‘ರಾಮರಸ’ ಚಿತ್ರದಲ್ಲಿ ಮಿಂಚಲು ಬಂದ ‘ಅಧ್ಯಕ್ಷ’ ಸುಂದರಿ ಹೆಬಾ ಪಟೇಲ್

ಖ್ಯಾತ ನಟಿ ಹೆಬಾ ಪಟೇಲ್ ಅವರು ಕನ್ನಡ ಚಿತ್ರರಂಗಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ. ‘ರಾಮರಸ’ ಚಿತ್ರದಲ್ಲಿ ಅವರಿಗೆ ಒಂದು ಪ್ರಮುಖವಾದ ಪಾತ್ರವಿದೆ. ಬಿ.ಎಂ. ಗಿರಿರಾಜ್​ ನಿರ್ದೇಶನದ ಈ ಚಿತ್ರದಲ್ಲಿ ಕಾರ್ತಿಕ್​ ಮಹೇಶ್ ಹೀರೋ. ಈಗ ಹೆಬಾ ಅವರ ಫಸ್ಟ್​ ಬಿಡುಗಡೆ ಮಾಡಿ ನಿರೀಕ್ಷೆ ಹೆಚ್ಚಿಸಲಾಗಿದೆ. ಗುರು ದೇಶಪಾಂಡೆ ನಿರ್ಮಾಣದಲ್ಲಿ ಈ ಚಿತ್ರ ಸಿದ್ಧವಾಗುತ್ತಿದೆ.

‘ರಾಮರಸ’ ಚಿತ್ರದಲ್ಲಿ ಮಿಂಚಲು ಬಂದ ‘ಅಧ್ಯಕ್ಷ’ ಸುಂದರಿ ಹೆಬಾ ಪಟೇಲ್
Hebah Patel
Follow us
ಮದನ್​ ಕುಮಾರ್​
|

Updated on: Jan 06, 2025 | 10:15 PM

ಶರಣ್ ನಟನೆಯ ‘ಅಧ್ಯಕ್ಷ’ ಸಿನಿಮಾ ನೋಡಿದವರಿಗೆ ನಟಿ ಹೆಬಾ ಪಟೇಲ್ ಅವರ ಪರಿಚಯ ಇದ್ದೇ ಇರುತ್ತದೆ. ಅದು ಅವರ ಮೊದಲ ಸಿನಿಮಾ ಕೂಡ ಹೌದು. ಆ ಸಿನಿಮಾ ಮೂಲಕ ಅವರು ತಮ್ಮದೇ ಛಾಪು ಮೂಡಿಸಿದರು. ಬಳಿಕ ಅವರಿಗೆ ತಮಿಳು, ತೆಲುಗಿನಲ್ಲಿ ಸಿಕ್ಕಾಪಟ್ಟೆ ಅವಕಾಶಗಳು ಸಿಕ್ಕವು. ಬೇಡಿಕೆಯ ನಟಿಯಾಗಿ ಅವರು ಗುರುತಿಸಿಕೊಂಡರು. ಈಗ ಮತ್ತೆ ಅವರು ಕನ್ನಡ ಚಿತ್ರರಂಗಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ ಎಂಬುದು ವಿಶೇಷ. ‘ರಾಮರಸ’ ಸಿನಿಮಾದಲ್ಲಿ ಹೆಬಾ ಪಟೇಲ್ ಅವರಿಗೆ ವಿಶೇಷವಾದ ಪಾತ್ರ ಇದೆ.

ಗುರು ದೇಶಪಾಂಡೆ ಅವರು ನಿರ್ಮಾಣ ಮಾಡುತ್ತಿರುವ ‘ರಾಮರಸ’ ಸಿನಿಮಾ ಕೌತುಕ ಮೂಡಿಸಿದೆ. ಈ ಸಿನಿಮಾವನ್ನು ‘ಜಿ ಸಿನಿಮಾಸ್​’ ಹಾಗೂ ‘ಸೆವೆನ್ ಸ್ಟಾರ್​ ಸ್ಟುಡಿಯೋಸ್​’ ಮೂಲಕ ನಿರ್ಮಾಣ ಮಾಡಲಾಗುತ್ತಿದೆ. ರಾಷ್ಟ್ರ ಪ್ರಶಸ್ತಿ ಪಡೆದಿರುವ ನಿರ್ದೇಶಕ ಬಿ.ಎಂ. ಗಿರಿರಾಜ್ ಅವರು ‘ರಾಮರಸ’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈಗ ಚಿತ್ರತಂಡಕ್ಕೆ ಹೆಬಾ ಪಟೇಲ್​ ಸೇರ್ಪಡೆ ಆಗಿರುವ ಸುದ್ದಿಯನ್ನು ಹಂಚಿಕೊಳ್ಳಲಾಗಿದೆ.

ಬಿಗ್ ಬಾಸ್​ ವಿನ್ನರ್​ ಕಾರ್ತಿಕ್ ಮಹೇಶ್ ಅವರ ‘ರಾಮರಸ’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ಸಿನಿಮಾಗೆ ಈಗ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. ಹೆಬಾ ಪಟೇಲ್​ ನಿಭಾಯಿಸುವ ಪಾತ್ರವನ್ನು ಈ ಸಾಲುಗಳ ಮೂಲಕ ಚಿತ್ರತಂಡ ಬಣ್ಣಿಸಿದೆ.‘ಅವಳ‌ ಅಂದಕ್ಕೆ ಸೋತವರು, ಮಾತಿಗೆ ಮರುಳಾದವರು, ನಡಿಗೆಗೆ ನಡುಗಿದವರಾರೂ, ಭೂಮಿ‌ ಮೇಲೆ ಉಳಿದೇ ಇಲ್ಲ. ಗಂಡಸರ ಆಸೆಗೆ ಅವಳು ಒಂದು ಮಿಸ್ಟರಿ.. ಅವಳೇ ಭ್ರಮರಿ.’

ಇದನ್ನೂ ಓದಿ: ಹಾಟ್ ಆಗಿ ಪಡ್ಡೆಗಳ ಮನಗೆದ್ದ ಹೆಬಾ ಪಟೇಲ್

ಈ ಸಿನಿಮಾದಲ್ಲಿ ಹೆಬಾ ಪಟೇಲ್ ಅವರು ಲುಕ್ ಹೇಗಿರಲಿದೆ ಎಂಬುದನ್ನು ಕೂಡ ಚಿತ್ರತಂಡದವರು ಬಹಿರಂಗಪಡಿಸಿದ್ದಾರೆ. ತುಂಬ ಗ್ಲಾಮರಸ್​ ಆಗಿ ಅವರ ಕಾಣಿಸಿಕೊಂಡಿದ್ದಾರೆ. ಫಸ್ಟ್​ ಲುಕ್​ ಪೋಸ್ಟರ್​ ಮೂಲಕ ‘ರಾಮರಸ’ ಸಿನಿಮಾ ಮೇಲಿನ ಕೌತುಕ ಜಾಸ್ತಿ ಆಗಿದೆ. ನಿರ್ಮಾಣದ ಜೊತೆ ಈ ಚಿತ್ರಕ್ಕೆ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಒಂದು ವಿಶೇಷವಾದ ಕಥಾಹಂದರ ಈ ಸಿನಿಮಾದಲ್ಲಿ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್