Hema Chaudhary: ಹಿರಿಯ ನಟಿ ಹೇಮಾ ಚೌಧರಿಗೆ ತೀವ್ರ ಅನಾರೋಗ್ಯ; ಐಸಿಯುನಲ್ಲಿ ಚಿಕಿತ್ಸೆ

ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೈನ್ ಹ್ಯಾಮರೇಜ್‌ ಆಗಿತ್ತು. ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ ಅವರನ್ನು ಇಡಲಾಗಿದೆ. ಹೇಮಾ ಅವರ ಮಗ ಐರ್ಲೆಂಡ್​ನಲ್ಲಿ ಇದ್ದಾರೆ. ಅವರ ಆಗಮನಕ್ಕಾಗಿ ಹೇಮಾ ಕಾಯುತ್ತಿದ್ದಾರೆ.

Hema Chaudhary: ಹಿರಿಯ ನಟಿ ಹೇಮಾ ಚೌಧರಿಗೆ ತೀವ್ರ ಅನಾರೋಗ್ಯ; ಐಸಿಯುನಲ್ಲಿ ಚಿಕಿತ್ಸೆ
ಹೇಮಾ
Follow us
Malatesh Jaggin
| Updated By: ರಾಜೇಶ್ ದುಗ್ಗುಮನೆ

Updated on:Dec 20, 2023 | 9:46 AM

ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ (Hema Chaudhary) ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಹೇಮಾ ಚೌಧರಿಗೆ ಬ್ರೇನ್ ಹ್ಯಾಮರೇಜ್ ಆಗಿದೆ ಎಂದು ತಿಳಿದು ಬಂದಿದೆ. ಕನ್ನಡದ ಹಲವು ಸಿನಿಮಾಗಳಲ್ಲಿ ಹೇಮಾ ನಟಿಸಿದ್ದಾರೆ.

ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೈನ್ ಹ್ಯಾಮರೇಜ್‌ ಆಗಿತ್ತು. ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ ಅವರನ್ನು ಇಡಲಾಗಿದೆ. ಹೇಮಾ ಅವರ ಮಗ ಐರ್ಲೆಂಡ್​ನಲ್ಲಿ ಇದ್ದಾರೆ. ಅವರ ಆಗಮನಕ್ಕಾಗಿ ಹೇಮಾ ಕಾಯುತ್ತಿದ್ದಾರೆ. ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ತಿಳಿದು ಬಂದಿದೆ. ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಇತ್ತೀಚೆಗೆ ನಟಿ ಲೀಲಾವತಿ ಅವರು ನಿಧನ ಹೊಂದಿದರು. ಇದು ಕನ್ನಡ ಚಿತ್ರರಂಗಕ್ಕೆ ಆದ ದೊಡ್ಡ ನಷ್ಟ. ಅವರ ಮಗ ವಿನೋದ್ ರಾಜ್​ಗೆ ಇದು ಸಾಕಷ್ಟು ನೋವು ತಂದಿದೆ. ಲೀಲಾವತಿಯವರ 11ನೇ ದಿನದ ಕಾರ್ಯಕ್ಕೆ ಹೇಮಾ ಅವರು ಆಗಮಿಸಿದ್ದರು. ವಿನೋದ್​ ರಾಜ್​ಗೆ ಸಾಂತ್ವನ ಹೇಳಿದ್ದರು. ಈಗ ಅವರಿಗೆ ಏಕಾಏಕಿ ಈ ರೀತಿ ಆಗಿದೆ.

ಇದನ್ನೂ ಓದಿ: ಲೀಲಾವತಿ 11ನೇ ದಿನದ ಕಾರ್ಯದಲ್ಲಿ ತಾಯಿಯ ನೆನೆದು ಭಾವುಕರಾದ ವಿನೋದ್​ ರಾಜ್​

70ರ ದಶಕದಲ್ಲೇ ಹೇಮಾ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಆ ಬಳಿಕ ಅವರು ಹಲವು ಸಿನಿಮಾಗಳಲ್ಲಿ ನಟಿಸಿದರು. ಕನ್ನಡ, ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದಾರೆ. ಧಾರಾವಾಹಿಗಳಲ್ಲೂ ಅವರು ಬಣ್ಣ ಹಚ್ಚಿದ್ದಾರೆ. ‘ಅಮೃತವರ್ಷಿಣಿ’ ಧಾರಾವಾಹಿ ಮೂಲಕ ಲೀಲಾವತಿ ಚೌಧರಿ ಕಿರುತೆರೆ ಲೋಕದಲ್ಲೂ ಮಿಂಚಿದರು. ಈಗ ಅವರಿಗೆ ಅನಾರೋಗ್ಯ ಉಂಟಾಗಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:45 am, Wed, 20 December 23