Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಈ ಸ್ಟಾರ್ ನಟರ ಜೊತೆ ನಟಿಸೋಕೆ ನೋ ಎಂದಿದ್ದ ರಶ್ಮಿಕಾ ಮಂದಣ್ಣ; ನಟಿಗೆ ಈ ಬಗ್ಗೆ ಇದೆ ವಿಷಾದ?

ರಶ್ಮಿಕಾ ಹಲವು ಸೂಪರ್ ಸ್ಟಾರ್ ಜೊತೆಗಿನ ಸಿನಿಮಾಗಳನ್ನು ರಿಜೆಕ್ಟ್ ಮಾಡಿದ್ದಾರೆ. ಅವರು ರಿಜೆಕ್ಟ್ ಮಾಡಿದ ಸಿನಿಮಾಗಳ ಬಗ್ಗೆ ಇಲ್ಲಿದೆ ವಿವರ.

Rashmika Mandanna: ಈ ಸ್ಟಾರ್ ನಟರ ಜೊತೆ ನಟಿಸೋಕೆ ನೋ ಎಂದಿದ್ದ ರಶ್ಮಿಕಾ ಮಂದಣ್ಣ; ನಟಿಗೆ ಈ ಬಗ್ಗೆ ಇದೆ ವಿಷಾದ?
ರಶ್ಮಿಕಾ-ವಿಜಯ್-ಶಾಹಿದ್-ರಾಮ್ ಚರಣ್
Follow us
ರಾಜೇಶ್ ದುಗ್ಗುಮನೆ
|

Updated on: Apr 07, 2023 | 11:03 AM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಕೇವಲ 27ನೇ ವಯಸ್ಸಿಗೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ರಶ್ಮಿಕಾ ಮಂದಣ್ಣ ಅವರ ಈ ಯಶಸ್ಸಿಗೆ ಕಾರಣ ಸಿನಿಮಾ ಆಯ್ಕೆ. ಅವರು ಚಿತ್ರಗಳ ಆಯ್ಕೆಯಲ್ಲಿ ಸಖತ್ ಚ್ಯೂಸಿ. ಸಿಕ್ಕ ಸಿನಿಮಾಗಳೆಲ್ಲವನ್ನೂ ಅವರು ಒಪ್ಪಿಕೊಳ್ಳುವುದಿಲ್ಲ. ರಶ್ಮಿಕಾ ಹಲವು ಸೂಪರ್ ಸ್ಟಾರ್ ಜೊತೆಗಿನ ಸಿನಿಮಾಗಳನ್ನು ರಿಜೆಕ್ಟ್ ಮಾಡಿದ್ದಾರೆ. ಆ ಬಗ್ಗೆ ಅವರಿಗೆ ಬೇಸರ ಇಲ್ಲ. ರಶ್ಮಿಕಾ ರಿಜೆಕ್ಟ್ ಮಾಡಿದ ಸಿನಿಮಾಗಳ ಬಗ್ಗೆ ಇಲ್ಲಿದೆ ವಿವರ.

ಶಾಹಿದ್ ಕಪೂರ್

ಶಾಹಿದ್ ಕಪೂರ್ ನಟನೆಯ ‘ಜೆರ್ಸಿ’ ಸಿನಿಮಾ ಕಳೆದ ವರ್ಷ ತೆರೆಗೆ ಬಂತು. ಇದು ತೆಲುಗು ಸಿನಿಮಾದ ಹಿಂದಿ ರಿಮೇಕ್. ಈ ಚಿತ್ರದಲ್ಲಿ ನಟಿಸೋಕೆ ರಶ್ಮಿಕಾಗೆ ಆಫರ್ ನೀಡಲಾಯಿತು. ಆದರೆ, ಇದನ್ನು ಅವರು ಒಪ್ಪಿಲ್ಲ. ಈ ಸಿನಿಮಾ ಹೀನಾಯವಾಗಿ ಸೋತಿತು.

ರಾಮ್ ಚರಣ್

ರಾಮ್ ಚರಣ್ ನಟನೆಯ 15ನೇ ಸಿನಿಮಾಗೆ ‘ಗೇಮ್ ಚೇಂಜರ್’ ಎನ್ನುವ ಶೀರ್ಷಿಕೆ ಇಡಲಾಗಿದೆ. ಈ ಚಿತ್ರಕ್ಕೆ ರಶ್ಮಿಕಾ ಅವರನ್ನು ನಾಯಕಿಯನ್ನಾಗಿ ಮಾಡಿಕೊಳ್ಳಬೇಕು ಎಂಬುದು ನಿರ್ಮಾಪಕ ದಿಲ್ ರಾಜು ಅವರ ಆಲೋಚನೆ ಆಗಿತ್ತು. ಆದರೆ, ಸಿನಿಮಾನ ರಶ್ಮಿಕಾ ಒಪ್ಪಿಕೊಂಡಿಲ್ಲ. ಈ ಚಿತ್ರಕ್ಕೆ ಈಗ ಕಿಯಾರಾ ಅಡ್ವಾಣಿ ನಾಯಕಿ.

