ಮೂರು ದಿನಕ್ಕೆ ಬಂಗಾರದ ಬೆಳೆ ತೆಗೆದ ‘ಹೆಡ್​ ಬುಷ್​’ ಸಿನಿಮಾ; ಇಲ್ಲಿದೆ ಕಲೆಕ್ಷನ್ ವಿವರ

Head Bush Movie Box office Collection: ‘ಹೆಡ್​ ಬುಷ್​’ ಸಿನಿಮಾದಲ್ಲಿ ಬೆಂಗಳೂರು ಭೂಗತ ಜಗತ್ತನ್ನು ಆಳಿದ ಎಂ.ಪಿ. ಜಯರಾಜ್ ಪಾತ್ರದಲ್ಲಿ ಡಾಲಿ ಕಾಣಿಸಿಕೊಂಡಿದ್ದಾರೆ. ಈ ಪಾತ್ರವನ್ನು ಅವರು ಜೀವಿಸಿದ್ದಾರೆ. ಈ ಸಿನಿಮಾ ಎಲ್ಲರಿಗೂ ಇಷ್ಟವಾಗಿದೆ.

ಮೂರು ದಿನಕ್ಕೆ ಬಂಗಾರದ ಬೆಳೆ ತೆಗೆದ ‘ಹೆಡ್​ ಬುಷ್​’ ಸಿನಿಮಾ; ಇಲ್ಲಿದೆ ಕಲೆಕ್ಷನ್ ವಿವರ
ಧನಂಜಯ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Oct 24, 2022 | 7:36 PM

ಧನಂಜಯ್ (Dhananjay) ಅವರು ಒಂದೇ ಮಾದರಿಯ ಚಿತ್ರಗಳಿಗೆ ಅಂಟಿಕೊಂಡಿರುವವರು ಅಲ್ಲವೇ ಅಲ್ಲ. ‘ಟಗರು’ ಚಿತ್ರದಲ್ಲಿ ವಿಲನ್ ಪಾತ್ರದ ಮೂಲಕ ಖ್ಯಾತಿ ಪಡೆದ ಅವರು ನಂತರ ಬೇರೆ ಬೇರೆ ರೀತಿಯ ಕ್ಯಾರೆಕ್ಟರ್​​ಗಳ ಮೂಲಕ ಗಮನ ಸೆಳೆದರು. ‘ರತ್ನನ್​ ಪ್ರಪಂಚ’ ಚಿತ್ರದಲ್ಲಿ ಭಾವನಾತ್ಮಕ ಕಥೆಯ ಮೂಲಕ ಗಮನ ಸೆಳೆದರು. ಇತ್ತೀಚೆಗೆ ರಿಲೀಸ್ ಆದ ‘ಬಡವ ರಾಸ್ಕಲ್’ ಸಿನಿಮಾ ಮೂಲಕ ಡಾಲಿ ನಿರ್ಮಾಪಕನಾಗಿ ಯಶಸ್ಸು ಕಂಡರು. ಈಗ ಧನಂಜಯ್ ಅವರ ‘ಹೆಡ್ ಬುಷ್’ ಸಿನಿಮಾ (Head Bush Movie) ರಿಲೀಸ್ ಆಗಿ ಯಶಸ್ಸು ಕಂಡಿದೆ. ಈ ಚಿತ್ರದಿಂದ ಧನಂಜಯ್ ಅವರು ಮತ್ತೊಮ್ಮೆ ಗೆದ್ದಿದ್ದಾರೆ.

‘ಹೆಡ್​ ಬುಷ್​’ ಸಿನಿಮಾದಲ್ಲಿ ಬೆಂಗಳೂರು ಭೂಗತ ಜಗತ್ತನ್ನು ಆಳಿದ ಎಂ.ಪಿ. ಜಯರಾಜ್ ಪಾತ್ರದಲ್ಲಿ ಡಾಲಿ ಕಾಣಿಸಿಕೊಂಡಿದ್ದಾರೆ. ಈ ಪಾತ್ರವನ್ನು ಅವರು ಜೀವಿಸಿದ್ದಾರೆ. ಈ ಸಿನಿಮಾ ಎಲ್ಲರಿಗೂ ಇಷ್ಟವಾಗಿದೆ. ಈ ಚಿತ್ರದ ಬಗ್ಗೆ ಪಾಸಿಟಿವ್ ಟಾಕ್ ಇದೆ. ಈ ಕಾರಣಕ್ಕೆ ‘ಹೆಡ್​ ಬುಷ್’ ಚಿತ್ರವನ್ನು ಜನರು ಕಣ್ತುಂಬಿಕೊಳ್ಳುತ್ತಿದ್ದಾರೆ. ಈ ಚಿತ್ರ ಮೂರು ದಿನಕ್ಕೆ 9 ಕೋಟಿ ರೂಪಾಯಿ ಬಾಚಿಕೊಂಡಿದೆ ಎಂದು ವರದಿ ಆಗಿದೆ.

