‘ನನಗೆ ನಿಮ್ಮ ಅವಾರ್ಡ್ ಬೇಕಿಲ್ಲ’; ಪ್ರತಿಷ್ಠಿತ ಪ್ರಶಸ್ತಿ ಬಗ್ಗೆ ಹೇಮಂತ್ ರಾವ್ ಅಸಮಾಧಾನ

‘ಸಪ್ತ ಸಾಗರದಾಚೆ ಎಲ್ಲೋ’, ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಕವಲುದಾರಿ’ ರೀತಿಯ ಸಿನಿಮಾಗಳನ್ನು ನೀಡಿದವರು ಹೇಮಂತ್ ರಾವ್. ಅವರು ಈಗ ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇದರಲ್ಲಿ ಅವರು ಐಫಾ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

‘ನನಗೆ ನಿಮ್ಮ ಅವಾರ್ಡ್ ಬೇಕಿಲ್ಲ’; ಪ್ರತಿಷ್ಠಿತ ಪ್ರಶಸ್ತಿ ಬಗ್ಗೆ ಹೇಮಂತ್ ರಾವ್ ಅಸಮಾಧಾನ
ಹೇಮಂತ್ ರಾವ್
Follow us
ರಾಜೇಶ್ ದುಗ್ಗುಮನೆ
|

Updated on: Sep 30, 2024 | 7:39 AM

‘ಸಪ್ತ ಸಾಗರದಾಚೆ ಎಲ್ಲೋ’ ರೀತಿಯ ಸಿನಿಮಾಗಳನ್ನು ನೀಡಿರೋ ಕನ್ನಡದ ಖ್ಯಾತ ನಿರ್ದೇಶಕ ಹೇಮಂತ್ ರಾವ್ ಅವರು ಐಫಾ 2024ರಲ್ಲಿ ಭಾಗಿ ಆಗಿದ್ದರು. ಇದರ ಸಂಘಟಕರ ವಿರುದ್ಧ ಅವರು ಅಸಮಾಧಾನ ಹೊರಹಾಕಿದ್ದಾರೆ. ಅವರ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ’ ಸಿನಿಮಾ ನಾಮಿನೇಟ್ ಆಗಿತ್ತು. ಆದರೆ, ಇದಕ್ಕೆ ಅವಾರ್ಡ್ ಸಿಕ್ಕಿಲ್ಲ. ಅವರಿಗೆ ಅವಾರ್ಡ್ ಸಿಕ್ಕಿಲ್ಲ ಎಂಬ ಬಗ್ಗೆ ಯಾವುದೇ ಬೇಸರ ಇಲ್ಲ. ಆದರೆ, ಇದನ್ನು ತಿಳಿಯಲು ಅವರು ಸುಖಾಸುಮ್ಮನೆ ಮುಂಜಾನೆ 3 ಗಂಟೆವರೆಗೆ ಕಾಯಬೇಕಾಯಿತು ಎಂದು ಬೇಸರ ಹೊರಹಾಕಿದ್ದಾರೆ.

ಹೇಮಂತ್ ರಾವ್ ಹಾಗೂ ಸಿನಿಮಾದ ಸಂಗೀತ ನಿರ್ದೇಶಕ ಚರಣ್ ರಾಜ್ ಅವರು ಅಬುಧಾಬಿಗೆ ತೆರಳಿದ್ದರು. ಈ ಕಾರ್ಯಕ್ರಮದಲ್ಲಿ ಕೂತು ಅವರು ಫ್ರಸ್ಟ್ರೇಟ್ ಆಗಿದ್ದರು. ಈ ಅವಾರ್ಡ್ ಫಂಕ್ಷನ್​ನಿಂದ ಅವರ ಸಾಕಷ್ಟು ಸಮಯ ವ್ಯರ್ಥವಾಗಿದೆ.

