AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನ್ವೀರ್​ಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್​; ತನಿಖೆಗೆ ಮಧ್ಯಂತರ ತಡೆ

ನಟ ಧನ್ವೀರ್ ವಿರುದ್ಧ ರಾಜಾಜಿನಗರ ಹಾಗೂ ಬಸವೇಶ್ವರನಗರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎಫ್‌ಐಆರ್ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ದೂರಿನಲ್ಲಿ ನಿರ್ದಿಷ್ಟ ವಿವರಗಳಿಲ್ಲ ಎಂಬ ವಾದವನ್ನು ಪುರಸ್ಕರಿಸಿರುವ ನ್ಯಾಯಾಲಯ, ಚಾಮರಾಜಪೇಟೆ ಪ್ರಕರಣದ ತಡೆಯಾಜ್ಞೆಯನ್ನು ಮುಂದುವರಿಸಿ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿದೆ. ಆ ಬಗ್ಗೆ ಇಲ್ಲಿದೆ ವಿವರ.

ಧನ್ವೀರ್​ಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್​; ತನಿಖೆಗೆ ಮಧ್ಯಂತರ ತಡೆ
ಧನ್ವೀರ್
ರಾಜೇಶ್ ದುಗ್ಗುಮನೆ
|

Updated on:Nov 17, 2026 | 9:57 AM

Share

ಮುಖ್ಯಾಂಶಗಳು

  • ನಟ ಧನ್ವೀರ್‌ಗೆ ರಿಲೀಫ್
  • ಎಫ್‌ಐಆರ್ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ
  • ದೂರಿನಲ್ಲಿ ನಿರ್ದಿಷ್ಟ ವಿವರಗಳಿಲ್ಲ

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ದರ್ಶನ್ ಜೈಲು ಪಾಲಾದ ಬಳಿಕ ಹಲವು ಬೆಳವಣಿಗೆಗಳು ನಡೆದಿವೆ. ಅವರ ಆಪ್ತ ಎನಿಸಿಕೊಂಡಿದ್ದ ಧನ್ವೀರ್ ವಿರುದ್ಧವೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಲವು ಆರೋಪ ಮಾಡಿದ್ದಾರೆ. ಅಲ್ಲದೆ, ತಮ್ಮನ್ನು ಅವರು ನಿಂದಿಸಿದ್ದಾರೆ ಎಂದು ಆರೋಪಿಸಿ ಮೂರು ಕಡೆಗಳಲ್ಲಿ ದೂರು ದಾಖಲು ಮಾಡಿದ್ದರು. ಈ ಆರೋಪದ ಮೇಲೆ ಅವರ ಮೇಲೆ ಮೂರು ಎಫ್​​ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಟ ಧನ್ವೀರ್ ಗೌಡಗೆ ಹೈಕೋರ್ಟ್ ಅಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.

ಧನ್ವೀರ್ ಅವರು ವಿಚಾರಣೆಗೆ ಹಾಜರಾಗುವಂತೆ ಪೊಲೀಸರ ಕಡೆಯಿಂದ ನೋಟಿಸ್ ಹೋಗಿತ್ತು. ಆದರೆ, ಇದಕ್ಕೆ ಧನ್ವೀರ್ ತಲೆಕೆಡಿಸಿಕೊಂಡಿರಲಿಲ್ಲ. ಈಗ ಅವರು ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿ ಅನಂತ್ ರಮಾನಾಥ್ ಹೆಗ್ಡೆ ಅವರಿದ್ದ ಏಕಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿ ಎಫ್‌ಐಆರ್‌ಗಳ ತನಿಖೆಗೆ ಮಧ್ಯಂತರ ತಡೆ ನೀಡಿದ್ದಾರೆ. ಇದರಿಂದ ಧನ್ವೀರ್ ಕೊಂಚ ರಿಲೀಫ್ ಆಗಿದ್ದಾರೆ.

ವಿಚಾರಣೆ ವೇಳೆ ಧನ್ವೀರ್ ಪರ ಹಿರಿಯ ವಕೀಲ ಫಣೀಂದ್ರ ವಾದ ಮಂಡಿಸಿ, ‘ದೂರಿನಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆಯೇ ಹೊರತು, ನಿರ್ದಿಷ್ಟವಾಗಿ ಯಾವ ಮಹಿಳೆಗೆ ನಿಂದನೆ ಮಾಡಲಾಗಿದೆ ಎಂಬುದನ್ನು ಎಲ್ಲಿಯೂ ಉಲ್ಲೇಖಿಸಿಲ್ಲ ಎಂದು ತಿಳಿಸಿದರು. ಅವಾಚ್ಯ ಶಬ್ದಗಳ ಬಳಕೆಯಿಂದ ಸಾರ್ವಜನಿಕ ಶಾಂತಿಗೆ ಯಾವುದೇ ಧಕ್ಕೆಯಾಗಿಲ್ಲ’ ಎಂದು ವಾದಿಸಿದರು, ಈ ಎಲ್ಲಾ ಕಾರಣಗಳನ್ನು ಆಧರಿಸಿ ಪ್ರಕರಣದ ತನಿಖೆಗೆ ತಡೆ ನೀಡುವಂತೆ ಕೋರಿದರು. ಆದರೆ, ಪ್ರತಿವಾದಿ ವಕೀಲರು ತಡೆಕೊಡದಂತೆ ಕೋರಿದರು.

