದಿ:‘ಇದು ದರೋಡೆ ಪ್ಲ್ಯಾನ್​’: ಬೆಂಗಳೂರಿನಲ್ಲಿ ನಡೆದ ಹಲ್ಲೆ ಬಗ್ಗೆ ವಿವರ ನೀಡಿದ ಹರ್ಷಿಕಾ

ತಮ್ಮ ಚೊಚ್ಚಲ ಮಗುವಿನ ಆಗಮನದ ವಿಚಾರ ತಿಳಿಸಲು ಕೊಡವ ಸಾಂಪ್ರದಾಯ, ಉಡುಪು, ಕೊಡಗಿನ ‘ಐನ್ ಮನೆ’ (ದೊಡ್ಡಮನೆ), ಕೋವಿ, ಉಪಕರಣಗಳು, ಜೀವನಶೈಲಿ ಎಲ್ಲವನ್ನು ಬಿಂಬಿಸುವ ಶೈಲಿಯಲ್ಲಿ ಫೋಟೋ ಶೂಟ್ ಮಾಡಿಸಿದೆ ಹರ್ಷಿಕಾ ಮತ್ತು ಭುವನ್ ಜೋಡಿ. ವಿಶೇಷವೆಂದರೆ ಈ ಫೋಟೊಶೂಟ್​ನಲ್ಲಿ ತಮ್ಮ ಹಿರಿಯರನ್ನೂ ಸೇರಿಸಿಕೊಂಡಿದ್ದಾರೆ. ಹರ್ಷಿಕಾ ಹಾಗೂ ಭುವನ್​ರ ಪೋಷಕರು ಸಹ ಫೋಟೊಶೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.

‘ಇಂದಿನವರೆಗೂ ನಮ್ಮಿಬ್ಬರಿಗೆ ಸದಾ ಆಶೀರ್ವಾದಿಸುತ್ತಾ ಬಂದಿದ್ದೀರಿ, ಇನ್ನು ಮುಂದೆ ನಿಮ್ಮ ಪ್ರೀತಿ, ಆಶೀರ್ವಾದ ನಮ್ಮ ಈ ಇನ್ನೊಂದು ಪುಟ್ಟ ಜೀವದ ಮೇಲು ಇರಲಿ. ಅಕ್ಟೋಬರ್ ಗೆ ಕಾತುರದಿಂದ ಕಾಯುತ್ತಿದ್ದೇವೆ” ಎಂದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹರ್ಷಿಕಾ ಬರೆದುಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಇಲ್ಲಿ ಕ್ಲಿಕ್ ಮಾಡಿ

Published On - 10:04 am, Tue, 2 July 24

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