‘ಐಫಾ ಅವಾರ್ಡ್​​ ಅನಾನುಕೂಲತೆಗಳಿಂದ ಕೂಡಿತ್ತು. ನಾನು ಒಂದು ದಶಕಕ್ಕೂ ಹೆಚ್ಚು ಕಾಲ ಇಂಡಸ್ಟ್ರಿಯಲ್ಲಿ ಇದ್ದೇನೆ. ಇದು ನನ್ನ ಮೊದಲ ಅವಾರ್ಡ್ ಫಂಕ್ಷನ್ ಅಲ್ಲ. ಯಾವಾಗಲೂ ವಿಜೇತರನ್ನು ಕಾರ್ಯಕ್ರಮಕ್ಕೆ ಕರೆಸುತ್ತಾರೆ. ಆದರೆ, ನಮಗೆ ಯಾವುದೇ ಪ್ರಶಸ್ತಿ ಇಲ್ಲ ಎಂದು ಅರಿತುಕೊಳ್ಳಲು ನಾನು ಬೆಳಿಗ್ಗೆ 3 ಗಂಟೆಯವರೆಗೆ ಕುಳಿತುಕೊಳ್ಳಬೇಕಾಯಿತು. ನನ್ನ ಸಂಗೀತ ನಿರ್ದೇಶಕ ಚರಣ್ ರಾಜ್ ಅವರಿಗೂ ಅದೇ ಆಯಿತು’ ಎಂದು ಅವರು ಬರೆದುಕೊಂಡಿದ್ದಾರೆ.

‘ಇದು ನಿಮ್ಮ ಪ್ರಶಸ್ತಿ. ನೀವು ಯಾರಿಗೆ ಬೇಕಾದರೂ ಅದನ್ನು ಕೊಡಬುದು. ಅದು ನಿಮ್ಮ ಆಯ್ಕೆ. ನಾನು ಅನೇಕ ಪ್ರಶಸ್ತಿಗಳನ್ನು ಗೆದ್ದಿಲ್ಲ. ಅವುಗಳು ನನ್ನ ನಿದ್ರೆ ಕಸಿದಿಲ್ಲ. ಹೀಗಾಗಿ ಈ ದ್ರಾಕ್ಷಿಗಳು ಹುಳಿಯಾಗಿರುವುದಿಲ್ಲ. ಎಲ್ಲಾ ನಾಮನಿರ್ದೇಶಕರನ್ನು ಕರೆದು ಒಬ್ಬ ವಿನ್ನರ್ ಘೋಷಿಸಿದರೆ ತೊಂದರೆ ಇರುತ್ತಿರಲಿಲ್ಲ. ಆದರೆ, ನಾಮ ನಿರ್ದೇಶಕರನ್ನು ಇವರು ಉಲ್ಲೇಖಿಸಿಯೂ ಇಲ್ಲ’ ಎಂದು ಅವರು ಬೇಸರ ಹೊರಹಾಕಿದ್ದಾರೆ.

ಇದನ್ನೂ ಓದಿ: ಸಿನಿಮಾ ರಂಗಕ್ಕೆ ಬರುವ ಮುನ್ನ ಯಾವ ಯಾವ ಕೆಲಸ ಮಾಡಿದ್ದರು ಹೇಮಂತ್ ರಾವ್

‘ನಿಮ್ಮ ವೇದಿಕೆಯಲ್ಲಿ ನೀವು ಹಾಕುವ ಪ್ರತಿಭೆಯ ಮೇಲೆ ನಿಮ್ಮ ಪ್ರಶಸ್ತಿ ಕಾರ್ಯಕ್ರಮಗಳು ನಡೆಯುತ್ತವೆ. ಬೇರೆ ರೀತಿಯಲ್ಲಿ ಅಲ್ಲ. ವಿಶ್ವದ ಅತ್ಯುತ್ತಮ ಕೆಲಸವನ್ನು ಆನಂದಿಸಲು ನನಗೆ ನಿಮ್ಮ ಪ್ರಶಸ್ತಿಯ ಅಗತ್ಯವಿಲ್ಲ. ಮುಂದಿನ ಬಾರಿ ನಿಮ್ಮ ವೇದಿಕೆಗೆ ನಾನು ಬೇಕಾಗಬಹುದು. ನಿಮ್ಮ ಪ್ರಶಸ್ತಿಯನ್ನು ನೀವೇ ಇಟ್ಟುಕೊಳ್ಳಿ’ ಎಂದು ಅವರು ಸಿಟ್ಟನ್ನು ಹೊರಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