‘ಹೆಡ್ ಬುಷ್’ ಸಿನಿಮಾ ಶುಕ್ರವಾರ (ಅಕ್ಟೋಬರ್ 21) ರಿಲೀಸ್ ಆಯಿತು. ಒಂದು ದಿನ ಮೊದಲು ಅಂದರೆ ಅಕ್ಟೋಬರ್ 20ರಂದು ಹಲವು ಕಡೆಗಳಲ್ಲಿ ಪ್ರೀಮಿಯರ್ ಶೋ ಆಯೋಜನೆ ಮಾಡಲಾಯಿತು. ಬಹುತೇಕ ಶೋಗಳು ಹೌಸ್​ಫುಲ್ ಪ್ರದರ್ಶನ ಕಂಡವು. ಶುಕ್ರವಾರ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ. ಮೊದಲ ದಿನ ನಾಲ್ಕು ಕೋಟಿ ಗಳಿಕೆ ಮಾಡಿದ ಈ ಚಿತ್ರ ಮೂರು ದಿನಗಳಲ್ಲಿ 9 ಕೋಟಿ ರೂ. ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ. ಡಾಲಿ ಹೀರೋ ಆಗಿ ಕಾಣಿಸಿಕೊಂಡ ಸಿನಿಮಾಗಳ ಪೈಕಿ ಅತಿ ಹೆಚ್ಚು ಹಣ ಬಾಚಿದ ಚಿತ್ರ ಎಂಬ ಹೆಗ್ಗಳಿಕೆಗೆ ‘ಹೆಡ್​ ಬುಷ್​’ ಪಾತ್ರವಾಗಿದೆ.

ಇದನ್ನೂ ಓದಿ
Image
Head Bush: ‘ಮದುವೆಯಿಂದ ನನ್ನ ಜೀವನದಲ್ಲಿ ಏನೂ ಬದಲಾಗಿಲ್ಲ’; ಶ್ರುತಿ ಹರಿಹರನ್​
Image
Head Bush: ಸೈಕಲ್​ ಏರಿ ಅಪ್ಪು ಸಮಾಧಿಗೆ ಬಂದ ಡಾಲಿ ಧನಂಜಯ್; ‘ಹೆಡ್​ ಬುಷ್​’ ಚಿತ್ರಕ್ಕೆ ಡಿಫರೆಂಟ್​ ಪ್ರಚಾರ
Image
Head Bush: ‘ಹೆಡ್​ ಬುಷ್​​’ ತಂಡಕ್ಕೆ ಎಂ.ಪಿ. ಜಯರಾಜ್​ ಮಗ-ಸೊಸೆ ವಿರೋಧದ ನಡುವೆ ಸಹೋದರಿಯ ಬೆಂಬಲ
Image
ಧನಂಜಯ ನಟನೆಯ ‘ಹೆಡ್​ ಬುಷ್​’ ಚಿತ್ರಕ್ಕೆ ಜಯರಾಜ್​ ಪುತ್ರ ಅಜಿತ್​ ತಕರಾರು ತೆಗೆದಿದ್ದು ಯಾಕೆ? ಇಲ್ಲಿದೆ ಕಾರಣ..

ಇದನ್ನೂ ಓದಿ:  ‘ಹೆಡ್​ ಬುಷ್’​ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ರಚಿತಾ ರಾಮ್​ ಬಿಂದಾಸ್​ ಡ್ಯಾನ್ಸ್​; ಇಲ್ಲಿದೆ ವಿಡಿಯೋ

ದೀಪಾವಳಿ ಹಬ್ಬ ಆರಂಭ ಆಗಿದೆ. ಈ ವಾರ ಸಾಲು ಸಾಲು ರಜೆಗಳಿವೆ. ಇದು ಚಿತ್ರಕ್ಕೆ ವರದಾನವಾಗಲಿದೆ. ಮುಂದಿನ ದಿನಗಳಲ್ಲಿ ಈ ಚಿತ್ರ ಮತ್ತಷ್ಟು ಗಳಿಕೆ ಮಾಡುವ ಸಾಧ್ಯತೆ ಇದೆ. ಈ ಚಿತ್ರದಿಂದ ಧನಂಜಯ್ ಅವರು ಮತ್ತೊಂದು ಯಶಸ್ಸು ಕಂಡಿದ್ದಾರೆ. ಜಯರಾಜ್ ಆಗಿ ಅವರನ್ನು ಎಲ್ಲರೂ ಕಣ್ತುಂಬಿಕೊಳ್ಳುತ್ತಿದ್ದಾರೆ. ಈ ಚಿತ್ರದ ಮೊದಲ ಪಾರ್ಟ್​ ಈಗ ತೆರೆಗೆ ಬಂದಿದೆ. ಇದರ ಮುಂದಿನ ಭಾಗ ಇನ್ನಷ್ಟೇ ಸಿದ್ಧಗೊಳ್ಳಬೇಕಿದೆ.

Published On - 7:35 pm, Mon, 24 October 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