‘ಹೆಜ್ಜಾರು’ ಸಿನಿಮಾ ರಿಲೀಸ್​ಗೆ ತಯಾರು: ಮೊದಲ ಹಾಡು ಬಿಡುಗಡೆ

|

Updated on: Oct 12, 2023 | 10:30 PM

Hejjaru: ಹರ್ಷಪ್ರಿಯ ನಿರ್ದೇಶನದ ಕುತೂಹಲಕಾರಿ ಕತೆ ಹೊಂದಿರುವ 'ಹೆಜ್ಜಾರು' ಸಿನಿಮಾದ ಮೊದಲ ಹಾಡು ಇದೀಗ ಬಿಡುಗಡೆ ಆಗಿದೆ.

ಹೆಜ್ಜಾರು ಸಿನಿಮಾ ರಿಲೀಸ್​ಗೆ ತಯಾರು: ಮೊದಲ ಹಾಡು ಬಿಡುಗಡೆ
ಹೆಜ್ಜಾರು
Follow us on

ಕನ್ನಡದ ಮೊಟ್ಟ ಮೊದಲ ಪ್ಯಾರಲಲ್ ಸ್ಟೋರಿ ಸಿನಿಮಾ (Cinema) ಎನ್ನಲಾಗುತ್ತಿರುವ ‘ಹೆಜ್ಜಾರು’ (Hejjaru) ಬಿಡುಗಡೆಗೆ ತಯಾರಾಗುತ್ತಿದೆ. ಚಿತ್ರ ತಂಡ ಈಗ ತಮ್ಮ ಸಿನಿಮಾದ ಪ್ರಚಾರ ಕಾರ್ಯ ಪ್ರಾರಂಭ ಮಾಡಿದ್ದು, ಅದರ ಮೊದಲ ಹಂತವಾಗಿ ಸಿನಿಮಾದ ಮೊದಲನೇ ಹಾಡನ್ನು ಬಿಡುಗಡೆಗೊಳಿಸಲಾಗಿದೆ. ‘ಏನೇ ಮಳ್ಳಿ ಸಿಕ್ತೂ ನಿಂಗೆ’ ಎಂಬ ಹಾಡನ್ನು ಬಿಡುಗಡೆ ಮಾಡಲಾಗಿದ್ದು, ಈ ಹಾಡು ಕನ್ನಡದ ಜನಪ್ರಿಯ ಸ್ಯಾಡ್ ಹಾಡುಗಳ ಸಾಲಿಗೆ ಸೇರಲಿದೆ ಎಂಬುದು ಚಿತ್ರತಂಡದ ಭರವಸೆ.

ಸಿನಿಮಾದ ಕತೆ ಬಹಳ ಇಂಟೆನ್ಸ್ ಆಗಿದ್ದು ಅದಕ್ಕೆ ತಕ್ಕಂತೆ ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ ಅವರು ವಿಶೇಷ ರೀತಿಯ ಹಾಡುಗಳನ್ನು ಕಂಪೋಸ್ ಮಾಡಿದ್ದಾರೆ. ಈಗ ಬಿಡುಗಡೆ ಆಗಿರುವ ಹಾಡಿಗಾಗಿ ತಾವು ಪಟ್ಟ ಪರಿಶ್ರಮ ಈಗ ಫಲ ಕೊಟ್ಟಿರುವುದಕ್ಕೆ ಕೇಳುಗರಿಗೆ ಧನ್ಯವಾದ ತಿಳಿಸಿದ್ದಾರೆ ನಿರ್ದೇಶಕ ಹರ್ಷಪ್ರಿಯ ಹೇಳಿದ್ದಾರೆ. ಹಿಟ್ ಹಾಡುಗಳ ಸರದಾರ ಎನಿಸಿಕೊಂಡಿರುವ ವಿಜಯ್ ಪ್ರಕಾಶ್ ಅವರ ಧ್ವನಿ ಈ ಹಾಡಿಗಿದೆ.

