Actor Darshan: ವಂಚನೆ ಪ್ರಯತ್ನದ ಬಗ್ಗೆ ದರ್ಶನ್ ಹೇಳಿದ್ದೇನು?
ಸಣ್ಣ ಘಟನೆ ನಡೆದಿತ್ತು ಹೀಗಾಗಿ ಎಸಿಪಿ ಕಚೇರಿಗೆ ಬಂದಿದ್ದೆ. ನನಗೆ ಯಾರೂ ಬ್ಲ್ಯಾಕ್ಮೇಲ್ ಮಾಡಿಲ್ಲ. ಪೊಲೀಸರು ಈ ಬಗ್ಗೆ ತನಿಖೆ ಮಾಡುತ್ತಿದ್ದಾರೆ, ಮಾಡಲಿ. ಘಟನೆ ಬಗ್ಗೆ ನನಗೂ ಹೆಚ್ಚಿನ ಮಾಹಿತಿ ಗೊತ್ತಿಲ್ಲ ಎಂದಿದ್ದಾರೆ ದರ್ಶನ್.
ನಟ ದರ್ಶನ್ ಹೆಸರಲ್ಲಿ ವಂಚನೆ ಪ್ರಯತ್ನ ನಡೆದಿರುವ ವಿಚಾರ ಬೆಳಕಿಗೆ ಬಂದಿದೆ. ನಿಮ್ಮ ಗೆಳೆಯರು ದೊಡ್ಡ ಮೊತ್ತ ಸಾಲಕ್ಕೆ ಅರ್ಜಿ ಹಾಕಿದ್ದಾರೆ. ಶ್ಯೂರಿಟಿಯಲ್ಲಿ ನಿಮ್ಮ ಹೆಸರಿದೆ ಎಂದು ನಕಲಿ ಬ್ಯಾಂಕ್ ಸಿಬ್ಬಂದಿ ದರ್ಶನ್ ಬಳಿ ತೆರಳಿದ್ದರು. ಈಗ ಅವರನ್ನು ಬಂಧಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ ಪ್ರತಿಕ್ರಿಯೆ ನೀಡಿದ್ದಾರೆ.
‘ಸಣ್ಣ ಘಟನೆ ನಡೆದಿತ್ತು ಹೀಗಾಗಿ ಎಸಿಪಿ ಕಚೇರಿಗೆ ಬಂದಿದ್ದೆ. ನನಗೆ ಯಾರೂ ಬ್ಲ್ಯಾಕ್ಮೇಲ್ ಮಾಡಿಲ್ಲ. ಪೊಲೀಸರು ಈ ಬಗ್ಗೆ ತನಿಖೆ ಮಾಡುತ್ತಿದ್ದಾರೆ, ಮಾಡಲಿ. ಘಟನೆ ಬಗ್ಗೆ ನನಗೂ ಹೆಚ್ಚಿನ ಮಾಹಿತಿ ಗೊತ್ತಿಲ್ಲ. ಒಂದು ತಿಂಗಳ ಹಿಂದೆ ಘಟನೆ ನಡೆದಿತ್ತು. ಒಂದು ದಾಖಲೆ ಸಿಕ್ಕಿದೆ ಬನ್ನಿ ಎಂದು ಪೊಲೀಸರು ಹೇಳಿದ್ದರು. ತನಿಖೆ ಬಳಿಕ ಎಲ್ಲಾ ಮಾಹಿತಿಯನ್ನು ನೀಡುತ್ತೇನೆ. ತನಿಖೆ ನಡೆಯುತ್ತಿದೆ, ಪ್ರಕರಣದಲ್ಲಿ ಯಾರೇ ಇದ್ರೂ ಬಿಡಲ್ಲ’ ಎಂದು ದರ್ಶನ್ ಹೇಳಿದ್ದಾರೆ.
ಇದನ್ನೂ ಓದಿ: ‘ಇದರಲ್ಲಿ ಯಾರೇ ಇದ್ರೂ ಬಿಡಲ್ಲ‘; ವಂಚನೆ ಪ್ರಯತ್ನದ ಬಗ್ಗೆ ದರ್ಶನ್ ಎಚ್ಚರಿಕೆ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
