AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshna-Sudeep: ‘ಹೆಬ್ಬುಲಿ’ ರೀ ರಿಲೀಸ್ ದರ್ಶನ್​ಗೆ ಟಾಂಗ್ ಕೊಟ್ಟ ಕಿಚ್ಚನ ಅಭಿಮಾನಿಗಳು

Darshan-Sudeep: ಕಿಚ್ಚ ಸುದೀಪ್ ನಟನೆಯ ‘ಹೆಬ್ಬುಲಿ’ ಸಿನಿಮಾ ಮರು ಬಿಡುಗಡೆ ಆಗಿದ್ದು, ಸಿನಿಮಾವನ್ನು ಸುದೀಪ್ ಅಭಿಮಾನಿಗಳು ಸ್ವಾಗತಿಸಿದ್ದಾರೆ. ಜೈಲಿನಲ್ಲಿರುವ ದರ್ಶನ್​ಗೆ ಟಾಂಗ್ ಸಹ ನೀಡಿದ್ದಾರೆ.

Darshna-Sudeep: ‘ಹೆಬ್ಬುಲಿ’ ರೀ ರಿಲೀಸ್ ದರ್ಶನ್​ಗೆ ಟಾಂಗ್ ಕೊಟ್ಟ ಕಿಚ್ಚನ ಅಭಿಮಾನಿಗಳು
ಹೆಬ್ಬುಲಿ
ಮಂಜುನಾಥ ಸಿ.
|

Updated on: Aug 02, 2024 | 12:58 PM

Share

ನಟ ದರ್ಶನ್ ತೂಗುದೀಪ, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ದರ್ಶನ್​ ಅಭಿಮಾನಿಗಳು ಅದನ್ನು ಹೆಮ್ಮೆಯಿಂದ ದರ್ಶನ್​ರ ಖೈದಿ ನಂಬರ್ ಅನ್ನು ಟ್ಯಾಟೂ ಹಾಕಿಸಿಕೊಳ್ಳುತ್ತಿದ್ದಾರೆ. ಬೈಕ್​ ಸ್ಟಿಕ್ಕರ್ ಹಾಕಿಸಿಕೊಳ್ಳುತ್ತಿದ್ದಾರೆ. ಆದರೆ ಇದೇ ವಿಷಯವನ್ನು ಇಟ್ಟುಕೊಂಡು ಇದೀಗ ಸುದೀಪ್ ಅಭಿಮಾನಿಗಳು ದರ್ಶನ್​ಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಸುದೀಪ್ ನಟಿಸಿರುವ ‘ಹೆಬ್ಬುಲಿ’ ಸಿನಿಮಾ ಮರು ಬಿಡುಗಡೆ ಆಗಿದೆ. ಸಿನಿಮಾವನ್ನು ಕಿಚ್ಚ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಕೆಜಿ ಹಳ್ಳಿ ಚಿತ್ರಮಂದಿರ ಸೇರಿದಂತೆ ಇನ್ನೂ ಕೆಲವೆಡೆ ಸಿನಿಮಾ ಮರು ಬಿಡುಗಡೆ ಆಗಿದ್ದು, ಅಭಿಮಾನಿಗಳು ಬ್ಯಾನರ್, ಪೋಸ್ಟರ್​ಗಳನ್ನು ಹಾಕಿ ಮರು ಬಿಡುಗಡೆಯನ್ನು ಸಂಭ್ರಮಿಸುತ್ತಿದ್ದಾರೆ. ಇದರ ನಡುವೆ ನಗರದ ಚಿತ್ರಮಂದಿರ ಒಂದರ ಬಳಿ ಸುದೀಪ್ ಅಭಿಮಾನಿಗಳು ಹಾಕಿರುವ ಪೋಸ್ಟರ್ ಒಂದು ಗಮನ ಸೆಳೆಯುತ್ತಿದೆ. ಪೋಸ್ಟರ್​ನಲ್ಲಿ ಸಾಲೊಂದನ್ನು ಬರೆದು ದರ್ಶನ್​ಗೆ ಟಾಂಗ್​ ಕೊಟ್ಟಿದ್ದಾರೆ ಅಭಿಮಾನಿಗಳು.