ಕಿರುತೆರೆಯ ಸೂಪರ್ ಹಿಟ್ ಧಾರಾವಾಹಿಗಳಾದ ‘ಪುಟ್ಟಗೌರಿ ಮದುವೆ’, ‘ಅಕ್ಕ’, ‘ಗೀತಾ’, ‘ನಾಗಿಣಿ 2’. ‘ರಾಣಿ’, ‘ರಾಮಾಚಾರಿ’ ಮೊದಲಾದ ಯಶಸ್ವಿ ಧಾರಾವಾಹಿಗಳನ್ನು ನಿರ್ಮಾಣ ಮಾಡಿ, ನಿರ್ದೇಶಿನವನ್ನೂ ಮಾಡಿರುವ ಕೆ ಎಸ್ ರಾಮ್ ಜೀ ಈ ಚಿತ್ರವನ್ನು ನಿರ್ಮಿಸಿದ್ದಾರೆ. ‘ಭಜರಂಗಿ ಮೋಹನ್ ಕೊರಿಯಾಗ್ರಫಿ ಈ ಸಿನಿಮಾಕ್ಕಿದ್ದು, ಸಿನಿಮಾದ ಹುಕ್ ಸ್ಟೆಪ್​ಗಳು ಈಗಿನ್ ರೀಲ್ಸ್ ಪ್ರಿಯರಿಗೆ ಬಹಳ ಇಷ್ಟವಾಗುತ್ತವೆ ಎಂಬುದು ಚಿತ್ರತಂಡದ ನಂಬಿಕೆ.

ಇದನ್ನೂ ಓದಿ:ರಾಮ ಮಂದಿರ ಉದ್ಘಾಟನೆಗಾಗಿ ವಿಶೇಷ ಹಾಡುಗಳನ್ನು ರೆಕಾರ್ಡ್ ಮಾಡಿಟ್ಟಿದ್ದ ಲತಾ ಮಂಗೇಶ್ಕರ್

ಮೊದಲ ಬಾರಿ ಹಿರಿತೆರೆಯಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಭಗತ್ ಆಳ್ವಾ ತಮ್ಮ ಮೊದಲ ಚಿತ್ರದಲ್ಲೇ ಇಂತಹದ್ದೊಂದು ಮಾಸ್ ಸಾಂಗಿಗೆ ಹೆಜ್ಜೆ ಹಾಕುವ ಅವಕಾಶ ಸಿಕ್ಕಿದ ಖುಶಿಯಲ್ಲಿದ್ದಾರೆ. ಜನರ ಪ್ರತಿಕ್ರಿಗೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ,, ಖಾಸಗಿ ಪುಟಗಳು ಚಿತ್ರದಿಂದ ಪರಿಚಿತರಾಗಿರುವ ಲಿಯೋನಿಲ್ಲ ಶ್ವೇತಾ ಡಿಸೋಜಾ ಹೆಜ್ಜಾರು ಚಿತ್ರದ ನಾಯಕ ನಟಿಯಾಗಿದ್ದು, ವಿಶಿಷ್ಟ ಪಾತ್ರಕ್ಕೆ ಜೀವತುಂಬಿದ್ದಾರೆ.

ಹತ್ತಾರು ಹಿಟ್ ಧಾರಾವಾಹಿಗಳು ಮತ್ತು ಸಿನೆಮಾಗಳಿಗೆ ಗೀತರಚನಕಾರರಾಗಿ ಕೆಲಸ ಮಾಡಿರುವ ಹರ್ಷಪ್ರಿಯ ಅವರು ‘ಹೆಜ್ಜಾರು’ ಚಿತ್ರದ ಮೂಲಕ ನಿರ್ದೇಶಕರಾಗಿದ್ದು, ಸಿನೆಮಾದ ಎಲ್ಲ ಹಾಡುಗಳನ್ನೂ ಅವರೇ ಬರೆದಿದ್ದಾರೆ. ತಮ್ಮ ಗರಡಿಯಲ್ಲಿ ಪಳಗಿದ ಹರ್ಷಪ್ರಿಯ ಅವರ ಈ ಗೀತೆಯನ್ನು ಮೆಚ್ಚಿರುವ ಪ್ರೇಮಕವಿ ಕಲ್ಯಾಣ್ ತಮ್ಮ ಶಿಶ್ಯನ ಮೊದಲ ಚಿತ್ರಕ್ಕೆ ಶುಭಕೋರಿದ್ದಾರೆ. ಜೊತೆಗೆ ಕನ್ನಡದ ಹಿರಿಯ ನಿರ್ದೇಶಕರುಗಳಾದ ಪ್ರೇಮ್ ಮತ್ತು ಶಶಾಂಕ್ ರವರು ಹಾಡಿನ ಬಗ್ಗೆ ಮೆಚ್ಚುಗೆಯ ಮಾತಾಡಿದ್ದು, ಸಿನೆಮಾ ಬಗ್ಗೆ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಮಿಲಿಯನ್​ಗಟ್ಟಲೆ ವೀಕ್ಷಣೆ ಕಂಡ ‘ಕುದ್ರು’ ಹಾಡುಗಳು; ಏನು ಈ ಸಿನಿಮಾದ ವಿಶೇಷ?