ಕಿರಿಕ್ ಪಾರ್ಟಿ

ಕನ್ನಡದಲ್ಲಿ ಯಶಸ್ಸು ಕಂಡ ‘ಕಿರಿಕ್ ಪಾರ್ಟಿ’ ಹಿಂದಿಗೆ ರಿಮೇಕ್ ಆಗುತ್ತಿದೆ. ಇದರಲ್ಲಿ ನಟಿಸೋಕೆ ರಶ್ಮಿಕಾಗೆ ಆಫರ್ ನೀಡಲಾಯಿತು. ಆದರೆ, ಇದನ್ನು ಅವರು ರಿಜೆಕ್ಟ್ ಮಾಡಿದರು. ಕಾರಣಾಂತರಗಳಿಂದ ಸಿನಿಮಾ ಕೆಲಸ ವಿಳಂಬ ಆಗಿದೆ.

ಇದನ್ನೂ ಓದಿ: ಯಶ್ ಜೊತೆ ಸಿನಿಮಾ ಮಾಡಲಿದ್ದಾರೆ ತೆಲುಗಿನ ಖ್ಯಾತ ನಿರ್ಮಾಪಕ​; ವಿಷಯ ಖಚಿತಪಡಿಸಿದ ದಿಲ್ ರಾಜು

ದಳಪತಿ ವಿಜಯ್

ದಳಪತಿ ವಿಜಯ್ ಜೊತೆ ನಟಿಸಬೇಕು ಎಂಬುದು ರಶ್ಮಿಕಾ ಮಂದಣ್ಣ ಅವರ ಕನಸಾಗಿತ್ತು. ‘ಮಾಸ್ಟರ್’ ಸಿನಿಮಾದಲ್ಲಿ ನಟಿಸೊಕೆ ರಶ್ಮಿಕಾಗೆ ಆಫರ್ ನೀಡಲಾಯಿತು. ಆದರೆ, ಅದನ್ನು ರಿಜೆಕ್ಟ್ ಮಾಡಿದರು. ‘ವಾರಿಸು’ ಸಿನಿಮಾದಲ್ಲಿ ವಿಜಯ್ ಹಾಗೂ ರಶ್ಮಿಕಾ ಒಟ್ಟಾಗಿ ನಟಿಸಿದ್ದಾರೆ.

ಸಂಜಯ್ ಲೀಲಾ ಬನ್ಸಾಲಿ

ಸಂಜಯ್ ಲೀಲಾ ಬನ್ಸಾಲಿ ಅವರು ಬಾಲಿವುಡ್​ನ ಖ್ಯಾತ ನಿರ್ದೇಶಕ. ಅವರು ನೀಡಿದ್ದೆಲ್ಲವೂ ಹಿಟ್ ಸಿನಿಮಾಗಳೇ. ಇವರ ಜೊತೆ ಕೆಲಸ ಮಾಡಬೇಕು ಎಂಬುದು ಅನೇಕರ ಆಸೆ. ಆದರೆ, ಎಲ್ಲರಿಗೂ ಈ ಅವಕಾಶ ಸಿಗೋದಿಲ್ಲ. ಆದರೆ, ರಶ್ಮಿಕಾ ಮಂದಣ್ಣ ಅವರು ಈ ಅವಕಾಶವನ್ನು ಕೈಚೆಲ್ಲಿದ್ದರು. ಸಂಜಯ್ ಲೀಲಾ ಬನ್ಸಾಲಿ ಕಚೇರಿಯಲ್ಲಿ ರಶ್ಮಿಕಾ ಕಾಣಿಸಿಕೊಂಡಿದ್ದರು. ಇವರು ಒಟ್ಟಾಗಿ ಸಿನಿಮಾ ಮಾಡುತ್ತಾರೆ ಎನ್ನಲಾಯಿತು. ಆದರೆ ಈ ವಿಚಾರದಲ್ಲಿ ಯಾವುದೇ ಬೆಳವಣಿಗೆ ಆಗಿಲ್ಲ. ರಶ್ಮಿಕಾ ಈ ಆಫರ್ ರಿಜೆಕ್ಟ್ ಮಾಡಿದ್ದೇಕೆ ಎಂಬುದು ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್