‘ಹೆಬ್ಬುಲಿ’ ಸಿನಿಮಾದಲ್ಲಿ ಸುದೀಪ್ ಸೈನಿಕನ ಪಾತ್ರದಲ್ಲಿ ನಟಿಸಿರುವುದು ಗೊತ್ತೇ ಇದೆ. ಇದೇ ವಿಷಯವನ್ನು ಇಟ್ಟುಕೊಂಡು, ‘ಐ ಆಮ್ ನಾಟ್ ಎ ಖೈದಿ, ಐ ಆಮ್ ಎ ಸೋಲ್ಡರ್’ (ನಾನು ಖೈದಿ ಅಲ್ಲ, ನಾನು ಸೈನಿಕ) ಎಂಬ ಸಾಲನ್ನು ಬರೆದಿದ್ದಾರೆ. ಆ ಮೂಲಕ ಜೈಲಿನಲ್ಲಿರುವ ಕೈದಿ ನಂಬರ್ 6106, ದರ್ಶನ್​ಗೆ ಟಾಂಗ್ ಕೊಟ್ಟಿದ್ದಾರೆ ಸುದೀಪ್ ಅಭಿಮಾನಿಗಳು. ಸುದೀಪ್ ಅಭಿಮಾನಿಗಳು ಹಾಕಿರುವ ಈ ಪೋಸ್ಟರ್​ನ ಚಿತ್ರ ಹಾಗೂ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ:ಶುರುವಾಯ್ತು ಮರಾಠಿ ಬಿಗ್​ಬಾಸ್ 5, ಸುದೀಪ್ ಆಪ್ತ ನಿರೂಪಕ

ದರ್ಶನ್ ಜೈಲಿಗೆ ಹೋದ ಬಳಿಕ ಸುದೀಪ್ ಆ ಬಗ್ಗೆ ಹೆಚ್ಚಾಗೇನೂ ಮಾತನಾಡಿಲ್ಲ. ಆದರೆ ದರ್ಶನ್ ಅಭಿಮಾನಿಗಳು ಕೆಲವರು ದರ್ಶನ್, ಜೈಲಿಗೆ ಹೋಗಿರುವುದನ್ನು ಸಂಭ್ರಮಿಸುತ್ತಿದ್ದಾರೆ. ಅದೇ ಕಾರಣಕ್ಕೆ ಈಗ ಸುದೀಪ್ ಅಭಿಮಾನಿಗಳು ಹೀಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

‘ಹೆಬ್ಬುಲಿ’ ಸಿನಿಮಾ 2017 ರಲ್ಲಿ ಬಿಡುಗಡೆ ಆಗಿತ್ತು, ಕೃಷ್ಣ ನಿರ್ದೇಶಿಸಿದ್ದ ಈ ಸಿನಿಮಾ ಸೂಪರ್ ಹಿಟ್ ಆಗಿತ್ತು. ಸಿನಿಮಾದಲ್ಲಿ ರವಿಚಂದ್ರನ್ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಸಿನಿಮಾದಲ್ಲಿ ಅಮಲಾ ಪೌಲ್ ನಾಯಕಿಯಾಗಿದ್ದರು. ಸಿನಿಮಾದಲ್ಲಿ ಸುದೀಪ್ ಸೈನಿಕನ ಪಾತ್ರದಲ್ಲಿ ನಟಿಸಿದ್ದರು. ರವಿಚಂದ್ರನ್ ಅವರ ಕೊಲೆಯ ಸೇಡು ತೀರಿಸಿಕೊಳ್ಳುವ ಕತೆಯನ್ನು ಸಿನಿಮಾ ಒಳಗೊಂಡಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