‘ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ’; ತಾತನಾದ ಖುಷಿ ಹಂಚಿಕೊಂಡ ಕುಮಾರಸ್ವಾಮಿ

ಬಿಡದಿ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರೇವತಿ ಪ್ರೆಗ್ನೆಂಟ್​ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು.

‘ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ’; ತಾತನಾದ ಖುಷಿ ಹಂಚಿಕೊಂಡ ಕುಮಾರಸ್ವಾಮಿ
ಕುಮಾರಸ್ವಾಮಿ-ನಿಖಿಲ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Sep 24, 2021 | 3:37 PM

ನಿಖಿಲ್​ ಕುಮಾರಸ್ವಾಮಿ ಹಾಗೂ ರೇವತಿ ಗಂಡು ಮಗುವನ್ನು ಸ್ವಾಗತಿಸಿದ್ದಾರೆ. ಈ ಮೂಲಕ ಮಾಜಿ ಮುಖ್ಯಮಂತ್ರಿ ಎಚ್​​.ಡಿ. ಕುಮಾರಸ್ವಾಮಿ ತಾತ ಆಗಿದ್ದಾರೆ. ಈ ಖುಷಿಯನ್ನು ಎಚ್​ಡಿಕೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

‘ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ’ ಎಂದು ಎಚ್​ಡಿಕೆ ಬರೆದುಕೊಂಡಿದ್ದಾರೆ.

2020ರ ಏಪ್ರಿಲ್​ನಲ್ಲಿ ರೇವತಿ ಜೊತೆ ನಿಖಿಲ್​ ಕುಮಾರಸ್ವಾಮಿ ಸಪ್ತಪದಿ ತುಳಿದಿದ್ದರು. ಲಾಕ್​ಡೌನ್​ ನಿಯಮಗಳ ಅನುಸಾರ ಈ ಹೈಪ್ರೊಫೈಲ್​ ಕುಟುಂಬದಲ್ಲಿ ವಿವಾಹ ಸಮಾರಂಭ ನೆರವೇರಿತ್ತು. ಬಿಡದಿ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರೇವತಿ ಪ್ರೆಗ್ನೆಂಟ್​ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಈ ವರ್ಷ ಜೂನ್​ನಲ್ಲಿ ಆ ಬಗ್ಗೆ ಸ್ವತಃ ನಿಖಿಲ್​ ಪ್ರತಿಕ್ರಿಯೆ ನೀಡಿದ್ದರು. ‘ಕೇಳಿಬರುತ್ತಿರುವ ಸುದ್ದಿ ನಿಜ. ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರಲಿದ್ದಾರೆ’ ಎಂದು ನಿಖಿಲ್​ ಹೇಳಿದ್ದರು. ಈಗ ಅವರಿಗೆ ಗಂಡು ಮಗು ಜನನವಾಗಿದೆ.

ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಬ್ಯುಸಿ ಆಗಿರುವ ನಿಖಿಲ್​ ಅವರು ಕುಟುಂಬದ ಕಡೆಗೂ ಹೆಚ್ಚು ಗಮನ ನೀಡುತ್ತಾರೆ. ಪತ್ನಿ ಜೊತೆ ಇರುವ ಫೋಟೋಗಳನ್ನು ಅವರು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಇತ್ತೀಚೆಗೆ ಅವರ ಮನೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಆ ಸಂದರ್ಭದ ಫೋಟೋವನ್ನು ಹಂಚಿಕೊಂಡ ನಿಖಿಲ್​, ತಮ್ಮ ಅಭಿಮಾನಿಗಳಿಗೆ ವಿಶ್​ ಮಾಡಿದ್ದರು.

ನಿಖಿಲ್​ ಮತ್ತು ರೇವತಿ ದಂಪತಿಗೆ ಮೊದಲ ಮಗು ಜನಿಸಿದ ನಂತರ ಎಲ್ಲರಿಂದ ಶುಭ ಹಾರೈಕೆಗಳು ಕೇಳಿಬರುತ್ತಿವೆ. ಸಿನಿಮಾ ವಿಚಾರಕ್ಕೆ ಬರುವುದಾದರೆ ನಿಖಿಲ್​ ಸದ್ಯ ‘ರೈಡರ್​’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: ನಿಖಿಲ್​-ರೇವತಿಗೆ ಗಂಡು ಮಗು; ದೇವೇಗೌಡರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ

ಮುದ್ದಾದ ಮಗುವಿನ ಜತೆ ಪೋಸ್​​ ಕೊಟ್ಟ ನಿಖಿಲ್​ ಕುಮಾರಸ್ವಾಮಿ; ಇಲ್ಲಿವೆ ಫೋಟೋಗಳು

Published On - 2:26 pm, Fri, 24 September 21

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್