ನಿಖಿಲ್ ಮದುವೆ: ಸರ್ಕಾರದ ವಾದಕ್ಕೆ ಕೋರ್ಟ್ ಗರಂ, ಮತ್ತೆ ವರದಿಗೆ ಸೂಚನೆ
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಮದುವೆಗೆ ರಾಜ್ಯ ಸರ್ಕಾರ ಅನುಮತಿ ನೀಡಿರುವುದಕ್ಕೆ ಹೈಕೋರ್ಟ್ ಅಚ್ಚರಿಪಟ್ಟಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದರ ಬಗ್ಗೆ ಸರ್ಕಾರದ ಸಮರ್ಥನೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಒಪ್ಪಿಲ್ಲ. ಕೇಂದ್ರ ಸರ್ಕಾರ ಲಾಕ್ಡೌನ್ ಅವಧಿಯಲ್ಲಿ ಸಮಾರಂಭಗಳನ್ನು ನಿರ್ಬಂಧಿಸಿತ್ತು. ಜನಸಾಮಾನ್ಯರಿಗೆ ಸಮಾರಂಭ ನಡೆಸಲು ಅನುಮತಿ ನೀಡಿಲ್ಲ. ಹೀಗಿದ್ದಾಗ ಮದುವೆ ಕಾರ್ಯಕ್ರಮಗಳಿಗೆ ಜಿಲ್ಲಾಧಿಕಾರಿ ಅನುಮತಿ ನೀಡಬಹುದೇ? ಈ ಬಗ್ಗೆ ಸರ್ಕಾರದ ನಿಲುವು ತಿಳಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಏಪ್ರಿಲ್ 17ರಂದು ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಹೆಚ್ಡಿಕೆ […]
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಮದುವೆಗೆ ರಾಜ್ಯ ಸರ್ಕಾರ ಅನುಮತಿ ನೀಡಿರುವುದಕ್ಕೆ ಹೈಕೋರ್ಟ್ ಅಚ್ಚರಿಪಟ್ಟಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದರ ಬಗ್ಗೆ ಸರ್ಕಾರದ ಸಮರ್ಥನೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಒಪ್ಪಿಲ್ಲ.
ಕೇಂದ್ರ ಸರ್ಕಾರ ಲಾಕ್ಡೌನ್ ಅವಧಿಯಲ್ಲಿ ಸಮಾರಂಭಗಳನ್ನು ನಿರ್ಬಂಧಿಸಿತ್ತು. ಜನಸಾಮಾನ್ಯರಿಗೆ ಸಮಾರಂಭ ನಡೆಸಲು ಅನುಮತಿ ನೀಡಿಲ್ಲ. ಹೀಗಿದ್ದಾಗ ಮದುವೆ ಕಾರ್ಯಕ್ರಮಗಳಿಗೆ ಜಿಲ್ಲಾಧಿಕಾರಿ ಅನುಮತಿ ನೀಡಬಹುದೇ? ಈ ಬಗ್ಗೆ ಸರ್ಕಾರದ ನಿಲುವು ತಿಳಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.
ಏಪ್ರಿಲ್ 17ರಂದು ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಹೆಚ್ಡಿಕೆ ತೋಟದ ಮನೆಯಲ್ಲಿ ನಿಖಿಲ್ ಮದುವೆ ನಡೆದಿತ್ತು. ಮದುವೆ ಸಮಾರಂಭಕ್ಕೆ ಎಷ್ಟು ವಾಹನಗಳಿಗೆ ಪಾಸ್ ನೀಡಲಾಗಿತ್ತು? ಈ ಬಗ್ಗೆಯೂ ಮಾಹಿತಿ ನೀಡುವಂತೆ ಹೈಕೋರ್ಟ್ ಸೂಚಿಸಿದೆ.
Published On - 5:15 pm, Tue, 5 May 20