ಇದನ್ನೂ ಓದಿ: ದರ್ಶನ್​ಗೆ ಹೆಚ್ಚಿದ ಬೆನ್ನು ನೋವು; ಜೈಲಿನಲ್ಲೇ ಫಿಸಿಯೋಥೆರಪಿ ಆರಂಭ

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಅನಂತ್ ರಮಾನಾಥ್ ಹೆಗ್ಡೆ , ರಾಜಾಜಿನಗರ ಹಾಗೂ ಬಸವೇಶ್ವರನಗರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದರು. ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಈ ಹಿಂದೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಮುಂದುವರಿಸುವಂತೆ ಆದೇಶಿಸಿದರು. ಪ್ರಕರಣಕ್ಕೆ ಸಂಬಂಧಿಸಿದ ಆಡಿಯೋ ದಾಖಲೆಗಳನ್ನು ಕೋರ್ಟ್​ ಮುಂದೆ ಹಾಜರುಪಡಿಸುವಂತೆ ಆದೇಶಿಸಿ, ವಿಚಾರಣೆಯನ್ನು ನವೆಂಬರ್ 21ಕ್ಕೆ ಮುಂದೂಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:54 am, Tue, 17 November 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸೆಂಟ್ರಲ್ ಜೈಲಿನ ಬಳಿ ನಿಷಿದ್ಧ ವಸ್ತುಗಳು: ಕೈದಿಗಳಿಗೆ ತಲುಪಿಸುವ ಯತ್ನ ವಿಫಲ
ಸೆಂಟ್ರಲ್ ಜೈಲಿನ ಬಳಿ ನಿಷಿದ್ಧ ವಸ್ತುಗಳು: ಕೈದಿಗಳಿಗೆ ತಲುಪಿಸುವ ಯತ್ನ ವಿಫಲ
ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ ಹಾಗೂ ಅಪವಾದಗಳಿಂದ ಮುಕ್ತಿ
ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ ಹಾಗೂ ಅಪವಾದಗಳಿಂದ ಮುಕ್ತಿ
ಧರ್ಮಸ್ಥಳಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಕುಟುಂಬಕ್ಕೆ ಪೂರ್ಣಕುಂಭ ಸ್ವಾಗತ
ಧರ್ಮಸ್ಥಳಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಕುಟುಂಬಕ್ಕೆ ಪೂರ್ಣಕುಂಭ ಸ್ವಾಗತ
ಒಂದೇ ಪ್ರಕರಣ, ಎರಡು FIR: ಮೈಸೂರಿನಲ್ಲಿ ಎರಡು ಕೋಮಿನ ಮಧ್ಯೆ ನಡೆದಿದ್ದೇನು?
ಒಂದೇ ಪ್ರಕರಣ, ಎರಡು FIR: ಮೈಸೂರಿನಲ್ಲಿ ಎರಡು ಕೋಮಿನ ಮಧ್ಯೆ ನಡೆದಿದ್ದೇನು?
ಬಿಗ್ ಬಾಸ್ ಟಾಪ್ 5 ಯಾರು? ಗೆಲ್ಲೋದು ಯಾರು? ಭವಿಷ್ಯ ನುಡಿದ ಸೋನಿಕಾ
ಬಿಗ್ ಬಾಸ್ ಟಾಪ್ 5 ಯಾರು? ಗೆಲ್ಲೋದು ಯಾರು? ಭವಿಷ್ಯ ನುಡಿದ ಸೋನಿಕಾ
ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಎಲ್ಲಾ ಆನೆಗಳನ್ನ ಓಡಿಸುತ್ತೇವೆ ಎಂದ ಸಚಿವ
ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಎಲ್ಲಾ ಆನೆಗಳನ್ನ ಓಡಿಸುತ್ತೇವೆ ಎಂದ ಸಚಿವ
ಪ್ರತಿಭಟನೆಕಾರರ ನಡವಳಿಕೆಗೆ ಹಾಸನ ಡಿಸಿ ಬೇಸರ
ಪ್ರತಿಭಟನೆಕಾರರ ನಡವಳಿಕೆಗೆ ಹಾಸನ ಡಿಸಿ ಬೇಸರ
ಸ್ಟಿಂಗ್ ಆಪರೇಷನ್ ಕೇಸ್​: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್
ಸ್ಟಿಂಗ್ ಆಪರೇಷನ್ ಕೇಸ್​: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮದ್ಯ ಮಾರಾಟ ನಿಷೇಧ
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮದ್ಯ ಮಾರಾಟ ನಿಷೇಧ