ಚಿತ್ರದ ಕಾನ್ಸೆಪ್ಟ್ ಹೊಸದಾಗಿದ್ದು, ಪೋಸ್ಟರ್,, ಪ್ರೊಮೋಷನಲ್ ಪ್ರೋಮೋಗಳಲ್ಲೂ ಚಿತ್ರತಂಡ ಹೊಸ ಹೊಸ ರೀತಿಯ ಪ್ರಯೋಗ ಮಾಡುತ್ತಿದೆ. ಭರವಸೆಯ ಪೋಷಕ ನಟ ಗೋಪಾಲ್ ದೇಶ್ಪಾಂಡೆ ಪ್ರಮುಖ ಪಾತ್ರದಲ್ಲಿದ್ದಾರೆ. ಮತ್ತು ನಾಯಕ, ನಿರ್ದೇಶಕ ನವೀನ್ ಕ್ರಷ್ಣ ಮೊದಲ ಬಾರಿಗೆ ನೆಗಟಿವ್ ಶೇಡ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅರುಣಾ ಬಾಲರಾಜ್ ಕೂಡ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಖಾಕ ತೊಟ್ಟು ಎಷ್ಟೊಂದು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರೂ ಹೆಜ್ಜಾರು ವಿನ ಪಾತ್ರ ಹೊಸ ಬಗೆಯದು ಅಂತ ನಟ ಮುನಿ ಹೇಳಿಕೊಂಡಿದ್ದಾರೆ, ಕ್ಯಾಮೆರಾ ಹಿಂದೆಯೇ ಬಿಸಿಯಾಗಿದ್ದ ವಿನೋದ್ ಭಾರತಿ ನಿರ್ದೇಶಕರ ಕೋರಿಕೆಗೆ ಒಪ್ಪಿ ಕ್ಯಾಮೆರಾ ಮುಂದೆ ಬಂದಿದ್ದು ಇವರೊಂದಿಗೆ ಬಹಳಷ್ಟು ರಂಗಭೂಮಿಯ ಹೊಸ ಕಲಾವಿದರನ್ನು ಈ ಚಿತ್ರದಲ್ಲಿ ಕಾಣಬಹುದಾಗಿದೆ.

ಈಗಾಗಲೇ ಚಿತ್ರ ಫೂಟೇಜ್ ನೋಡಿರುವವರು ಅಮರ್ ಗೌಡ ಅವರ ಕ್ಯಾಮೆರಾ ಕೈಚಳಕವನ್ನು ಮೆಚ್ಚಿದ್ದು ಮಲೆನಾಡಿನ ಮಳೆಯನ್ನು ಅವರು ಸೆರೆ ಹಿಡಿದಿರುವ ರೀತಿ ನೋಡುಗರಿಗೆ ಖಂಡಿತಾ ಇಷ್ಟವಾಗುತ್ತದೆ ಎನ್ನುತ್ತಿದ್ದಾರೆ. ಚಿತ್ರಕ್ಕೆ ಕಾರ್ತಿಕ್ ಭಟ್ ಸಂಭಾಷಣೆ ಬರೆದಿದ್ದು ನರಸಿಂಹ ಸಾಹಸ ಸಂಯೋಚನೆ ಮಾಡಿದ್ದಾರೆ,, ಗಿರೀಶ್ ಕನಕಪುರ ಚಿತ್ರದ ಎಕ್ಸಿಕ್ಯುಟಿವ್ ಪ್ರೊಡ್ಯೂಸ್ ಆಗುವುದರ ಜೊತೆಗೆ ಕಲಾ ವಿಭಾಗವನ್ನೂ ನಿಭಾಯಿಸಿದ್ದಾರೆ, ಅಜಿತ್ ಡ್ರಾಕುಲಾ ಸಂಕಲನ ಮಾಡಿದ್ದು. ದಯಾನಂದ್ ಸಹ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