ಯಶ್ ಬರ್ತ್​ಡೇ ಏಕೆ ಆಚರಿಸಿಕೊಳ್ಳಲಿಲ್ಲ; ಕೊನೆಗೂ ಮೌನ ಮುರಿದ ರಾಕಿಂಗ್ ಸ್ಟಾರ್

ಕೆಲ ಫ್ಯಾನ್ಸ್ ಯಶ್​ ಹುಟ್ಟುಹಬ್ಬ ಆಚರಿಸಲು ಮುಂದಾಗಿದ್ದರು. ಈ ದಿನ ಅಭಿಮಾನಿಗಳ ಪಾಲಿಗೆ ಹಾಗೂ ಯಶ್ ಪಾಲಿಗೆ ಕರಾಳ ದಿನ ಆಯಿತು. ಮೂವರು ಯಶ್ ಫ್ಯಾನ್ಸ್ ಮೃತಪಟ್ಟರು. ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದ ಯಶ್ ಅವರು ಬರ್ತ್​ಡೇ ಆಚರಿಸಿಕೊಳ್ಳದಿರಲು ಕಾರಣ ಏನು ಎಂಬ ಬಗ್ಗೆ ಮಾತನಾಡಿದ್ದಾರೆ.

ಯಶ್ ಬರ್ತ್​ಡೇ ಏಕೆ ಆಚರಿಸಿಕೊಳ್ಳಲಿಲ್ಲ; ಕೊನೆಗೂ ಮೌನ ಮುರಿದ ರಾಕಿಂಗ್ ಸ್ಟಾರ್
ಯಶ್
Follow us
ರಾಜೇಶ್ ದುಗ್ಗುಮನೆ
|

Updated on: Jan 09, 2024 | 7:09 AM

ಸೆಲೆಬ್ರಿಟಿಗಳ ಬರ್ತ್​ಡೇ ಬಂತು ಎಂದರೆ ಅಭಿಮಾನಿಗಳಿಗೆ ಹಬ್ಬ. ಅದರಲ್ಲಂತೂ ನೆಚ್ಚಿನ ನಟ/ನಟಿ ತಮ್ಮ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡರೆ ಅಭಿಮಾನಿಗಳ ಖುಷಿ ದ್ವಿಗುಣವಾಗುತ್ತದೆ. ಜನವರಿ 8 ಯಶ್ (Yash) ಅವರ ಬರ್ತ್​ಡೇ. ಈ ವಿಶೇಷ ದಿನವನ್ನು ಯಶ್ ಅಭಿಮಾನಿಗಳ ಜೊತೆ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದರು. ಇದಕ್ಕೆ ಪ್ರಮುಖ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ಯಶ್ ಬರ್ತ್​ಡೇ ಬ್ಯಾನರ್ ಹಾಕಲು ಹೋದ ಗದಗ ಜಿಲ್ಲೆಯ ಸೊರಣಗಿ ಗ್ರಾಮದ ಹನುಮಂತ ಹರಿಜನ, ಮುರಳಿ ನಡವಿನಮನಿ ಮತ್ತು ನವೀನ್ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದರು. ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಹೋದ ಯಶ್ ಈ ಬಗ್ಗೆ ಮಾತನಾಡಿದ್ದಾರೆ.

ಇತ್ತೀಚೆಗೆ ಟ್ವೀಟ್ ಮಾಡಿದ್ದ ಯಶ್ ಅವರು ‘ಸಿನಿಮಾ ಕೆಲಸಗಳು ಇವೆ. ಅನಿವಾರ್ಯವಾಗಿ ಪ್ರಯಾಣ ಮಾಡಬೇಕಿರುವುದರಿಂದ ಬರ್ತ್​ಡೇ ಆಚರಿಸಿಕೊಳ್ಳುತ್ತಿಲ್ಲ’ ಎಂದು ಹೇಳಿದ್ದರು. ಆದರೂ ಕೆಲ ಫ್ಯಾನ್ಸ್ ಯಶ್​ ಹುಟ್ಟುಹಬ್ಬ ಆಚರಿಸಲು ಮುಂದಾಗಿದ್ದರು. ಈ ದಿನ ಅಭಿಮಾನಿಗಳ ಪಾಲಿಗೆ ಹಾಗೂ ಯಶ್ ಪಾಲಿಗೆ ಕರಾಳ ದಿನ ಆಯಿತು. ಮೂವರು ಯಶ್ ಫ್ಯಾನ್ಸ್ ಮೃತಪಟ್ಟರು. ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದ ಯಶ್ ಅವರು ಬರ್ತ್​ಡೇ ಆಚರಿಸಿಕೊಳ್ಳದಿರಲು ಕಾರಣ ಏನು ಎಂಬ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ‘ಅಷ್ಟು ಇಷ್ಟು ಅಂತ ಹೇಳಿಲ್ಲ’: ಯಶ್​ ಕೊಟ್ಟ ಭರವಸೆ ಬಗ್ಗೆ ಮೃತರ ಕುಟುಂಬದವರ ಮಾತು

‘ಎರಡು ವಾರದ ಹಿಂದೆ ಕೊವಿಡ್​ ಎಂದು ಶುರು ಮಾಡಿದರು. ನಮ್ಮ ಬರ್ತ್​ಡೇಯಿಂದ ಯಾರಿಗೂ ತೊಂದರೆ ಆಗಬಾರದು ಎಂಬ ಕಾರಣಕ್ಕೆ ನಾನು ಈ ವರ್ಷ ಎಲ್ಲರ ಜೊತೆ ಹುಟ್ಟುಹಬ್ಬ ಆಚರಣೆ ಬೇಡ ಎಂದು ನಿರ್ಧರಿಸಿದ್ದೆ’ ಎಂದಿದ್ದಾರೆ ಯಶ್. ರಾಕಿಂಗ್ ಸ್ಟಾರ್ ಬರ್ತ್​ಡೇ ಆಚರಿಸಿಕೊಳ್ಳದೇ ಇರಲು ಒಂದು ಮುಖ್ಯ ಕಾರಣ ಇತ್ತು. ಆದರೆ, ಯಾರೂ ಊಹಿಸದ ಘಟನೆ ನಡೆದಿದ್ದರಿಂದ ಯಶ್ ಸಾಕಷ್ಟು ನೊಂದುಕೊಂಡಿದ್ದಾರೆ.

ಯಾವುದೇ ಸೆಲೆಬ್ರಿಟಿ ಅಭಿಮಾನಿಗಳ ಜೊತೆ ಬರ್ತ್​ಡೇ ಆಚರಿಸಿಕೊಳ್ಳುವುದಿಲ್ಲ ಎಂದರೆ ಅಭಿಮಾನಿಗಳಿಗೆ ಬೇಸರ ಆಗುತ್ತದೆ. ಈ ಬಾರಿ ಯಶ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದಾಗಲೂ ಫ್ಯಾನ್ಸ್ ಬೇಸರ ಮಾಡಿಕೊಂಡಿದ್ದರು. ಈಗ ನಡೆದಿರುವ ಅವಘಡದಿಂದ ಯಶ್ ಅವರಿಗೆ ಹಾಗೂ ಅಭಿಮಾನಿಗಳಲ್ಲಿ ದುಃಖ ಮಡುಗಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್