AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೇ ಪ್ರಭು’ ಸಿನಿಮಾದ ಮೋಟಿವೇಷನಲ್ ಹಾಡು ಬಿಡುಗಡೆ; ವೆಂಕಟ್ ಭಾರದ್ವಾಜ್ ನಿರ್ದೇಶನ

ಟಿಪ್ಸ್ ಕನ್ನಡ ಯೂಟ್ಯೂಬ್ ಚಾನೆಲ್ ಮೂಲಕ ‘ಎದ್ದೇಳೋ ಈಗ..’ ಹಾಡನ್ನು ಬಿಡುಗಡೆ ಮಾಡಲಾಗಿದೆ. ‘ಹೇ ಪ್ರಭು’ ಸಿನಿಮಾದ ಈ ಹಾಡಿಗೆ ಡ್ಯಾನಿ ಆಂಡರ್ಸನ್ ಸಂಗೀತ ನೀಡಿದ್ದಾರೆ. ತೇಜಸ್ವಿ ಹರಿದಾಸ್ ಹಾಡಿದ್ದಾರೆ. ಅರಸು ಅಂತಾರೆ ಅವರು ಸಾಹಿತ್ಯ ಬರೆದಿದ್ದಾರೆ. ಸಿನಿಮಾದ ಕಥೆಯ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

‘ಹೇ ಪ್ರಭು’ ಸಿನಿಮಾದ ಮೋಟಿವೇಷನಲ್ ಹಾಡು ಬಿಡುಗಡೆ; ವೆಂಕಟ್ ಭಾರದ್ವಾಜ್ ನಿರ್ದೇಶನ
Hey Prabhu Movie Poster
ಮದನ್​ ಕುಮಾರ್​
|

Updated on: Oct 24, 2025 | 4:26 PM

Share

ನಿರ್ದೇಶಕ ವೆಂಕಟ್ ಭಾರದ್ವಾಜ್ (Venkat Bharadwaj) ಅವರು ‘ಹೇ ಪ್ರಭು’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಈ ಚಿತ್ರದಿಂದ ಮೊದಲ ಹಾಡನ್ನು ಬಿಡುಗಡೆ ಮಾಡಲಾಗಿದೆ. ‘ಎದ್ದೇಳೋ ಈಗ..’ ಎಂಬ ಈ ಹಾಡಿನಲ್ಲಿ ಸ್ಫೂರ್ತಿದಾಯಕ ಸಾಲುಗಳು ಇವೆ. ತೇಜಸ್ವಿ ಹರಿದಾಸ್ ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ. ಆತ್ಮವಿಶ್ವಾಸ ಮತ್ತು ಹೋರಾಟದ ಮನೋಭಾವವನ್ನು ಈ ಹಾಡು ಪ್ರತಿಬಿಂಬಿಸುತ್ತದೆ ಎಂದು ‘ಹೇ ಪ್ರಭು’ (Hey Prabhu) ಚಿತ್ರತಂಡ ಹೇಳಿದೆ. ಅರಸು ಅಂತಾರೆ ಅವರು ‘ಎದ್ದೇಳೋ ಈಗ..’ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಡ್ಯಾನಿ ಆಂಡರ್ಸನ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

‘ಹೇ ಪ್ರಭು’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದಲ್ಲಿ ಜಯವರ್ಧನ್, ಸಂಹಿತಾ ವಿನ್ಯ, ಗಜಾನನ ಹೆಗ್ಡೆ, ಯಮುನಾ ಶ್ರೀನಿಧಿ, ಲಕ್ಷ್ಮಣ ಶಿವಶಂಕರ, ಡಾ. ಪ್ರಮೊದ್, ಹರಿ ಧನಂಜಯ ಮುಂತಾದ ಕಲಾವಿದರು ಅಭಿನಯಿಸಿದ್ದಾರೆ. ‘ಅಮೃತ ಫಿಲ್ಮ್ ಸೆಂಟರ್’ ಮತ್ತು ‘24 ರೀಲ್ಸ್’ ಸಂಸ್ಥೆಗಳ ಜೊತೆಯಾಗಿ ಈ ಸಿನಿಮಾ ನಿರ್ಮಾಣ ಮಾಡಿವೆ.

ಡಾ. ಸುಧಾಕರ್ ಶೆಟ್ಟಿ ಅವರು ‘ಹೇ ಪ್ರಭು’ ಸಿನಿಮಾವನ್ನು ಪ್ರಸ್ತುತಪಡಿಸಿದ್ದಾರೆ. ನೈಜ ಘಟನೆಯ ಆಧಾರಿಸಿ ಈ ಸಿನಿಮಾ ಸಿದ್ಧವಾಗಿದೆ. ಒಂದು ಜಾಗತಿಕ ಸಮಸ್ಯೆಯ ಕುರಿತು ಈ ಸಿನಿಮಾ ಬೆಳಕು ಚೆಲ್ಲಿದೆ. ಔಷಧ ಕಂಪನಿಗಳ ನಿಯಂತ್ರಣರಹಿತ ಪ್ರಭಾವ ಮತ್ತು ಲಾಲಸೆ ಬಗ್ಗೆ ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಇತ್ತೀಚಿಗೆ ಚರ್ಚೆಗೆ ಬಂದ ಮಕ್ಕಳ ಕೆಮ್ಮಿನ ಸಿರಪ್ ವಿವಾದದ ಹಿನ್ನೆಲೆಯಲ್ಲಿ ಈ ಸಿನಿಮಾ ಪ್ರಸ್ತುತ ಎನಿಸುಕೊಳ್ಳುತ್ತದೆ ಎಂದು ಚಿತ್ರತಂಡ ಹೇಳಿದೆ.

ಶಮೀಕ್ ವಿ. ಭರದ್ವಾಜ ಅವರು ಸಂಕಲನ ಮಾಡಿದ್ದಾರೆ. ಲಕ್ಷ್ಮಣ್ ಶಿವಶಂಕರ್, ಪ್ರವೀಣ್, ವೆಂಕಟ್ ಭಾರದ್ವಾಜ್ ಅವರು ಸಂಭಾಷಣೆ ಬರೆದಿದ್ದಾರೆ. ಪ್ರಮೋದ್ ಭಾರತೀಯ ಅವರು ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸಿದ್ದಾರೆ. ಲಾರೆನ್ಸ್ ಪ್ರೀತಮ್ ರವರ ಸಹ ನಿರ್ದೇಶನ ಈ ಸಿನಿಮಾಗಿದೆ. ‘ಈ ಚಿತ್ರವು ಭಾರತದ ಜನರ ಪರವಾಗಿ ಮಾತನಾಡುತ್ತದೆ’ ಎಂದು ನಿರ್ದೇಶಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು